10 ಸಾವಿರ ಆಹಾರ ಕಿಟ್ ವಿತರಣೆಗೆ ತೀರ್ಮಾನ
Team Udayavani, Apr 20, 2020, 4:07 PM IST
ಹೊನ್ನಾಳಿ: ತಾಲೂಕಿನ ಎಚ್. ಕಡದಕಟ್ಟೆ ಗ್ರಾಪಂ ಆವರಣದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆಹಾರದ ಕಿಟ್ ವಿತರಿಸಿದರು.
ಹೊನ್ನಾಳಿ: ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕುಗಳ ಪೌರಕಾರ್ಮಿಕರು ಸೇರಿದಂತೆ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ತೊಡಗಿಸಿ ಕೊಂಡವರು ಹಾಗೂ ನಿರ್ಗತಿಕರಿಗೆ ಲಾಕ್ ಡೌನ್ ಮುಗಿಯು ವವರೆಗೆ ದಿನನಿತ್ಯದ ಆಹಾರ ವಸ್ತುಗಳ ಕಿಟ್ ವೈಯಕ್ತಿಕವಾಗಿ ನೀಡಲಾಗುವುದು. ವೈಯಕ್ತಿಕವಾಗಿ 10 ಸಾವಿರ ಆಹಾರ ಕಿಟ್‌ಗಳನ್ನು ವಿತರಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಎಚ್. ಕಡದಕಟ್ಟೆ ಗ್ರಾಪಂ ಆವರಣದಲ್ಲಿ ನಿರ್ಗತಿಕರು, ಬಿಪಿಎಲ್ ಫಲಾನುಭವಿಗಳು, ಕಾರ್ಮಿಕರಿಗೆ ಭಾನುವಾರ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು. ಮಹಾಮಾರಿ ಕೊರೊನಾ ಸೋಂಕನ್ನು ನಿರ್ಮೂಲನೆ ಮಾಡಲು ಸೈನಿಕರಂತೆ ಸಮರಕ್ಕೆ ಸಜ್ಜಾಗಿ ನಿಂತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ಪೊಲೀಸ್ ಇಲಾಖೆಯ ಸಿಬ್ಬಂದಿ, ಹೋಂಗಾರ್ಡ್‌ಗಳು ಸೇರಿದಂತೆ ಸಮಾಜಸೇವಕರು ಕೆಲವು ಸಂಘ ಸಂಸ್ಥೆಗಳ ಕಾರ್ಯ ಅಭಿನಂದನೀಯ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಕೊರೊನಾ ನಿಯಂತ್ರಣಕ್ಕೆ ದಿಟ್ಟ ಕ್ರಮ ಕೈಗೊಂಡಿದ್ದಾರೆ ಎಂದರು. ತಾಪಂ ಕಾರ್ಯನಿರ್ವಹಣಾ ಧಿಕಾರಿ ಗಂಗಾಧರ ಮೂರ್ತಿ, ಗ್ರಾಪಂ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.