ಅವಿಭಕ್ತ ಕುಟುಂಬಗಳಿಂದ ಉತ್ತಮ ಸಂಸ್ಕಾರ
Team Udayavani, Dec 11, 2017, 3:03 PM IST
ಕಂಪ್ಲಿ: ಅವಿಭಕ್ತ ಕುಟುಂಬಗಳು ಕ್ಷೀಣಿಸುತ್ತಿರುವುದಿಂದ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿಗಳು ನಶಿಸುತ್ತಿದ್ದು, ಅವಿಭಕ್ತಕುಟುಂಬಗಳಿಗೆ ಒತ್ತು ನೀಡಬೇಕು ಎಂದು ಗ್ರಾಪಂ ಉಪಾಧ್ಯಕ್ಷ ಎಂ.ಎಸ್. ಗುರುಮೂರ್ತಿ ಹೇಳಿದರು.
ಹೊಸದರೋಜಿ ಗ್ರಾಮದ ಸ್ವಾಮಿವಿವೇಕಾನಂದ ವಿದ್ಯಾಸಂಸ್ಥೆಯ ಶಾಲೆಯಲ್ಲಿ ಆಯೋಜಿಸಿದ್ದ ಅಜ್ಜ ಅಜ್ಜಿಯಂದಿತರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ದಿನದಿಂದ ದಿನಕ್ಕೆ ಅವಿಭಕ್ತ ಕುಟುಂಬಗಳು ಕಡಿಮೆ ಆಗುತ್ತಿರುವುದರಿಂದ ಮಾನವೀಯ ಸಂಬಂಧಗಳು ಕುಸಿತವಾಗುತ್ತಿವೆ ಎಂದರು. ದಲಿತ ಪ್ಯಾಂಥರ್ ಆಫ್ ಇಂಡಿಯಾದ ಬಳ್ಳಾರಿ ಜಿಲ್ಲಾಧ್ಯಕ್ಷ ನಾಗರಾಜ ಬೋವಿ ಮಾತನಾಡಿ, ಅವಿಭಕ್ತ ಕುಟುಂಬಗಳು ಇದ್ದರೆ ಅದರಿಂದ ಮನೆಯಲ್ಲಿಯನ ಮಕ್ಕಳಿಗೆ, ಮೊಮ್ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುತ್ತದೆ. ಮನೆಯ ಹಿರಿಯರು ತಮ್ಮ ಅನುಭವ, ಪುರಾಣ, ರಾಮಾಯಣ, ಮಹಾಭಾರತದ ನೀತಿ ಕಥೆಗಳನ್ನು ಹೇಳುವ ಮೂಲಕ ಮಕ್ಕಳಲ್ಲಿ ಉತ್ತಮ ಗುಣಗಳನ್ನು ಕಲಿಸುತ್ತಾರೆ. ಜೊತೆಗೆ ಶಿಸ್ತನ್ನು, ಹಿರಿಯರನ್ನು, ಕಿರಿಯರನ್ನು ಗೌರವಿಸುವ ಆದರ್ಶ ಗುಣಗಳನ್ನು ಕಲಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅವಿಭಕ್ತ ಕುಟುಂಬಗಳ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೊಸದರೋಜಿ ಗ್ರಾಪಂ ಅಧ್ಯಕ್ಷೆ ಎನ್. ಪಲ್ಲವಿ, ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿರುವ ಇಂದಿನ ಸಂದಿಗ್ಧ ಸಮಯದಲ್ಲಿ ಮಕ್ಕಳು ಒಂಟಿತನವನ್ನು ಅನುಭವಿಸುತ್ತಿದ್ದಾರೆ ಎಂದು ವಿಷಾದಿಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರು ಹಾಗೂ ಶಾಲೆಯ ಮುಖ್ಯಶಿಕ್ಷಕ ಜಿ. ನಾಗರಾಜ ಮಾತನಾಡಿ, ಕಾರ್ಯಕ್ರಮದ ಉದ್ದೇಶ, ವಿದ್ಯಾರ್ಥಿಗಳಿಗೆ ಅವಿಭಕ್ತ ಕುಟುಂಬದ ಪ್ರಾಮುಖ್ಯತೆ ಕುರಿತು ವಿವರಿಸಿದರು.
ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು, ವಿದ್ಯಾರ್ಥಿಗಳು, ಪಾಲಕರು, ಪೋಷಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.