ವೇತನ ನೀಡದಿದ್ದರೆ ನೌಕರರ ಆತ್ಮಹತ್ಯೆ ಬೆದರಿಕೆ
Team Udayavani, Jul 9, 2020, 5:45 PM IST
ಹರಪನಹಳ್ಳಿ: ಅರಸೀಕೆರೆ ಗ್ರಾಪಂ ನೌಕರರು ಸಾಮೂಹಿಕ ಆತ್ಮಹತ್ಯೆ ಪತ್ರವನ್ನು ಪ್ರದರ್ಶಿಸಿದರು.
ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮ ಪಂಚಾಯತಿ ನೌಕರರು ಕೂಡಲೇ ವೇತನ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಾಪಂ ಇಒ ಅನಂತರಾಜು ಅವರಿಗೆ ತಿಳಿಸಿದ್ದಾರೆ.
ಪಂಚಾಯ್ತಿಯಲ್ಲಿ ಪಿಡಿಒ ಮತ್ತು ಸಹಾಯಕರನ್ನು ಕೂಡಿ ಹಾಕಿ ದಿನಗೂಲಿ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಇಒ ಅನಂತರಾಜು ಅವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಕೂಡಲೇ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಊರಿನ ಜನರಿಗೆ ಕುಡಿಯಲು ನೀರಿಲ್ಲ. ಇದರಿಂದ ಸಾರ್ವಜನಿಕರಿಗೆ ತುಂಬಾ ಅನಾನೂಕೂಲವಾಗಿದೆ. ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಹುಸೇನ್ ದೌರ್ಜನ್ಯ ಹಾಗೂ ದುರಾಡಳಿತದಿಂದ ಬೇಸತ್ತು ಹೋಗಿದ್ದೇವೆ ಎಂದು ಆಪಾದಿಸಿದ್ದಾರೆ.
ಪಿಡಿಒ ಮತ್ತು ಸಹಾಯಕನನ್ನು ಕೂಡಿ ಹಾಕಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಂಸದ ವೈ.ದೇವೇಂದ್ರಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಒಂದೆರಡು ದಿನಗಳಲ್ಲಿ ಸಿಬ್ಬಂದಿಗೆ ಸಂಬಳ ನೀಡಲು ಮೇಲಧಿಕಾರಿಗೆ ಸೂಚನೆ ನೀಡುತ್ತೇನೆ. ಪ್ರತಿಭಟನೆ ಕೈಬಿಡುವಂತೆ ಮನವೊಲಿಸಿದ್ದರು. ಈ ಸಂದರ್ಭದಲ್ಲಿ ನೌಕರರರಾದ ನಾಗರಾಜ್, ಶಶಿಕುಮಾರ್, ಸುನೀಲ್ ಕುಮಾರ್, ಮಂಜಪ್ಪ, ಕಣುವಪ್ಪ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.