ಆರೋಗ್ಯ ಇಲಾಖೆ ಸಿಬ್ಬಂದಿಗೆ ಆಹಾರ ಕಿಟ್ ವಿತರಣೆ
Team Udayavani, May 21, 2020, 2:40 PM IST
ಹರಪನಹಳ್ಳಿ: ಕೊರೊನಾ ವಾರಿಯರ್ಸ್‌ಗಳಿಗೆ ಎಂ.ಪಿ. ಲತಾ ಮಲ್ಲಿಕಾರ್ಜುನ್ ಆಹಾರ ಕಿಟ್ ಮತ್ತು ಸುರಕ್ಷಾ ಸಾಧನಗಳನ್ನು ವಿತರಿಸಿದರು
ಹರಪನಹಳ್ಳಿ: ದೇಶಕ್ಕೆ ಕಂಠಕವಾಗಿ ಕಾಡುತ್ತಿರುವ ಮಹಾಮಾರಿ ಕೋವಿಡ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಈ ಸೋಂಕು ತಡೆಗಟ್ಟಲು ಅವಿರತವಾಗಿ ಶ್ರಮಿಸುವ ಮೂಲಕ ಮಾನವ ಸಂತತಿ ಉಳಿವಿಗೆ ಹೋರಾಡುತ್ತಿರುವ ಕೋವಿಡ್ ವಾರಿಯರ್ಸ್‌ಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಕೆಪಿಸಿಸಿ ರಾಜ್ಯ ಮಹಿಳಾ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.
ಪಟ್ಟಣದ ಹಳೇ ಸಾರ್ವಜನಿಕರ ಆಸ್ಪತ್ರೆಯಲ್ಲಿ ಮಂಗಳವಾರ ಎಂ.ಪಿ. ರವೀಂದ್ರ ಪ್ರತಿಷ್ಠಾನದಿಂದ ಏರ್ಪಡಿಸಲಾಗಿದ್ದ ಆಶಾ ಕಾರ್ಯ ಕರ್ತೆಯರಿಗೆ ಹಾಗೂ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆಹಾರ ಕಿಟ್ ಮತ್ತು ಸುರಕ್ಷಾ ಸಾಧನಗಳನ್ನು ವಿತರಿಸಿ ಅವರು ಮಾತನಾಡಿದರು. ಕಳೆದ ಒಂದು ವಾರದಿಂದ ಪ್ರತಿಯೊಂದು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ತೆರಳಿ ಅಂಗನವಾಡಿ, ಆಶಾ ಮತ್ತು ಎಎನ್ ಎಂ ಕಾರ್ಯಕರ್ತರಿಗೆ ಲಂಚ್ ಬಾಕ್ಸ್, ಮಾಸ್ಕ್, ಪ್ಯಾಡ್ ವಿತರಿಸಲಾಗುತ್ತಿದೆ. ಕೋವಿಡ್ ವಾರಿಯರ್ಸ್‌ಗಳು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಇವರ ಸೇವೆಯನ್ನು ಪ್ರತಿಯೊಬ್ಬರೂ ಮರೆಯಬಾರದು, ಅವರ ಕರ್ತವ್ಯಕ್ಕೆ ಗೌರವ ಕೊಡುವ ಕೆಲಸವನ್ನು ಮಾಡಬೇಕು. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಭಾರಿ ತಾಲೂಕು ವೈದ್ಯಾಧಿಕಾರಿ ಶಿವಕುಮಾರ್, ಪಟ್ಟಣದ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಟಿ.ಎಚ್. ಎಂ. ಮಂಜುನಾಥ್, ನಿರ್ದೇಶಕ ಎಂ.ವಿ. ಕೃಷ್ಣ, ಮತ್ತೂರು ಮುಖಂಡರಾದ ಅಡವಿಹಳ್ಳಿ ದಕ್ಷಿಣಮೂರ್ತಿ, ಡಿ. ರಾಜಕುಮಾರ್, ಮಟ್ಟೇರ ಮುತ್ತಣ್ಣ, ಓ.ಮಹಾಂತೇಶ್, ಉದಯಶಂಕರ್, ಮತ್ತೂರು ಬಸವರಾಜ್, ರಾಜು ಪೂಜಾರ್, ರಾಯದುರ್ಗ ವಾಗೇಶ್, ಕವಿತಾ ಸುರೇಶ್, ಉಮಾಮಹೇಶ್ವರಿ, ಎನ್.ಶಂಕರ್, ಆನಂದ, ಟಿ.ಗುರು, ವಿಕ್ರಂ, ರವಿಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.