ಲಕ್ಷ್ಮೀಪುರ ಶೌಚಾಲಯ ಮುಕ್ತ
Team Udayavani, Jul 5, 2020, 1:00 PM IST
ಹರಪನಹಳ್ಳಿ: ಅಧಿಕಾರಾವಧಿ ಮುಕ್ತಾಯಗೊಂಡ ಲಕ್ಷ್ಮೀಪುರ ಗ್ರಾಪಂ ಆಡಳಿತ ಮಂಡಳಿ ಸಿಬ್ಬಂದಿಗಳನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಹರಪನಹಳ್ಳಿ: ಐದು ವರ್ಷದ ಅವಧಿಯಲ್ಲಿ ಎಲ್ಲರ ಸಹಕಾರದಿಂದ ಗುಡಿಸಲು ಮುಕ್ತ ಮತ್ತು ಬಯಲು ಶೌಚ ಮುಕ್ತ ಗ್ರಾಮ ಪಂಚಾಯ್ತಿ ಮಾಡಲಾಗಿದೆ ಎಂದು ಲಕ್ಷ್ಮೀಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಪಿ.ಟಿ.ಭರತ್ ತಿಳಿಸಿದರು.
ತಾಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಹಾಲಿ ಆಡಳಿತ ಮಂಡಳಿ ಅಧಿಕಾರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 5 ವರ್ಷದ ಅವಧಿಯಲ್ಲಿ ನೂತನವಾಗಿ ರಚನೆಗೊಂಡಿದ್ದ ಗ್ರಾಮ ಪಂಚಾಯ್ತಿಗೆ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಪಂಚಾಯ್ತಿ ವ್ಯಾಪ್ತಿಯ ಎಲ್ಲ ಅಂಗನವಾಡಿ ಮತ್ತು ಸರ್ಕಾರಿ ಶಾಲೆಗಳಿಗೆ ಕೈ ತೊಳೆಯುವ ಬೇಸನ್ ಮತ್ತು ಶೌಚಾಲಯ ನಿರ್ಮಿಸಲಾಗಿದೆ. ಎಲ್ಲ ಗ್ರಾಮಗಳಲ್ಲಿಯೂ ಸೋಲಾರ್ 14 ಹೈಮಾಸ್ಟ್ ದೀಪ ಅಳವಡಿಸಲಾಗಿದೆ. ಹೊಸಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲಿಸಲು ಬಿಡ್ಜ್ ನಿರ್ಮಾಣ ಮಾಡಲಾಗಿದೆ ಎಂದರು.
ಅಧ್ಯಕ್ಷ ಪಿ.ಟಿ. ಭರತ್, ಉಪಾಧ್ಯಕ್ಷೆ ಸತ್ತೂರು ಪಾಟೀಲ್ ಜಯಮ್ಮ ಸೇರಿದಂತೆ ಒಟ್ಟು 16 ಜನ ಗ್ರಾಪಂ ಸದಸ್ಯರನ್ನು ಸನ್ಮಾನಿಸಲಾಯಿತು. ಜಿಪಂ ಸದಸ್ಯ ಎಚ್.ಬಿ. ಪರುಶುರಾಮಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಪಿ.ಎಲ್.ಪೋಮ್ಯನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಟಾಸ್ಕ್ಫೋರ್ಸ್ ಸಮಿತಿ ತಾಲೂಕು ಅಧ್ಯಕ್ಷ ಎಚ್.ಕೆ. ಹಾಲೇಶ್, ಜಿಲ್ಲಾ ಸಮಿತಿ ಸದಸ್ಯ ಶಶಿಧರ್ ಪೂಜಾರ್, ಚಿರಸ್ತಹಳ್ಳಿ ಮರಿಯಪ್ಪ, ತಿಮ್ಮನಾಯ್ಕ, ಪಿಡಿಓ ಈ.ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.