ಹರಪನಹಳ್ಳಿ: ನಾಲ್ವರಿಗೆ ಪಾಸಿಟಿವ್
Team Udayavani, Jul 26, 2020, 10:43 AM IST
ಹರಪನಹಳ್ಳಿ: ಪಟ್ಟಣದ ಕಂದಾಯ ವಿಭಾಗ ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ, ಕೆಎಸ್ ಆರ್‌ಟಿಸಿ ಸಿಬ್ಬಂದಿ ಸೇರಿದಂತೆ ಶನಿವಾರ ತಾಲೂಕಿನಲ್ಲಿ 4 ಕೋವಿಡ್ ಪಾಸಿಟಿವ್ ವರದಿ ಬಂದಿವೆ. ಗೌರಿಹಳ್ಳಿ ಗ್ರಾಮದ 48 ವರ್ಷದ ಪುರುಷ ಆಟೋ ಖರೀದಿಗಾಗಿ ದಾವಣಗೆರೆ ನಗರಕ್ಕೆ ಹೋಗಿ ಬಂದಿದ್ದು ಜು.17ರಂದು ಗಂಟಲು ದ್ರವ ಪರೀಕ್ಷೆಗೆ ನೀಡಿದ್ದು ಶನಿವಾರ ಪಾಸಿಟಿವ್ ವರದಿ ಬಂದಿದೆ.
ಈತನಿಗೆ 11 ಪ್ರಾಥಮಿಕ ಸಂಪರ್ಕ ಗುರುತಿಸಲಾಗಿದೆ. ಶುಕ್ರವಾರ ಸಂಜೆ ಗೋವೇರಹಳ್ಳಿಯಲ್ಲಿ ನಡೆದ ಮುಖ್ಯ ಪೇದೆ ಅಂತ್ಯಕ್ರಿಯೆಯಲ್ಲಿಯೂ ಈತನು ಭಾಗವಹಿಸಿದ್ದು ಹರಪನಹಳ್ಳಿ ಠಾಣೆಯ ಇಬ್ಬರು ಎಎಸ್‌ಐ ಅವರನ್ನು ಪ್ರಾಥಮಿಕ ಸಂಪರ್ಕದಲ್ಲಿ ಗುರುತಿಸಲಾಗಿದೆ. ಹರಪನಹಳ್ಳಿ ಪಟ್ಟಣದ ಗುಡೆಕಟ್ಟೆಕೇರಿಯ 37 ವರ್ಷದ ಪುರುಷ ದಾವಣಗೆರೆ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದು ಇವರಿಗೆ ಶನಿವಾರ ಕೋವಿಡ್ ದೃಢಪಟ್ಟಿದೆ. ಇವರಿಗೆ 6 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ.
ಪಟ್ಟಣದ ಚಿತ್ತಾರಗೇರಿ 20 ವರ್ಷದ ಯುವಕನಿಗೆ ಕೋವಿಡ್ ದೃಢವಾಗಿದ್ದು, ಈತನು ದಾವಣಗೆರೆಗೆ ಹೋಗಿ ಬಂದಿದ್ದು 1 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. ಪಟ್ಟಣದ ಕುರುಬರಗೇರಿಯ 40 ವರ್ಷದ ಪುರುಷನಿಗೆ ಕೋವಿಡ್ ದೃಢವಾಗಿದ್ದು ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇವರು ಜು. 24ರಂದು ನಡೆದ ಸ್ನೇಹಿತನ ಜನ್ಮದಿನದ ಸಮಾರಂಭದಲ್ಲಿ ಭಾಗವಹಿಸಿದ್ದು ಕಾರ್ಯಕ್ರಮದಲ್ಲಿ ಭಾಗವಹಿಸಿದ 10 ಜನ ಸ್ನೇಹಿತರು ಮತ್ತು ಕುಟುಂಬದವರು ಸೇರಿ ಒಟ್ಟು 14 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.