ಕೋವಿಡ್ ಪರೀಕ್ಷೆಗಾಗಿ ಆರೋಗ್ಯ ಸಿಬ್ಬಂದಿ ಪ್ರತಿಭಟನೆ
Team Udayavani, Jul 4, 2020, 9:31 AM IST
ಹೊಸಪೇಟೆ: ಕೋವಿಡ್ ಭೀತಿಯ ನಡುವೆಯೂ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ನಗರದ ಸರಕಾರಿ ಸಾರ್ವಜನಿಕ ನೂರು ಹಾಸಿಗೆ ಆಸ್ಪತ್ರೆ ಸಿಬ್ಬಂದಿ ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಸರಕಾರಿ ಸಾರ್ವಜನಿಕ ನೂರು ಹಾಸಿಗೆ ಆಸ್ಪತ್ರೆಯ ಮುಂಭಾಗದಲ್ಲಿ ಜಮಾವಣೆಗೊಂಡ ಆರೋಗ್ಯ ಸಿಬ್ಬಂದಿ ಕೂಡಲೇ ನಮಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಎಂದು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಕೊರೊನಾ ವಾರಿಯರ್ಸ್‌ಗೆ ಕೋವಿಡ್ ಪರೀಕ್ಷೆ ಇಲ್ಲದಿದ್ದರೇ ಹೇಗೆ? ನಮ್ಮನ್ನು ನೆಚ್ಚಿಕೊಂಡು ನೂರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಕೋವಿಡ್ ಪಾಸಿಟಿವ್ ವ್ಯಕ್ತಿ ಆಸ್ಪತ್ರೆಯಲ್ಲಿ ತಿರುಗಾಡುತ್ತಿದ್ದಾನೆ. ಸಾಮಾನ್ಯ ಮತ್ತು ಕೋವಿಡ್ ರೋಗಿಗಳು ಒಂದೆ ಕಡೆ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇದರಿಂದ ರೋಗ ಹರಡುವಿಕೆ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಆಸ್ಪತ್ರೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲ ಹಾಗೂ ಕನಿಷ್ಟ ಪಿಪಿಇ ಕಿಟ್‌ಗಳನ್ನು ಕೂಡ ನೀಡಿಲ್ಲ. ಈಗಾಗಲೇ ಓರ್ವ ವೈದ್ಯ ಮತ್ತು ನರ್ಸ್ ಕರೊನಾ ಪಾಸಿಟಿವ್ ಬಂದಿರುವುದು ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎಲ್ಲ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆ ಮಾಡಿ ಎಂದು ಕಣ್ಣೀರಿಟ್ಟ ಪ್ರಸಂಗ ನಡೆಯಿತು. ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಲಿ ಎಂದು ಪಟ್ಟು ಹಿಡಿದರು.
ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಎಚ್. ವಿಶ್ವನಾಥ ಉಪವಿಭಾಗಾಧಿ ಕಾರಿಯೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಸಮಾಧಾನಗೊಂಡು ಪ್ರತಿಭಟನೆಯಿಂದ ಹಿಂದೆ ಸರಿದರು. ಆಸ್ಪತ್ರೆ ವೈದ್ಯಾಧಿಕಾರಿ ಡಾ| ಸಲೀಮ್, ತಾಲೂಕು ಆರೋಗ್ಯಾಧಿ ಕಾರಿ ಡಿ. ಭಾಸ್ಕರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.