ದಶಕ ಕಳೆದರೂ ದೊರೆಯದ ಆಸರೆ ಮನೆ

ಹಚ್ಚೊಳ್ಳಿ ಗ್ರಾಮದಲ್ಲಿ ಸಮಸ್ಯೆಗಳೇ ಹೆಚ್ಚು ! ಗ್ರಾಮ ವಾಸ್ತವ್ಯದಲ್ಲಿ ಚರ್ಚೆಗೆ ಗ್ರಾಸವಾಗಲಿದೆ ಸಮಸ್ಯೆ

Team Udayavani, Feb 20, 2021, 4:11 PM IST

Hacholi

ಸಿರುಗುಪ್ಪ: ಫೆಬ್ರವರಿ 20ರಂದು ಗ್ರಾಮವಾಸ್ತವ್ಯ ನಡೆಯಲಿರುವ ತಾಲೂಕಿನ ಹಚ್ಚೊಳ್ಳಿ ಗ್ರಾಮ  ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಮತ್ತು ಹಚ್ಚೊಳ್ಳಿ ಗ್ರಾಮದಲ್ಲಿ ಹಲವು ಸಮಸ್ಯೆಗಳು ತಾಂಡವವಾಡುತ್ತಿದ್ದು, ಮುಖ್ಯವಾಗಿ ಕುಡಿಯುವ ನೀರು, ಆಸರೆ ಮನೆ ಹಂಚಿಕೆ ಕಾರ್ಯ ನಡೆಯದಿರುವುದು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಚರ್ಚೆಗೆ ಗ್ರಾಸವಾಗಲಿದೆ.

2009ರ ಸೆಪ್ಟೆಂಬರ್‌ 29ರಿಂದ ಅಕ್ಟೋಬರ್‌ 1ರವರೆಗೆ ಸುರಿದ ಭಾರಿ ಮಳೆಯಿಂದಾಗಿ ಮತ್ತು ತುಂಗಭದ್ರಾ ಜಲಾಶಯದಿಂದ 4ಲಕ್ಷ ಕ್ಯೂಸೆಕ್‌ ನೀರು ಹರಿಯಬಿಟ್ಟಿದ್ದರಿಂದ ಹಚ್ಚೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಟೂರು, ಚಳ್ಳೆಕೂಡೂÉರು, ಹಚ್ಚೊಳ್ಳಿ, ಶ್ರೀಧರಗಡ್ಡೆ, ಹೊನ್ನಾರಹಳ್ಳಿ ಗ್ರಾಮಗಳು ಸಂಪೂರ್ಣವಾಗಿ ಮೂರು ದಿನ ಜಲಾವೃತಗೊಂಡಿದ್ದವು. ಆ ಸಂದರ್ಭದಲ್ಲಿ ಇಡೀ ಗ್ರಾಮಗಳು ಬಿರುಗಾಳಿಗೆ ಸಿಲುಕಿದ ತರಗಲೆಗಳಂತೆ ಇಡೀ ಗ್ರಾಮದ ಮನೆಗಳು ನೆಲಕ್ಕುರುಳಿ ಬಿದ್ದಿದ್ದವು. ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮಾಟೂರು, ಚಳ್ಳೇಕೂಡೂÉರು, ಹಚ್ಚೊಳ್ಳಿ,ಶ್ರೀಧರಗಡ್ಡೆ , ಹೊನ್ನಾರಹಳ್ಳಿ ಮುಂತಾದ ಗ್ರಾಮಗಳನ್ನು ಸ್ಥಳಾಂತರ ಮಾಡಲು ನವಗ್ರಾಮಗಳನ್ನು ನಿರ್ಮಿಸಿಕೊಟ್ಟಿದ್ದು, ಮಾಟೂರು, ಚಳ್ಳೆಕೂಡೂರು ನವಗ್ರಾಮಗಳಲ್ಲಿ ಕಟ್ಟಿರುವ ಆಸರೆ ಮನೆಗಳು ಕಳಪೆಯಾಗಿವೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಆದರೂ ಜನ ಅನಿವಾರ್ಯವಾಗಿ ನವಗ್ರಾಮಗಳಿಗೆ ತೆರಳಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ.

ಈ ಎರಡೂ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ 8 ವರ್ಷದ ಹಿಂದೆ ಕಟ್ಟಿದ ಕೆರೆಗೆ ಒಂದು ಹನಿ ನೀರು ಬಿಟ್ಟಿಲ್ಲ, ಇದರಿಂದಾಗಿ ನದಿ ನೀರೇ ಈ ಜನರಿಗೆ ಗತಿಯಾಗಿದೆ. ಹೊನ್ನಾರಹಳ್ಳಿ, ಶ್ರೀಧರಗಡ್ಡೆ ನವಗ್ರಾಮಗಳಲ್ಲಿ ಜನರು ವಾಸಮಾಡುತ್ತಿದ್ದು, ಇಲ್ಲಿ ಚರಂಡಿ ಮತ್ತು ಸಿಸಿ ರಸ್ತೆ, ಆಸ್ಪತ್ರೆಯ ಮೂಲ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ.  ಹಚ್ಚೊಳ್ಳಿ ನವಗ್ರಾಮದಲ್ಲಿ ಒಂದು ಸಾವಿರ ಮನೆಗಳನ್ನು ಗಣಿ ಕಂಪನಿಗಳ ಮಾಲೀಕರು ಕಟ್ಟಲು ಮುಂದಾಗಿದ್ದು, ಇದರಲ್ಲಿ 500ಕ್ಕೂ ಹೆಚ್ಚು ಮನೆಗಳನ್ನು ವಿ.ಎಸ್‌. ಲಾಡ್‌ ಸನ್ಸ್‌ ಗಣಿಮಾಲೀಕರು ಕಟ್ಟಿ ಕೈತೊಳೆದುಕೊಂಡರು. ಇನ್ನುಳಿದ ಮನೆಗಳನ್ನು ಸರ್ಕಾರವೇ ಕಟ್ಟಿಕೊಡಲಿದೆ ಎಂದು ಕಂದಾಯ ಸಚಿವರಾಗಿದ್ದ ಕರುಣಾಕರರೆಡ್ಡಿ ಭರವಸೆ ನೀಡಿದ್ದರು.

ಜಿಲ್ಲಾಧಿಕಾರಿ ರಾಂಪ್ರಸಾತ್‌ ಮನೋಹರ್‌ ಇಲ್ಲಿ ಮನೆ ಕಟ್ಟುವ ಜವಾಬ್ದಾರಿಯನ್ನು ಕೊಳಚೆ ನಿರ್ಮೂಲನಾ ಮಂಡಳಿಗೆ ನೀಡಿದ್ದರು. ಆದರೆ ನವಗ್ರಾಮದಲ್ಲಿ ಇಲ್ಲಿಯವರೆಗೆ ಎಷ್ಟು ಮನೆಗಳು ನಿರ್ಮಾಣವಾಗಿವೆ ಎನ್ನುವುದರ ಬಗ್ಗೆ ಯಾವುದೇ ಅಧಿಕಾರಿಗಳು ಸ್ಪಷ್ಟವಾದ ಮಾಹಿತಿ ನೀಡುತ್ತಿಲ್ಲ. 2019ರ ಡಿಸೆಂಬರ್‌ ತಿಂಗಳಲ್ಲಿ ನವಗ್ರಾಮದ ಪರಿಶೀಲನೆಗೆ ಬಂದಿದ್ದ ಸಹಾಯಕ ಆಯುಕ್ತ ರಮೇಶ್‌ ಕೋನಾರೆಡ್ಡಿ ನೂರು ಎಕರೆ ಪ್ರದೇಶದಲ್ಲಿ ಸುಮಾರು 1200 ಮನೆಗಳನ್ನು ಕಟ್ಟಲಾಗಿದೆ ಎಂದು ತಿಳಿಸಿದ್ದರು. ಆದರೆ ಮನೆಗಳು ನಿರ್ಮಾಣವಾಗಿ 10ವರ್ಷ ಕಳೆದರೂ ಹಚ್ಚೊಳ್ಳಿ ಗ್ರಾಮಸ್ಥರು ನವಗ್ರಾಮಕ್ಕೆ ತೆರಳಿಲ್ಲ.ನಮಗೆ ಮನೆಯ ಹಕ್ಕುಪತ್ರ ನೀಡಿದರೆ ನವಗ್ರಾಮಕ್ಕೆ ತೆರಳುತ್ತೇವೆಂದು ಗ್ರಾಮಸ್ಥರು ಹೇಳಿದರೆ, ಹಳೇ ಊರಿನ ಮನೆಗಳನ್ನು ಖಾಲಿ ಮಾಡಿದರೆ ಮಾತ್ರ ನವಗ್ರಾಮದಲ್ಲಿ ಮನೆಯ ಹಕ್ಕುಪತ್ರ ನೀಡುತ್ತೇವೆಂದು ಸರ್ಕಾರ ಪಟ್ಟು ಹಿಡಿದುಕುಳಿತಿದ್ದು, ಇಲ್ಲಿನ ಜನರ ಆಸರೆ ಮನೆಯ ದಶಕದ ಕನಸು ಗ್ರಾಮ ವಾಸ್ತವ್ಯದಲ್ಲಿಯದರೂ ಬಗೆ ಹರಿದೀತೆ ಕಾದುನೋಡಬೇಕು.

ಇಂದು ಹಚ್ಚೊಳ್ಳಿಯಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ

ಸಿರುಗುಪ್ಪ: ತಾಲೂಕಿನ ಹಚ್ಚೊಳ್ಳಿ ಗ್ರಾಮದಲ್ಲಿ ಫೆ. 20ರಂದು ತಹಶೀಲ್ದಾರ್‌, ತಾಪಂ ಇಒ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದು ಗ್ರಾಮದಲ್ಲಿರುವ ಸಮಸ್ಯೆಗಳನ್ನು ಅರಿತು ಆ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಗ್ರಾಮದಲ್ಲಿ ಒಂದು ದಿನ ವಾಸ್ತವ್ಯ ಮಾಡಲಿದ್ದಾರೆ. ಗ್ರಾಮ ವಾಸ್ತವ್ಯದ ಬಗ್ಗೆ ಎಲ್ಲ ತಯಾರಿಯನ್ನು ಅಧಿಕಾರಿಗಳು ಮಾಡಿಕೊಂಡಿದ್ದು ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆ ಆವರಣದಲ್ಲಿ ವೇದಿಕೆ ನಿರ್ಮಿಸಲಾಗುತ್ತಿದ್ದು ಸಾರ್ವಜನಿಕರಿಂದ ಬರುವ ಅಹವಾಲುಗಳನ್ನು ಅಧಿಕಾರಿಗಳು ಸ್ವೀಕರಿಸಲಿದ್ದು ರಾತ್ರಿ ಇಲ್ಲಿರುವ ಬಿಸಿಎಂ ಇಲಾಖೆಯ ವಸತಿನಿಲಯದಲ್ಲಿ ತಹಶೀಲ್ದಾರ್‌ ಸೇರಿದಂತೆ ತಾಲೂಕುಮಟ್ಟದ ಎಲ್ಲ ಅಧಿಕಾರಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಹಶೀಲ್ದಾರ್‌ ಎಸ್‌. ಬಿ. ಕೂಡಲಗಿ ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶ ಸಣ್ಣ ಸಣ್ಣ ವಿಚಾರಕ್ಕೂ ಸಾರ್ವಜನಿಕರು ತಾಲೂಕು ಕಚೇರಿಗೆ ಅಲೆದಾಡುವಂತಾಗ  ಬಾರದು ಎನ್ನುವ ಉದ್ದೇಶದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಿದ್ದು, ಆಧಾರ್‌ ಕಾರ್ಡ್‌ ದೋಷ, ಪಡಿತರ ಚೀಟಿ ವ್ಯತ್ಯಾಸ, ಪೌತಿ ಖಾತೆ ಬದಲಾವಣೆ, ಪಹಣಿ ತಿದ್ದುಪಡಿ, ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಾದ ಪಿಂಚಣಿ ಸೌಲಭ್ಯ, ವೃದ್ಧಾಪ್ಯವೇತನ ಸೌಲಭ್ಯಗಳು ಅರ್ಹರಿಗೆ ಸಿಗದೇ ಇದ್ದರೆ ನೀಡುವ ವ್ಯವಸ್ಥೆ ಮಾಡಲಾಗುವುದು. ಪ್ರ

ವಾಹ, ಬರ ಪರಿಹಾರದ ಬಗ್ಗೆಯೂ ಕ್ರಮ ವಹಿಸಲಾಗುತ್ತದೆ. ಸಾರ್ವಜನಿಕರು ಆ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಂದಾಯ ಇಲಾಖೆಯ ವಿವಿಧ ಸೇವೆಗಳು, ಯೋಜನೆಗಳ ದೋಷಗಳನ್ನು ಸರಿಪಡಿಸಿಕೊಳ್ಳಲು, ತಿದ್ದುಪಡಿ ಮಾಡಿಕೊಳ್ಳಲು, ಸೌಲಭ್ಯಗಳನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ. ಗ್ರಾಮ ವಾಸ್ತವ್ಯದ ಸೌಲಭ್ಯವನ್ನು ಸ್ಥಳಿಯರು ಪಡೆದುಕೊಳ್ಳಬೇಕೆಂದು ಹೇಳಿದರು.

ಟಾಪ್ ನ್ಯೂಸ್

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.