ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲಾ ವಿಸರ್ಜನೆ


Team Udayavani, Dec 22, 2018, 4:41 PM IST

ray-1.jpg

ಹೊಸಪೇಟೆ: ಕಳೆದ 45 ದಿನಗಳಿಂದ ಆರಂಭಗೊಂಡ ಶ್ರೀ ಹನುಮ ಮಾಲಾ ವ್ರತಾಚರಣೆ ಅತ್ಯಂತ ಶಾಂತಿ ಹಾಗೂ ಸಂಭ್ರಮದಿಂದ ಸಮೀಪದ ವಿಶ್ವಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಂಜನಾದ್ರಿ ಬೆಟ್ಟದಲ್ಲಿ ಶುಕ್ರವಾರ ಹನುಮ ಮಾಲೆ ವಿರ್ಸಜನೆ ಕಾರ್ಯಕ್ರಮ ನಡೆಯಿತು.

ರಾಜ್ಯದ ನಾನಾ ಕಡೆಯಿಂದ ಕೊರೆಯುವ ಚಳಿಯನ್ನು ಲೆಕ್ಕಿಸದೇ ಅಂಜನಾದ್ರಿ ಬೆಟ್ಟದಲ್ಲಿ ಸಹಸ್ರಾರು ಸಂಖ್ಯೆಯಲ್ಲಿಮಾಲಾಧಾರಿಗಳು ವಾಸ್ತವ್ಯ ಹೂಡಿದ್ದರು. ಬೆಳಗ್ಗೆ 4 ಗಂಟೆಗೆ ವಿನಾಯಕ ಅಗ್ನಿಹೋತ್ರಿ ನೇತೃತ್ವದ ತಂಡದ ಸದಸ್ಯರು ಪವಮಾನ ಹೋಮ ಮತ್ತು ಮನ್ಯೂ ಸೂಕ್ತ ಹೋಮ ನೆರವೇರಿಸಲಾಯಿತು.

ಹನುಮ ಮಾಲಾ ಸಮಿತಿ ಜಿಲ್ಲಾಧ್ಯಕ್ಷ ಗುದ್ಲಿ ಪರುಶರಾಮ, ವಿಶ್ವ ಹಿಂದೂ ಪರಿಷತ್‌ನ ಹಿರಿಯ ಮುಖಂಡ ನರಸಿಂಹ ಮೂರ್ತಿ, ಕಾರ್ಯದರ್ಶಿ ದಿನೇಶ್‌ ಪಟೇಲ್‌, ಆನಂದ್‌ ಕೃಷ್ಣ, ಆನೆಗುಂದಿ ಸಂಸ್ಥಾನದ ಕೃಷ್ಣದೇವರಾಯ ಸಮ್ಮುಖದಲ್ಲಿ ಸಾಮೂಹಿಕ ಪೂರ್ಣಾಹುತಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

ಮಾಲೆ ವಿಸರ್ಜನೆ: ಕ್ಷೇತ್ರದಲ್ಲಿ ಪವಮಾನ ಹೋಮ ಸೇರಿದಂತೆ ನಾನಾ ಪೂಜೆಗಳ ಬಳಿಕ ಮಾಲಾಧಾರಿಗಳು ಮಾಲೆಯನ್ನು
ವಿಸರ್ಜನೆ ಮಾಡಿ, ಹನುಮಂತ ದೇವರಲ್ಲಿ ಪ್ರಾರ್ಥಿಸಿದರು. ಬೆಳಗ್ಗೆಯಿಂದ ಪ್ರಾರಂಭಗೊಂಡ ಮಾಲೆ ವಿಸರ್ಜನೆ ಕಾರ್ಯ
ಸಂಜೆಯವರೆಗೆ ನಡೆಯಿತು. ಸುಮಾರು 27 ಸಾವಿರ ಮಾಲಾಧಾರಿಗಳು ಮಾಲೆ ವಿಸರ್ಜನೆ ಮಾಡಿದರು.

ಸಂಜೆಯಾದರೂ ರಾಜ್ಯದ ನಾನಾ ಕಡೆಯಿಂದ ಮಾಲಾಧಾರಿಗಳು ಬೆಟ್ಟಕ್ಕೆ ಆಗಮಿಸುತ್ತಿರುವುದು ಕಂಡು ಬಂತು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ ರಾಜ್ಯ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಹಿರೇಮಠ್…, ವರ್ಷದಿಂದ
ವರ್ಷಕ್ಕೆ ಮಾಲಾಧಾರಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಅದರಲ್ಲೂ ಪ್ರಸಕ್ತ ವರ್ಷ 25 ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳು ಬೆಟ್ಟಕ್ಕೆ
ಆಗಮಿಸಿ, ಭಕ್ತಿ ಸಮರ್ಪಿಸಿದ್ದಾರೆ. ಧಾರ್ಮಿಕ ಮತ್ತು ದತ್ತಿ ಇಲಾಖೆ ಅಧಿಕಾರಿಗಳು ಅತ್ಯಂತ ಕಾಳಜಿ ವಹಿಸಿ, ಮಾಲಾಧಾರಿಗಳಿಗೆ
ಭೋಜನ ವ್ಯವಸ್ಥೆ, ಭಕ್ತರಿಗೆ ದರ್ಶನದ ವ್ಯವಸ್ಥೆ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಅಧಿಕಾರಿಗಳು
ಸ್ಥಳದಲ್ಲಿ ಸೂಕ್ತ ಭದ್ರತೆ ಒದಗಿಸಿ ಮಾಲಾ ವಿಸರ್ಜನೆಗೆ ಅವಕಾಶ ಕಲ್ಪಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. ಈ ವೇಳೆ ವಿಶ್ವ
ಹಿಂದೂ ಪರಿಷತ್‌ ರಾಷ್ಟ್ರೀಯ ಕಾರ್ಯದರ್ಶಿ ಕೇಶವ ಹೆಗಡೆ, ಅಖೀಲ ಭಾರತ ಸಂಘಟನಾ ಕಾರ್ಯದರ್ಶಿ ಮಿಲೀಂದ
ಪರಾಂಡೆ, ಭಜರಂಗ ದಳದ ರಾಷ್ಟ್ರೀಯ ಕಾರ್ಯದರ್ಶಿ ಸೂರ್ಯನಾರಾಯಣ, ವಿಎಚ್‌ಪಿಯ ಆನಂದ್‌ ಕೃಷ್ಣ, ಅನಿಲ್‌ ಜೋಶಿ, ರೇವಣಸಿದ್ದಪ್ಪ, ಸುನೀಲ್‌, ರಮೇಶ್‌, ಗುದ್ಲಿ ಪರುಶರಾಮ್‌, ಬಸವರಾಜ್‌ ನಾಲತ್ವಾಡ್‌, ರಮೇಶ್‌ ಗುಜ್ಜಲ್‌ ಇನ್ನಿತರರಿದ್ದರು.

ಪವಮಾನ ಹೋಮ: ಹಂಪಿಯ ಆನೆಗುಂದಿಯ ಆಂಜನಾದ್ರಿ ಬೆಟ್ಟದಲ್ಲಿ ಶುಕ್ರವಾರ ಪವಮಾನ ಹೋಮ ನಡೆಯಿತು.
ನಗರದ ಹನುಮ ಮಾಲಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪವಮಾನ ಹೋಮದಲ್ಲಿ ಸಹಸ್ರಾರು ಹನುಮ ಮಾಲಾಧಾರಿಗಳು
ಪೂಜೆ ಸಲ್ಲಿಸಿದರು. ಅಪ್ಪರಾವ್‌ ಸಾನಬಾಳ್‌, ಸಂದೀಪ್‌ಸಿಂಗ್‌ , ಗೋವಿಂದ್‌ ಕುಲಕರ್ಣಿ ನೇತೃತ್ವದಲ್ಲಿ ಮಾಲಾಧಾರಿಗಳ
ಮಾಲಾ ವಿಸರ್ಜನಾ ಕಾರ್ಯಕ್ರಮ ಧಾರ್ಮಿಕ ವಿಧಿ-ವಿಧಾನ ನೆರವೇರಿಸಿದ ಬಳಿಕ ಸಂಪನ್ನವಾಯಿತು.
 

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.