ಸರ್ಕಾರಿ ಶಾಲೆ ಮೇಲ್ಛಾವಣಿ ಶಿಥಿಲ!
Team Udayavani, Jul 17, 2021, 10:28 AM IST
ಹರಪನಹಳ್ಳಿ: ಸರ್ಕಾರಿ ಶಾಲೆ ಮೇಲ್ಛಾವಣಿ ಶಿಥಿಲಗೊಂಡು ಕುಸಿಯುವ ಹಂತಕ್ಕೆ ಬಂದು ತಲುಪಿದೆ.
ತಾಲೂಕಿನ ಅರೇಮಜ್ಜಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ ಪ್ರಸ್ತುತ 100ಕ್ಕೂ ಹೆಚ್ಚು ಮಕ್ಕಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಮುಖ್ಯ ಶಿಕ್ಷಕ ಸೇರಿ ಮೂವರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿ ಒಟ್ಟು 5 ಕೊಠಡಿಗಳಿದ್ದು, ಅದರಲ್ಲಿ 3 ಕೊಠಡಿಗಳು ಯೋಗ್ಯಕ್ಕೆ ಬಾರದಷ್ಟು ಹದಗೆಟ್ಟು ಹೋಗಿವೆ. ಇನ್ನುಳಿದ 2 ಕೊಠಡಿಯಲ್ಲಿಒಂದನ್ನು ಮುಖ್ಯ ಶಿಕ್ಷಕರು ಬಳಸಿಕೊಂಡರೆ ಉಳಿದ ಇನ್ನೊಂದು ಕೊಠಡಿಯಲ್ಲಿ 100ಕ್ಕೂಹೆಚ್ಚು ಮಕ್ಕಳು ಒಂದೇ ಕೊಠಡಿಯಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
ಇರೋ 2 ಕೊಠಡಿಗಳು ಶಿಥಿಲಗೊಂಡಿದ್ದು, ಯಾವ ಸಮಯದಲ್ಲಿ ಮೇಲ್ಛಾವಣಿ ಕುಸಿದು ಬೀಳಲಿದೆಯೋ ಎಂಬ ಪರಿಸ್ಥಿತಿಯಲ್ಲಿ ಶಾಲೆ ಶಿಕ್ಷಕರು ಮತ್ತು ಮಕ್ಕಳು ಜೀವ ಬಿಗಿಹಿಡಿದುಕೊಂಡು ಶಾಲೆ ಪ್ರಾರಂಭಿಸಬೇಕಿದೆ. ಇದರಿಂದ ನೂತನ ಮಕ್ಕಳನ್ನು ದಾಖಲಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಈ ಗ್ರಾಮದ ಬಡವರ್ಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಭೀತಿ ಎದುರಾಗಿದೆ.
ಸರ್ಕಾರಗಳು ಶಿಕ್ಷಣ ಇಲಾಖೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು, ಹಲವುಸೌಲಭ್ಯ ಕಲ್ಪಿಸಿದರೂ ಸಹ ಕೆಲ ಸರ್ಕಾರಿ ಶಾಲೆಗಳು ಮೂಲಸೌಲಭ್ಯದಿಂದ ವಂಚಿತವಾಗಿ ಗುಣಮಟ್ಟಶಿಕ್ಷಣಕ್ಕೆ ಅಡ್ಡಿಯಾಗಿವೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಗೆ ಹೆಚ್ಚಾಗಿ ಬಡವರು, ಹಿಂದುಳಿದ ಎಸ್‌ಸಿ-ಎಸ್‌ಟಿ ಮಕ್ಕಳೇ ದಾಖಲಾತಿಯಲ್ಲಿ ಮುಂದಿದ್ದು, ಸರ್ಕಾರ ಎಲ್ಲ ರೀತಿಯ ಮೂಲಭೂತಸೌರ್ಕರ್ಯಗಳನ್ನು ಒದಗಿಸಿ ಅವರ ಕೈ ಹಿಡಿಯಬೇಕಿದೆ.
ಶಿಥಿಲಗೊಂಡಿರುವ ಕೊಠಡಿಗಳು: ಶಾಲೆಯ ಮೂರು ಕೊಠಡಿಗಳು ಶಿಥಿಲಗೊಂಡಿದ್ದು ಯಾವ ಸಮಯದಲ್ಲಾದರೂ ಬೀಳುವ ಸ್ಥಿತಿಯಲ್ಲಿವೆ. ಹೀಗಾಗಿ ಶಾಲೆ ಆರಂಭವಾದರೆ ಪೋಷಕರಿಗೆ ಮಕ್ಕಳ ಬಗ್ಗೆ ಚಿಂತೆ ಮಾಡುವಂತಾಗಿದೆ. ಕೂಡಲೇ ಶಿಥಿಲಗೊಂಡಿರುವ ಶಾಲಾ ಕೊಠಡಿಗಳನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕೆಂದು ಪೋಷಕರ ಆಗ್ರಹಿಸಿದ್ದಾರೆ.
ಶಿಥಿಲಗೊಂಡಿರುವ ಅರೆಮಜ್ಜಿಗೆರೆ ಸೇರಿ ತಾಲೂಕಿನ ಎಲ್ಲ ಹಳೆಯ ಕಟ್ಟಡಗಳನ್ನು ಪಟ್ಟಿ ಮಾಡಿ ದುರಸ್ತಿ ಕಾರ್ಯಕ್ಕಾಗಿ ಹಿಂದಿನ ಸಾಲಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಹಣ ಮಂಜೂರಾಗಿ ಬಂದ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು.–ಎಸ್.ಎಂ. ವೀರಭದ್ರಯ್ಯ,ಕ್ಷೇತ್ರ ಶಿಕ್ಷಣಾಧಿಕಾರಿ
ಶಾಲೆ ಕೊಠಡಿಗಳ ದುರಸ್ತಿ ಬಗ್ಗೆ ಪ್ರತಿವರ್ಷ ಇಲಾಖೆ ಗಮನಕ್ಕೆ ತರಲಾಗುತ್ತಿದ್ದು, ಸದ್ಯ ಶಾಲೆಯಲ್ಲಿ 5 ಕೊಠಡಿಗಳಿದ್ದು, ಅದರಲ್ಲಿ 3 ಕೊಠಡಿಗಳ ಮೇಲ್ಛಾವಣಿ ಕುಸಿದು ಬಿಳುತ್ತಿರುವುದರಿಂದ ಶಾಲೆ ಆರಂಭವಾದರೆ ಮಕ್ಕಳನ್ನು ಕೂರಿಸಿ ಪಾಠ ಮಾಡಲು ಭಯವಾಗುತ್ತಿದೆ. ಹಾಗಾಗಿ ಶಿಥಿಲಗೊಂಡಿರುವ ಕೊಠಡಿಗಳನ್ನು ತಕ್ಷಣ ದುರಸ್ತಿಗೊಳಿಸಬೇಕಾಗಿದೆ.– ಕೆ. ಧರ್ಮನಾಯ್ಕ, ಶಿಕ್ಷಕ
ದುರಸ್ತಿಯಲ್ಲಿರುವ ಶಾಲಾ ಕೊಠಡಿಗಳನ್ನು ನೆಲಸಮಗೊಳಿಸಿ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಬೇಕು. ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿರುವ ಶಿಕ್ಷಣ ವ್ಯವಸ್ಥೆ ಸುಗಮಗೊಳಿಸಲು ಮಕ್ಕಳಿಗೆ ಬೇಕಾದ ಮೂಲಸೌಲಭ್ಯ ಒದಗಿಸಬೇಕು.– ಬಿ. ಮಂಜುನಾಥ್, ಶಿಕ್ಷಣ ಪ್ರೇಮಿ
–ದೇವೇಂದ್ರಪ್ಪ ಎಚ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.