ದಾವಣಗೆರೆ ಸಂಪರ್ಕ ರಸ್ತೆಗಳ ಸೀಲ್‌ಡೌನ್
ಬೆಣ್ಣೆ ನಗರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಆಗಿದ್ದರಿಂದ ಜಿಲ್ಲಾಧಿಕಾರಿ ನಕುಲ್ ನಿರ್ದೇಶನ
Team Udayavani, May 4, 2020, 12:30 PM IST
ಹರಪನಹಳ್ಳಿ: ಹೊರವಲಯದ ಚೆಕ್‌ಫೋಸ್ಟ್ ಪರಿಶೀಲಿಸಿದ ಪೊಲೀಸ್ ಅಧಿಕಾರಿಗಳು
ಹರಪನಹಳ್ಳಿ: ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ವೈರಸ್ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ದಾವಣಗೆರೆಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ್ ಹಾಗೂ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನೆ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರ ನಿರ್ದೇಶನದ ಮೇರೆಗೆ ಹರಪನಹಳ್ಳಿ ತಾಲ್ಲೂಕಿನಿಂದ ದಾವಣಗೆರೆ ಜಿಲ್ಲೆಗೆ ಸಂಪರ್ಕಿಸುವ ಎಲ್ಲಾ ಜಿಲ್ಲಾ, ಗ್ರಾಮೀಣ ರಸ್ತೆಗಳು, ರಾಜ್ಯ ಹೆದ್ದಾರಿಗಳನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಅಗತ್ಯ ವಸ್ತುಗಳ ಮತ್ತು ಇತರೆ ತುರ್ತು ಸಂದರ್ಭಗಳಿಗೆ ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿಯ ದುಗ್ಗಾವತ್ತಿ ಚೆಕ್‌ಪೋಸ್ಟ್ ಮುಖಾಂತರ ಸಂಚರಿಸಲು ಅನುವು ಮಾಡಿಕೊಡಲಾಗುತ್ತದೆ. ಸಾರ್ವಜನಿಕರು ಅನಗತ್ಯವಾಗಿ ಸಂಚರಿಸದೆ ಚೆಕ್‌ಪೋಸ್ಟ್ ಸಿಬ್ಬಂದಿಗೆ ಸಹಕಾರ ನೀಡಬೇಕು. ಅನಗತ್ಯವಾಗಿ ಸಂಚರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ತೊಂದರೆ ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜನರಲ್ಲಿ ಢವ..ಢವ: ದಾವಣಗೆರೆ ನಗರದಲ್ಲಿ ಭಾನುವಾರ ಒಂದೇ ದಿನ 21 ಕೋವಿಡ್ ಪಾಸಿಟಿವ್ ಬಂದಿರು ಹಿನ್ನೆಯಲ್ಲಿ ಪಟ್ಟಣದ ಜನರಲ್ಲಿ ಆತಂಕ ಶುರುವಾಗಿದೆ. ದಾವಣಗೆರೆ ವ್ಯಕ್ತಿಯೊಬ್ಬ ಪಟ್ಟಣದಲ್ಲಿ ಸುತ್ತಾಡಿದ್ದು, ನಂತರ ಆತನನ್ನು ಅಂಬ್ಯುಲೆನ್ಸ್ ಮೂಲಕ ದಾವಣಗೆರೆ ನಗರಕ್ಕೆ ಬಿಟ್ಟು ಬರಲಾಗಿತ್ತು. ಆತನ ತಪಾಸಣಾ ವರದಿ ಸೋಮವಾರ ಬರಲಿದೆ. ಹೀಗಾಗಿ ಎಲ್ಲಿ, ಏನಾಗುತ್ತದೆಯೋ ಎನ್ನುವ ಆತಂಕ ಕಾಡುತ್ತಿದೆ. ಮತ್ತೂಂದೆಡೆ ತಾಲೂಕಿನ ಜನರು ದಾವಣಗೆರೆ ನಗರ ಕೇವಲ 40 ಕಿ.ಮೀ. ದೂರದಲ್ಲಿರುವುದರಿಂದ ಪ್ರತಿಯೊಂದು ಖರೀದಿಗೂ ದಾವಣಗೆರೆ ನಗರದ ಮೇಲೆ ಅವಲಂಬಿತರಾಗಿದ್ದಾರೆ. ದಾವಣಗೆರೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಜನರ ನಿದ್ದೆಗಡೆಸಿದೆ.
ಮದ್ಯ ಪ್ರಿಯರಿಗೆ ಖುಷಿ: ನಾಳೆಯಿಂದ ತಾಲೂಕಿನಾದ್ಯಂತ ಮದ್ಯ ಮಾರಾಟ ಮಳಿಗೆಗಳು ಆರಂಭವಾಗುತ್ತಿರುವುದರಿಂದ ಪಟ್ಟಣದ ಕೊಟ್ಟೂರು ರಸ್ತೆ ಹಾಗೂ ಹೊಸಪೇಟೆ ರಸ್ತೆಯಲ್ಲಿ ಸರ್ಕಾರಿ ಸ್ವಾಮ್ಯದ ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆಗಳ ಬಳಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಬ್ಯಾರಿಕೆಡ್ ಹಾಕಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕಿನಲ್ಲಿ ಒಟ್ಟು 23 ವೈನ್ ಶಾಪ್‌ಗ್ಳು ಬಾಗಿಲು ತೆರೆಯಲಿವೆ. ಆದರೆ 6 ಬಾರ್ ಗಳಿಗೆ ಅನುಮತಿ ಇಲ್ಲ. ಯಾವುದೇ ತೊಂದರೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಹಿಸಲಾಗಿದೆ ಎಂದು ಅಬಕಾರಿ ಇಲಾಖೆಯ ನಿರೀಕ್ಷಕ ಎನ್.ದಶರಥ ನಾಯ್ಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.