ಹಂಪಿ ವಿರೂಪಾಕ್ಷೇಶ್ವರಗೆರೇಷ್ಮೆ ನೂಲಿನ ಅಲಂಕಾರ
Team Udayavani, Aug 27, 2018, 5:48 PM IST
ಹೊಸಪೇಟೆ: ನೂಲು ಹುಣ್ಣಿಮೆ ನಿಮಿತ್ತ ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ಪ್ರತಿಮೆಗೆ ಭಾನುವಾರ ರೇಷ್ಮೆ ನೂಲಿನ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.
ಹಂಪಿ ವಿದ್ಯಾರಣ್ಯ ಪೀಠದ ಪೀಠಾಧಿಪತಿ ಶ್ರೀ ವಿದ್ಯಾರಣ್ಯ ಭಾರತಿ ಶ್ರೀಗಳು, ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ವಿಗ್ರಹಕ್ಕೆ ಅಭಿಷೇಕ ನಡೆಸಿ ನಂತರ ರೇಷ್ಮೆ ನೂಲಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆರ್ಚಕರಿಂದ ಉಪಾಕರ್ಮ ಹೋಮ ನೆರವೇರಿತು. ಪ್ರಧಾನ ಅರ್ಚಕರಾದ ಜೆ.ಎಸ್. ಶ್ರೀನಾಥ ಶರ್ಮಾ, ಮಂಜುನಾಥ, ಪಿ.ಶ್ರೀನಿವಾಸ ಶರ್ಮಾ ಹಾಗೂ ಮುರುಳಿಧರ ಶಾಸ್ತ್ರೀಯವರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ದೇವಾಲಯದ ಪ್ರಾಂಗಣದಲ್ಲಿ ರಜತ ನಂದಿ ವಾಹನ ಉತ್ಸವ ನಡೆಯಿತು.
ನೂಲು ಹುಣ್ಣಿಮೆ ಪ್ರಯುಕ್ತ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಹಂಪಿಗೆ ಭೇಟಿ ನೀಡಿ ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ಹಾಗೂ ಪಂಪಾಂಬಿಕೆ ದೇವಿ ದರ್ಶನ ಪಡೆದು ಹೂವು, ಹಣ್ಣು ಹಾಗೂ ಕಾಣಿಕೆ ಸಲ್ಲಿಸಿದರು.
ವಿರೂಪಾಕ್ಷನಿಗೆ ಐದು ದಿನಗಳ ಕಾಲ ರೇಷ್ಮೆ ನೂಲಿನ ಅಲಂಕಾರ ಮಾಡಲಾಗುತ್ತದೆ. ನಂತರ ದೇವರಿಗೆ ಸಮರ್ಪಿಸಲಾಗಿದ್ದ ರೇಷ್ಮೆ ನೂಲನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಪ್ರಸಾದ ರೂಪದಲ್ಲಿ ಇದನ್ನು ಸ್ವೀಕರಿಸುವ ಭಕ್ತರು ದಾರಗಳನ್ನು ಧರಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.