ಆಶಾ ಕಾರ್ಯಕರ್ತೆಯರ ಸೇವೆ ಅಮೂಲ್ಯ
Team Udayavani, Apr 27, 2020, 3:19 PM IST
ಹೊನ್ನಾಳಿ: ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿದರು
ಹೊನ್ನಾಳಿ: ತಮ್ಮ ವೈಯಕ್ತಿಕ ಕುಟುಂಬದ ಬದುಕನ್ನೇ ಬದಿಗಿಟ್ಟು ಕೊರೊನಾ ನಿಗ್ರಹಕ್ಕೆ ಹಗಲಿರುಳು ಆಶಾ ಕಾರ್ಯಕರ್ತೆಯರು ಗ್ರಾಮೀಣ ಹಾಗೂ ನಗರಗಳ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆರೋಗ್ಯ ಇಲಾಖೆ ಹಾಗೂ ಸಮುದಾಯದ ನಡುವೆ ಸೇತುವೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಭಾನುವಾರ ನ್ಯಾಮತಿ ತಾಲೂಕಿನ ಒಡೆಯರಹತ್ತೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೋವಿಡ್ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ಮಧ್ಯಾಹ್ನದ ಊಟ ವಿತರಿಸಿ ಅವರು ಮಾತನಾಡಿದರು. ದೇಶಕ್ಕೆ ಬಂದೊದಗಿರುವ ಅಘಾತಕಾರಿ ಸ್ಥಿತಿಯಲ್ಲಿ ನೆಲದ ಕಾನೂನನ್ನೇ ಅರಿಯದ ಕೆಲ ದೇಶದ್ರೋಹಿಗಳು ಸಂವಿಧಾನದ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ. ಆಶಾ ಕಾರ್ಯಕರ್ತೆಯರ ಮೇಲೆ ನಿರಂತರ ಹಲ್ಲೆ, ದಬ್ಟಾಳಿಕೆ ನಡೆಸುತ್ತಿರುವುದು ಖಂಡನೀಯ ಎಂದರು.
ಮಂಡ್ಯದಲ್ಲಿ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ಹಾಗೂ ಅವರ ಪುತ್ರ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ದೌರ್ಜನ್ಯ ಮಾಡಿರುವ ಶ್ರೀಕಂಠೇಗೌಡ, ಅವರ ಪುತ್ರ ಹಾಗೂ ಬೆಂಬಲಿಗರ ಮೇಲೆ ಸರ್ಕಾರ ಹೊಸ ಕಾನೂನಿನ ಪ್ರಕಾರ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.