ಅರಸೀಕೆರೆ ಗ್ರಾಪಂ ಮೇಲ್ದರ್ಜೆಗೇರಿಸಲು ಸಿದ್ಧತೆ
Team Udayavani, Jun 6, 2020, 5:08 PM IST
ಹರಪನಹಳ್ಳಿ: ಅರಸೀಕೆರೆ ಗ್ರಾಪಂ ಮೇಲ್ದರ್ಜೆಗೇರಿಸಲು ವರದಿ ನೀಡುವಂತೆ ಸಿಇಒ ಅವರಿಗೆ ಬರೆದಿರುವ ಪತ್ರದ ಪ್ರತಿ
ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮ ಪಂಚಾಯ್ತಿಯನ್ನು ಮೇಲ್ದರ್ಜೆಗೇರಿ ಪಟ್ಟಣ ಪಂಚಾಯ್ತಿ ಮಾಡಲು ಸಿದ್ಧತೆ ನಡೆದಿದ್ದು, ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಉಪ ಕಾರ್ಯದರ್ಶಿ ಅವರು ಜಿ.ಪಂ ಸಿಇಒ ಅವರಿಗೆ ಪತ್ರ ಬರೆದು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993ರ ಪ್ರಕರಣ 4ರಡಿಯಲ್ಲಿ ಪರಿಶೀಲಿಸಿ ಮುಂದಿನ ಕ್ರಮಕ್ಕಾಗಿ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡುವಂತೆ ಸಿಇಒ ಅವರಿಗೆ ಪತ್ರದಲ್ಲಿ ನಿರ್ದೇಶನ ನೀಡಲಾಗಿದೆ. ಅರಸೀಕೆರೆ ಗ್ರಾಪಂ ಒಂದು ಹೋಬಳಿ ಗ್ರಾಮವಾಗಿದ್ದು, ಸುಮಾರು 22 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಪ್ರದೇಶವಾಗಿದೆ. ಈ ಪಂಚಾಯ್ತಿ ವ್ಯಾಪ್ತಿಯಲ್ಲಿ ಪಿಯು ಕಾಲೇಜ್, ಪದವಿ ಕಾಲೇಜು, ಪ್ರೌಢ ಶಾಲೆಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, ಐಟಿಐ ಕಾಲೇಜುಗಳಿವೆ. ಇದಲ್ಲದೇ ಸಮುದಾಯ ಆರೋಗ್ಯ ಕೇಂದ್ರ, ನಾಡ ಕಚೇರಿ, ಆರಕ್ಷಕ ಠಾಣೆ, ಉಪ ತಹಶೀಲ್ದಾರ್ ಕಚೇರಿ, ಪೋಸ್ಟ್ ಆಫೀಸ್, ಕೃಷಿ ಕಚೇರಿ, ಕೆಇಬಿ ಆಫೀಸ್, ಪಶು ಚಿಕಿತ್ಸಾ ಕೇಂದ್ರ, ಕರ್ನಾಟಕ ಗ್ರಾಮೀಣ ಬ್ಯಾಂಕ್, ಕೃಷಿ ಪತ್ತಿನ ಸಹಕಾರ ಸಂಘ, ಬಿಡಿಸಿಸಿ ಬ್ಯಾಂಕ್ ಹೊಂದಿದೆ.
ಪಂಚಗಣಾಧೀಶರಲ್ಲೊಬ್ಬರಾದ ಶ್ರೀ ಕೋಲುಶಾಂತೇಶ್ವರ ಮಠ ಹಾಗೂ ಗ್ರಾಮಕ್ಕೆ ಸುಸಜ್ಜಿತವಾದ ಸಾರಿಗೆ ಸಂಪರ್ಕವಿದ್ದು, ಅತ್ಯಂತ ದೊಡ್ಡ ಗ್ರಾಮವಾಗಿದೆ. ಈಗಾಗಲೇ ಗ್ರಾಮ ಪಂಚಾಯಿತಿನಲ್ಲಿ 16 ಗ್ರಾಪಂ ಸದಸ್ಯರುಗಳಿದ್ದಾರೆ. ಈ ಹಿನ್ನೆಲೆಯಲ್ಲಿ ಅರಸೀಕೆರೆ ಗ್ರಾಮ ಪಂಚಾಯ್ತಿಯನ್ನು ಉನ್ನತೀಕರಿಸಿ ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ ಅವರು ಮನವಿ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.