ವೇದಾವತಿ ನದಿಗೆ ಹೆಚ್ಚು ನೀರು ಹರಿಸಿದ್ರೆ ಹೋರಾಟ
Team Udayavani, Apr 22, 2020, 6:21 PM IST
ಹಿರಿಯೂರು: ತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು
ಹಿರಿಯೂರು: ಸರ್ಕಾರದ ಆದೇಶದ ಪ್ರಕಾರ ವೇದಾವತಿ ನದಿಗೆ 0.25 ಟಿ.ಎಂಸಿ ನೀರು ಹರಿಸುವುದು ಬಹಳ ಸಂತೋಷದ ಸಂಗತಿ. ಆದರೆ ವಾಣಿವಿಲಾಸ ಸಾಗರದಿಂದ ಅದಕ್ಕಿಂತ ಹೆಚ್ಚಿನ ನೀರನ್ನು ನದಿಗೆ ಹರಿಸಿದಲ್ಲಿ ರೈತ ಸಂಘ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ ಎಚ್ಚರಿಸಿದ್ದಾರೆ.
ನಗರದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಸತ್ಯನಾರಾಯಣ ಅವವರಿಗೆ ಈ ಬಗ್ಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು. ತಾಲೂಕಿನ ಅಚ್ಚುಕಟ್ಟು ಪ್ರದೇಶಕ್ಕೆ ಮೇ ತಿಂಗಳೊಳಗೆ ಮಳೆ ಬಾರದಿದ್ದಲ್ಲಿ ವಿವಿ ಸಾಗರದ ನೀರನ್ನು ತೋಟಗಳಿಗೆ ಹರಿಸಬೇಕಾಗಿದೆ. ಹಾಗಾಗಿ ಆದೇಶದ ಪ್ರಕಾರ 0.25 ಟಿಎಂಸಿ ನೀರನ್ನು ಮಾತ್ರ ನದಿಗೆ ಹರಿಸಬೇಕು ಭದ್ರಾ ಮೇಲ್ದಂಡೆ ಯೋಜನೆಯಿಂದ . ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವ ಕಾಮಗಾರಿ ಸ್ಥಗಿತಗೊಂಡಿದೆ. ಈ ಬಗ್ಗೆ ಜಿಲ್ಲೆಯ ಮಠಾಧೀಶರಾಗಲಿ, ರಾಜಕಾರಣಿಗಳಾಗಲಿ ಧ್ವನಿ ಎತ್ತದಿರುವುದು ವಿಷಾದನೀಯ. ಕುಡಿಯುವ ನೀರನ್ನು ಕೇಳುವ ಹಕ್ಕುಎಲ್ಲರಿಗೂ ಇದೆ, ಆದರೆ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವ ಬಗ್ಗೆ ಹೋರಾಟ ಹಿರಿಯೂರಿಗೆ ಮಾತ್ರ ಸೀಮಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಆಲೂರು ಸಿದ್ದರಾಮಣ್ಣ, ತಿಮ್ಮಾರೆಡ್ಡಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.