ಸರ್ಕಾರದ ನೂರು ದಿನಗಳ ಸಾಧನೆ ಅನಾವರಣ
Team Udayavani, Dec 17, 2019, 2:33 PM IST
ಬಳ್ಳಾರಿ: ಪ್ರಸಕ್ತ ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಬೃಹತ್ ಛಾಯಾಚಿತ್ರ ಪ್ರದರ್ಶನ ನಗರದ ಕೇಂದ್ರ ಬಸ್‌ನಿಲ್ದಾಣದಲ್ಲಿ ಆರಂಭಿಸಲಾಗಿದ್ದು, ರಾಜ್ಯ ಸರ್ಕಾರದ ನೂರು ದಿನಗಳ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನೆ ಸೋಮವಾರ ಅನಾವರಣವಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿದ್ದ ಈ ಛಾಯಾಚಿತ್ರ ಪ್ರದರ್ಶನವನ್ನು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಚಾಲನೆ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಛಾಯಾಚಿತ್ರ ಪ್ರದರ್ಶನದಲ್ಲಿ ಹೈಕ ಭಾಗವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣ, ಗುವಿವಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಧ್ಯಯನ ಪೀಠ ಸ್ಥಾಪನೆ, ಕಲ್ಯಾಣ ಕರ್ನಾಟಕ ಭಾಗದ 21 ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಆದ್ಯತೆ, ಈ ಭಾಗದಲ್ಲಿ ಅಪೌಷ್ಠಿಕತೆ ನಿವಾರಣೆ ಮತ್ತು ಶಿಕ್ಷಣದ ಫಲಿತಾಂಶ ಉತ್ತಮಗೊಳಿಸಲು ಒತ್ತು, ಕಲ್ಯಾಣ ಕರ್ನಾಟಕ ಸಮಗ್ರ ಕಲ್ಯಾಣಕ್ಕೆ ಒತ್ತು ನೀಡಿರುವುದು ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಆದ್ಯತೆ, ಕಲಬುರಗಿಯಲ್ಲಿ ಕೆಎಟಿ ಪ್ರಾರಂಭ, 371(ಜೆ)ಗೆ ಸಂಬಂಧಿಸಿದಂತೆ ವಿಶೇಷ ಕೋಶದ ಶಾಖಾ ಕಚೇರಿ ಕಲಬುರಗಿಯಲ್ಲಿ ಪ್ರಾರಂಭಕ್ಕೆ ನಿರ್ಧಾರ ಸೇರಿದಂತೆ ಇಡೀ ಕಲ್ಯಾಣ ಕರ್ನಾಟಕ ಪರ್ವಕ್ಕೆ ಸರ್ಕಾರ ಒತ್ತು ನೀಡಿರುವ ಛಾಯಾಚಿತ್ರಗಳ ಪ್ರದರ್ಶನ ಗಮನಸೆಳೆದವು.
ಇನ್ನು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಕೊಡುಗೆ (ಕೇಂದ್ರದ ವಾರ್ಷಿಕ 6 ಸಾವಿರ ರೂ. ನೆರವಿನೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 4 ಸಾವಿರ ರೂ.), ರೈತರು ಬೆಳೆಯುವ ಹಸಿರು ಮೇವು ಖರೀದಿ ದರ ಪ್ರತಿ ಟನ್‌ಗೆ 3 ಸಾವಿರ ರೂಗಳಿಂದ 4 ಸಾವಿರಕ್ಕೆ ಹೆಚ್ಚಳ, ಅನ್ನದಾತ ರೈತರ ಹಿತರಕ್ಷಣೆಗೆ ಮೊದಲ ಆದ್ಯತೆ ನೀಡಿರುವ ಬೃಹತ್ ಛಾಯಾಚಿತ್ರ ಫಲಕಗಳ ಪ್ರದರ್ಶನಕ್ಕಿಡಲಾಗಿತ್ತು.
ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿ 1,29,305 ಫಲಾನುಭವಿಗಳಿಗೆ ಚಿಕಿತ್ಸೆಗೆ ಅನುಮೋದನೆ, 197 ಕೋಟಿ ರೂ. ವೆಚ್ಚ, ಇದುವರೆಗೆ 23 ಲಕ್ಷ ಜನರಿಗೆ ಆರೋಗ್ಯ ಕಾರ್ಡ್ ವಿತರಣೆ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, 49 ತಾಲೂಕು ಆಸ್ಪತ್ರೆಗಳಲ್ಲಿ ಪೌಷ್ಠಿಕ ಪುನಶ್ಚೇತನ ಕೇಂದ್ರಗಳ ಸ್ಥಾಪನೆ ಮಾಡಿರುವ ಛಾಯಾಚಿತ್ರಗಳನ್ನು ಸಾರ್ವಜನಿಕರು ಹಾಗೂ ಗಣ್ಯರು ವೀಕ್ಷಿಸಿದರು. ಅಲ್ಪಸಂಖ್ಯಾತ, ಹಿಂದುಳಿದ ವಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಶ್ರೀನಿವಾಸ್ ಮೋತ್ಕರ್, ಕೆಎಂಎಫ್ ನಾಮನಿರ್ದೇಶಿತ ಸದಸ್ಯ ವೀರಶೇಖರರೆಡ್ಡಿ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ, ಅಪರ ಜಿಲ್ಲಾಧಿಕಾರಿ ಎಂ. ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಎನ್‌ಇಕೆಎಸ್ ಆರ್‌ಟಿಸಿ ಚಂದ್ರಶೇಖರ, ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆಯ ಸಹಾಯಕ ನಿರ್ದೇಶಕ ಹೊನ್ನೂರಪ್ಪ, ಕಾರ್ಮಿಕ ನಿರೀಕ್ಷಕ ರವಿದಾಸ್, ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್. ಎನ್. ಶಿವರಾಜ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.