ಬೆಳೆ ಹಾನಿ: ಜಂಟಿ ಸಮೀಕ್ಷೆಗೆ ಶಾಸಕರ ಸೂಚನೆ
Team Udayavani, Apr 25, 2020, 6:25 PM IST
ಹರಪನಹಳ್ಳಿ: ತುಂಗಭದ್ರಾ ನದಿಪಾತ್ರದ ಗ್ರಾಮಗಳಲ್ಲಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆಯನ್ನು ಶಾಸಕ ಜಿ. ಕರುಣಾಕರರೆಡ್ಡಿ ವೀಕ್ಷಿಸಿದರು.
ಹರಪನಹಳ್ಳಿ: ಈಚೆಗೆ ಸುರಿದ ಅಕಾಲಿಕ ಮಳೆಯಿಂದ ನದಿಪಾತ್ರದ ಗ್ರಾಮಗಳಲ್ಲಿ ಹಾನಿಯಾಗಿರುವ ಬೆಳೆಗಳ ಕುರಿತು ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಶಾಸಕ ಜಿ.ಕರುಣಾಕರರೆಡ್ಡಿ ಸೂಚಿಸಿದರು.
ತಾಲೂಕಿನ ಹಲುವಾಗಲು, ನಿಟ್ಟೂರು, ಕಡತಿ, ನಂದ್ಯಾಲ, ನಿಟ್ಟೂರು ಬಸಾಪುರ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾಗಿರುವ ಬೆಳೆಗಳನ್ನು ವೀಕ್ಷಿಸಿದ ಅವರು, ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಹಲುವಾಗಲು ಮತ್ತು ನಿಟ್ಟೂರು, ಬಸಾಪುರ ಗ್ರಾಮದಲ್ಲಿ ಬಾಳೆ ಮತ್ತು ಎಲೆ ಹಾಗೂ ಈರುಳ್ಳಿ ಬೆಳೆ ಹಾನಿಯಾಗಿದ್ದು ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಕುಂಚೂರು ಗ್ರಾಮದಲ್ಲಿ ಗಾಳಿಗೆ ಮೇಲ್ಛಾವಣೆ ಹಾರಿದ ಮತ್ತು ಮನೆ ಬಿದ್ದ ಎರಡು ಫಲಾನುಭವಿಗಳಿಗೆ ಶಾಸಕರು ಪರಿಹಾರದ ಚೆಕ್ ವಿತರಿಸಿದರು. ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್, ಸಹಾಯಕ ಕೃಷಿ ನಿರ್ದೇಶಕ ಗೊಂದಿ ಮಂಜುನಾಥ, ತೋಟಗಾರಿಕೆ ಇಲಾಖೆಯ ಹಿರಿಯ ನಿರ್ದೇಶಕ ಆರ್. ಜಯಸಿಂಹ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನೆ, ಸಿಪಿಐ ಕೆ. ಕುಮಾರ್, ತಾಪಂ
ಉಪಾಧ್ಯಕ್ಷ ಎಲ್. ಮಂಜ್ಯಾನಾಯ್ಕ, ಸತ್ತೂರು ಹಾಲೇಶ್, ಎಂ.ಪಿ. ನಾಯ್ಕ, ಆರ್.ಲೋಕೇಶ್, ಸಣ್ಣಹಾಲಪ್ಪ, ಬಾಗಳಿ ಕೋಟ್ರಪ್ಪ, ಕರೇಗೌಡ, ಎಂ.ಮಲ್ಲೇಶ್, ಸಹಾಯಕ ಕೃಷಿ ಅಧಿಕಾರಿ ಸಾಲಿಯನ್, ಕೃಷಿ ಅಧಿಕಾರಿ ರಫೀ, ಕಂದಾಯ ನಿರೀಕ್ಷಕ ರಾಜಪ್ಪ, ಹಲುವಾಗಲು ಪಿಎಸ್‌ಐ ಕೃಷ್ಣಪ್ಪ, ರಾಘವೇಂದ್ರಶೆಟ್ಟಿ, ಯು.ಪಿ.ನಾಗರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.