ಗಿಡಮೂಲಿಕೆ ಔಷಧಿಗಿದೆ ರೋಗ ಗುಣಪಡಿಸುವ ಶಕ್ತಿ
Team Udayavani, Jun 11, 2018, 2:03 PM IST
ಮರಿಯಮ್ಮನಹಳ್ಳಿ: ದೀರ್ಘಕಾಲ ಬಾಧಿಸುವ ರೋಗಗಳನ್ನು ಗಿಡಮೂಲಿಕೆಗಳಿಂದ ಗುಣಪಡಿಸಲು ಸಾಧ್ಯ ಎಂದು
ಪಟ್ಟಣದ ಗುರುಪಾದ ದೇವರ ಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ದಮ್ಮು, ಕೆಮ್ಮಿಗೆ ಉಚಿತ ಔಷಧ ವಿತರಣಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಹಿಂದಿನಿಂದಲೂ ಆಯುರ್ವೇದ ಪದ್ಧತಿಯನ್ನು ಅನುಸರಿಸುತ್ತಾ ಬರಲಾಗುತ್ತಿದೆ. ಮೃಗಶಿರ ಮಳೆ ನಕ್ಷತ್ರ ಕೂಡುವ ವೇಳೆಗೆ ನೀಡಲಾಗುವ ದಮ್ಮು, ಕೆಮ್ಮಿನ ಔಷಧಿ ಯನ್ನು ಪ್ರತಿಯೊಬ್ಬರೂ ಸತತ ಮೂರು ವರ್ಷಗಳ ಕಾಲ ತೆಗೆದುಕೊಳ್ಳಬೇಕು ಎಂದರು.
ಎಲ್ಲಕ್ಕಿಂತಲೂ ಹೆಚ್ಚಾಗಿ ಆರೋಗ್ಯ ಕಾಪಾಡಿಕೊಳ್ಳುವುದು ಬಹು ಮುಖ್ಯ. ಪ್ರತಿಯೊಬ್ಬರೂ ಆರೋಗ್ಯದತ್ತ ಹೆಚ್ಚಿನ
ಗಮನ ಹರಿಸಬೇಕು. ಇತ್ತೀಚೆನ ದಿಮಾನಗಳಲ್ಲಿ ಯುವಕರು ಧೂಮಪಾನ, ಮದ್ಯಪಾನ ಸೇರಿದಂತೆ ಇನ್ನಿತೆ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಅವುಗಳಿಂದ ದೂರವಿರಬೇಕು. ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದರ ಮೂಲಕ ಉತ್ತಮ ನಾಗರಿರಕರನ್ನಾಗಿ ರೂಪಿಸಬೇಕು ಎಂದು ಹೇಳಿದರು.
ಪ್ರತಿ ವರ್ಷವೂ ಮಠದಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಗುವುದು. ಭಕ್ತಾದಿಗಳು ಇದರ ಸದುಪಯೋಗವನ್ನು
ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಗರಗ ನಾಗಲಾಪುರ ದಿ| ದೊಡ್ಡ ಹನುಮಂತಪ್ಪ ಅವರ ಪುತ್ರರಾದ ಉಮಾಪತಿ ಮತ್ತಿ ಗಜೇಂದ್ರ ಅವರು ಔಷಧಿಯನ್ನು ಪಡೆಯಲು ಬಂದಿದ್ದ ನೂರಕ್ಕೂ ಹೆಚ್ಚು ಜನರಿಗೆ ದಮ್ಮು, ಕೆಮ್ಮಿನ ಔಷಧ ವಿತರಿಸಿದರು.
ಕೊಟ್ಟೂರಿನ ಶ್ರೀ ಶಂಕರ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಪಟ್ಟಣದ ಚಿತ್ರ ಕಲಾವಿದರಾದ ಎಚ್. ಶ್ರೀನಿವಾಸರಾವ್, ನಿವೃತ್ತ ಶಿಕ್ಷಕ ಬಿ.ಎಂ.ಎಸ್. ಮೃತ್ಯುಂಜಯ, ಡಿ. ಪಾಪಮ್ಮ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.