ಅಕ್ರಮ ದಾಸ್ತಾನು: ಹತ್ತಿ ಬಿತ್ತನೆ ಬೀಜ ವಶ
Team Udayavani, Apr 27, 2020, 3:10 PM IST
ಹೊನ್ನಾಳಿ: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಹತ್ತಿ ಬಿತ್ತನೆ ಬೀಜಗಳನ್ನು ಕೃಷಿ ಅಧಿಕಾರಿಗಳು ವಶಪಡಿಸಿಕೊಂಡರು
ಹೊನ್ನಾಳಿ: ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಹತ್ತಿ ಬಿತ್ತನೆ ಬೀಜಗಳನ್ನು ಕೃಷಿ ಇಲಾಖೆ ಅಧಿಕಾರಿಗಳು ಭಾನುವಾರ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಉಪ ಕೃಷಿ ನಿರ್ದೇಶಕಿ ಹಂಸವೇಣಿ, ಸಹಾಯಕ ಕೃಷಿ ನಿರ್ದೇಶಕ ಸುರೇಶ್ ನೇತೃತ್ವದಲ್ಲಿ ಗ್ರಾಮದ ಎಂ.ಆರ್. ವೀರಭದ್ರಪ್ಪ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಯಿತು. ಅನಧಿಕೃತವಾಗಿ ದಾಸ್ತಾನಿಟ್ಟು ಮಾರಾಟ ಮಾಡುತ್ತಿದ್ದ 36 ಅಂಕುರ್ ತಳಿಯ ಹತ್ತಿ ಬಿತ್ತನೆ ಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿ ಮುಂಗಾರು ಹಂಗಾಮಿನಲ್ಲಿ ನಕಲಿ ಬಿತ್ತನೆ ಬೀಜ ಹಾಗೂ ಲೂಜ್ ಮೆಕ್ಕೆಜೋಳ ಬಿತ್ತನೆ ಬೀಜದ ಹಾವಳಿ ಇರುವುದು ಗಮನಕ್ಕೆ ಬಂದಿತ್ತು. ಇದನ್ನು ತಡೆಗಟ್ಟಲು ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅ ಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದು ಉಪ ಕೃಷಿ ನಿರ್ದೇಶಕಿ ಹಂಸವೇಣಿ ತಿಳಿಸಿದರು.
ನಕಲಿ ಬಿತ್ತನೆ ಬೀಜ ಹಾಗೂ ಲೂಜ್ ಮೆಕ್ಕೆಜೋಳ ಬಿತ್ತನೆ ಬೀಜ ಮಾರಾಟ ಕಂಡುಬಂದಲ್ಲಿ ತಕ್ಷಣ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ರೈತರು ಬಿತ್ತನೆ ಬೀಜಗಳನ್ನು ರಿಯಾಯ್ತಿ ದರದಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಸ್ಥಳೀಯ ರೈತ ಸಂಪರ್ಕ ಕೇಂದ್ರಗಳಿಂದ ಪಡೆಯಬೇಕು. ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ಎಚ್ಚರ ವಹಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.