ಶಾಸಕ ಭೀಮಾನಾಯ್ಕ್ ಗಲಾಟೆ ಪ್ರಕರಣ : ನ. 11 ರಂದು ಹಗರಿಬೊಮ್ಮನಹಳ್ಳಿ ಬಂದ್ ಗೆ ಬಿಜೆಪಿ ಕರೆ
Team Udayavani, Nov 9, 2020, 12:54 PM IST
ಬಳ್ಳಾರಿ: ಹಗರಿಬೊಮ್ಮನ ಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮತ ಎಣಿಕೆ ಪ್ರಕ್ರಿಯೆ ಸಂದರ್ಭದಲ್ಲಿ ಶಾಸಕ ಭೀಮಾನಾಯ್ಕ್ ಭುಜ ತಟ್ಟಿ ಬಿಜೆಪಿ ಮುಖಂಡರಿಗೆ ಸವಾಲು ಹಾಕಿದ ನಡೆ ಖಂಡಿಸಿ ನವೆಂಬರ್ 11 ರಂದು ಹಗರಿಬೊಮ್ಮನ ಹಳ್ಳಿ ತಾಲ್ಲೂಕು ಬಂದ್ ಗೆ ಬಿಜೆಪಿ ಕರೆ ನೀಡಿದೆ.
ಹಗರಿಬೊಮ್ಮನ ಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮತ ಎಣಿಕೆ ಪ್ರಕ್ರಿಯೆ ಸಂದರ್ಭದಲ್ಲಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದ ವೇಳೆಯಲ್ಲಿ ಶಾಸಕರಾಗಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಬದಲು ಭೀಮನಾಯ್ಕ್ ಭುಜ ತಟ್ಟಿ ಬಿಜೆಪಿ ಮುಖಂಡರಿಗೆ ಸವಾಲು ಹಾಕಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಭೀಮಾನಾಯ್ಕ್ ಬೆಂಬಲಿಸಿ ಭೀಮಾನಾಯ್ಕ್ ಮಗ ಕೂಡ ತಂದೆ ಸಮರ್ಥನೆ ಮಾಡಿ ಪೋಸ್ಟ್ ಹಾಕಿದ್ದರು.
ಶಾಸಕ ಭೀಮಾನಾಯ್ಕ್ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಛೀಮಾರಿ ವಿಡಿಯೋವೊಂದನ್ನು ಕಾಂಗ್ರೆಸ್ ಕಾರ್ಯಕರ್ತರು ವೈರಲ್ ಮಾಡಿದ್ದಾರೆ. ವಿಡಿಯೋದಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಭೀಮ ನಾಯ್ಕ್ ಅವರಿಗೆ “ಬಾ ಲೇ ಭೀಮ” ಎಂದು ಮರು ಸವಾಲು ಹಾಕಿ, ಶಾಸಕ ಭೀಮಾನಾಯ್ಕ್ ರನ್ನು ಏಕವಚನದಲ್ಲಿ ನಿಂದಿಸಿದ್ದಾರೆ.
ಸದ್ಯ ಜಿಲ್ಲೆಯಲ್ಲಿ ಗಲಾಟೆ ಪ್ರಕರಣದ ಕಾವು ಬಿರುಸು ಪಡೆದುಕೊಳ್ಳುತ್ತಿದೆ. ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ನಡೆದಿದ್ದ ಗಲಾಟೆಯಲ್ಲಿ ಶಾಸಕ ಭೀಮ ನಾಯ್ಕ್ ಅವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಸ್ವತಃ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ಶಾಸಕರ ನಡೆ ಖಂಡಿಸಿದ್ದರು. ಇದೀಗ ಬಿಜೆಪಿ ಕಾರ್ಯಕರ್ತರ ವಿಡಿಯೋ ವೈರಲ್ ಆಗಿದ್ದು, ಮತ್ತೆ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಪರಿಸ್ಥಿತಿ ಹದಗೆಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.