ಭಿಕ್ಷೆ ಬೇಡಿ ಹಂಪಿ ಉತ್ಸವ ಆಚರಣೆ:ಮಳೆಯೋಗೀಶ್ವರ ಶಿವಾಚಾರ್ಯ ಶ್ರೀ
Team Udayavani, Dec 2, 2018, 6:05 AM IST
ಹೂವಿನಹಡಗಲಿ: ಬರದ ನೆಪವೊಡ್ಡಿ ವಿಶ್ವವಿಖ್ಯಾತ ಹಂಪಿ ಉತ್ಸವ ರದ್ದುಗೊಳಿಸಿರುವ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಹಣದ ಕೊರತೆ ಕಾಡುತ್ತಿದ್ದರೆ ಭಿಕ್ಷೆ ಬೇಡಿ ಹಣ ಒಗ್ಗೂಡಿಸಿ ನೀಡಲಾಗುವುದು ಎಂದು ಮಾನಿಹಳ್ಳಿ ಪುರವರ್ಗ ಮಠದ ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹಂಪಿ ಉತ್ಸವಕ್ಕಾಗಿ ತಾಲೂಕಿನ ಮಾಗಳ ಗ್ರಾಮದ ಪ್ರಮುಖ ರಸ್ತೆಯಲ್ಲಿ ಶನಿವಾರ ಸಂಚರಿಸಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವವನ್ನು ರದ್ದುಗೊಳಿಸಿರುವ ಮೈತ್ರಿ ಸರ್ಕಾರದ ಕ್ರಮ ಒಪ್ಪುವಂತಹದ್ದಲ್ಲ. ಸರಳ ರೀತಿಯಲ್ಲಾದರೂ ಆಚರಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಹಂಪಿ ಉತ್ಸವ ದೇಶವಷ್ಟೇ ಅಲ್ಲ, ವಿದೇಶಗಳಲ್ಲೂ ಪ್ರಖ್ಯಾತಿ ಪಡೆದಿದೆ. ಬರಗಾಲವಿದೆ ಎಂದು ಹಂಪಿ ಉತ್ಸವ ರದ್ದು ಮಾಡಿರುವ ಸರ್ಕಾರದ ಕ್ರಮ ಸಲ್ಲದು. ಯಾವುದೇ ಕಾರಣಕ್ಕೂ ಉತ್ಸವ ನಿಲ್ಲಿಸಕೂಡದು. ಉತ್ಸವ ಆಚರಣೆಗೆ ಸರ್ಕಾರಕ್ಕೆ ಹಣಕಾಸಿನ ತೊಂದರೆಯಾದರೆ ಭಿಕ್ಷೆ ಬೇಡಿ ಬಂದ ಹಣದಲ್ಲಿ ಉತ್ಸವ ಆಚರಿಸಲಾಗುವುದು. ನನ್ನ ಜೋಳಿಗೆ ದೊಡ್ಡದಿದೆ, ಉತ್ಸವ ನಡೆಸಿ ಎಂದು ಒತ್ತಾಯಿಸಿದರು.
ನಮ್ಮ ಈ ಹೋರಾಟ ಸಾಂಕೇತಿಕವಾಗಿ ನಡೆದಿದೆ. ಸರ್ಕಾರ ನಿರ್ಲಕ್ಷé ವಹಿಸಿದರೆ ಎಲ್ಲ ಸ್ವಾಮೀಜಿಗಳು ಸೇರಿ ಜೋಳಿಗೆಯಿಂದ ಹಣ ನೀಡುತ್ತೇವೆ. ಚಳವಳಿ ತೀವ್ರ ಸ್ವರೂಪ ಪಡೆಯಲಿದೆ ಎಂದರು. ನಂತರ ಜೋಳಿಗೆಯಲ್ಲಿ ಬಂದ 1,708 ರೂ.ಗಳನ್ನು ಮಾಗಳ ಗ್ರಾಮದ ಅಂಚೆ ಕಚೇರಿ ಮೂಲಕ ಜಿಲ್ಲಾಧಿ ಕಾರಿ ಖಾತೆಗೆ ವರ್ಗಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.