![kambala2](https://www.udayavani.com/wp-content/uploads/2025/02/kambala2-1-415x249.jpg)
![kambala2](https://www.udayavani.com/wp-content/uploads/2025/02/kambala2-1-415x249.jpg)
Team Udayavani, Apr 25, 2020, 12:36 PM IST
ಹರಪನಹಳ್ಳಿ: ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದ ವಲಸೆ ಕಾರ್ಮಿಕರನ್ನು ಶಾಸಕ ಜಿ. ಕರುಣಾಕರರೆಡ್ಡಿ ನೇತೃತ್ವದಲ್ಲಿ ಬಿಡುಗಡೆಗೊಳಿಸಿದರು.
ಹರಪನಹಳ್ಳಿ: ವಿವಿಧ ಜಿಲ್ಲೆಗಳಲ್ಲಿ ಕೆಲಸಕ್ಕೆ ತೆರಳಿ ಮರಳಿ ತಾಲೂಕಿಗೆ ಆಗಮಿಸಿ ಕೊರೊನಾ ಲಾಕ್‌ಡೌನ್ ಗೆ ಸಿಲುಕಿ ಕ್ವಾರಂಟೈನ್ ಒಳಗಾಗಿದ್ದ 71 ಜನ ವಲಸೆ ಕಾರ್ಮಿಕರನ್ನು ಶುಕ್ರವಾರ ಶಾಸಕ ಜಿ. ಕರುಣಾಕರರೆಡ್ಡಿ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು.
ತಾಲೂಕಿನ ಮಾಚಿಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ನಿರಾಶ್ರಿತರ ಕೇಂದ್ರಕ್ಕೆ ಶಾಸಕರು ಭೇಟಿ ನೀಡಿ ಕ್ವಾರಂಟೈನ್ ನಲ್ಲಿರುವವರ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕ್ವಾರಂಟೈನ್ ಅವಧಿ ಮುಗಿದ ಕಾರ್ಮಿಕರನ್ನು ಬಿಡುಗಡೆಗೊಳಿಸಲಾಯಿತು. ತಮ್ಮ ತಮ್ಮ ಗ್ರಾಮಗಳಿಗೆ ಹೋಗಿ ಕೊರೊನಾ ಸೋಂಕು ತಗುಲದಂತೆ ಆರೋಗ್ಯ ಕಾಪಾಡಿಕೊಳ್ಳಬೇಕು. ಹಾಗೆಯೇ ಕೃಷಿ ಚಟುವಟಿಕೆ ಕೆಲಸ ಕಾರ್ಯಗಳನ್ನು ನಿಯಂತ್ರಿಸಿಕೊಳ್ಳಿ ಎಂದು ಕಾರ್ಮಿಕರಿಗೆ ಸಲಹೆ ನೀಡಿದರು.
ಕ್ವಾರಂಟೈನ್‌ನಲ್ಲಿರುವ ಅಂತರ ರಾಜ್ಯ ಮತ್ತು ಅಂತರ್ ಜಿಲ್ಲೆಗೆ ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಅವರನ್ನು ಕೂಡ ಅವರ ಗ್ರಾಮಕ್ಕೆ ಹೋಗುವುದಕ್ಕೆ ಅವಕಾಶ ನೀಡುತ್ತೇವೆ. ಹರಪನಹಳ್ಳಿ ತಾಲೂಕಿನಿಂದ ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿರುವ ಕಾರ್ಮಿಕರನ್ನು ಕರೆ ತರಲು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಸಂಪರ್ಕ ಮಾಡಿ ವಲಸೆ ಹೋಗಿ ಕ್ವಾರಂಟೈನ್‌ನಲ್ಲಿರುವ ಕಾರ್ಮಿಕರನ್ನು ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕೆ.ವಿ.ಪ್ರಸನ್ನಕುಮಾರ್, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಕೆ. ಕುಮಾರ್, ಪಿಎಸ್‌ಐ ಸಿ.ಪ್ರಕಾಶ್, ಬಿಜೆಪಿ ತಾಲೂಕು ಅಧ್ಯಕ್ಷ ಸತ್ತೂರು ಹಾಲೇಶ್, ತಾಪಂ ಉಪಾಧ್ಯಕ್ಷ ಎಲ್. ಮಂಜ್ಯಾನಾಯ್ಕ, ಮುಖಂಡರಾದ ಎಂ.ಪಿ.ನಾಯ್ಕ, ಆರ್. ಲೋಕೇಶ್, ಸಣ್ಣಹಾಲಪ್ಪ, ಬಾಗಳಿ ಕೋಟ್ರಪ್ಪ, ಕರೇಗೌಡ, ಎಂ. ಮಲ್ಲೇಶ್, ರಾಘವೇಂದ್ರಶೆಟ್ಟಿ, ಯು.ಪಿ.ನಾಗರಾಜ್ ಇತರರಿದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.