ಅವಧಿ ಮೀರಿದ ತಂಪು ಪಾನೀಯ ಬಾಟಲ್ ವಶ
Team Udayavani, Apr 22, 2020, 5:53 PM IST
ಹೊನ್ನಾಳಿ: ಜಿಲ್ಲಾ ಅಂಕಿತ ಅಧಿಕಾರಿ ಡಾ| ರುದ್ರಸ್ವಾಮಿ ವಶಕ್ಕೆ ಪಡೆದ ತಂಪು ಪಾನೀಯ ಬಾಟಲ್‌ಗಳನ್ನು ಪ್ರದರ್ಶಿಸಿದರು
ಹೊನ್ನಾಳಿ: ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಎದುರಿನ ಬೇಕರಿಯೊಂದರಲ್ಲಿ ಅವಧಿ ಮೀರಿದ ತಂಪು ಪಾನೀಯಗಳನ್ನು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಚೇರಿಯ ಜಿಲ್ಲಾ ಅಂಕಿತ ಅಧಿಕಾರಿ ಹಾಗೂ ಜಿಲ್ಲಾ ನೋಡಲ್ ಆಫೀಸರ್ ಡಾ| ರುದ್ರಸ್ವಾಮಿ ದಾಳಿ ನಡೆಸಿ ಬೇಕರಿಯಲ್ಲಿದ್ದ ಎಲ್ಲಾ ತಂಪು ಪಾನೀಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೇಕರಿಯಲ್ಲಿನ ತಂಪುಪಾನೀಯ ಬಾಟಲ್ ಗಳನ್ನು ಪರಿಶೀಲಿಸಿದಾಗ ಅವಧಿ ಮೀರಿದ್ದು ಎಂದು ತಿಳಿದು ಬಂತು. ಕೂಡಲೇ ಅವುಗಳನ್ನು ತಮ್ಮ ವಶಕ್ಕೆ
ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌ಎಲ್‌ವಿ ಅಯ್ಯಂಗಾರ್ ಬೇಕರಿಯಲ್ಲಿ ಅವ ಧಿ ಮೀರಿದ ತಂಪುಪಾನೀಯ ಮಾರಾಟ ಮಾಡುತ್ತಿದ್ದ ಕಾರಣ ಅಪರ ಜಿಲ್ಲಾ ಧಿಕಾರಿಗಳ ನ್ಯಾಯಾಲಯದಲ್ಲಿ ಶೀಘ್ರದಲ್ಲಿಯೇ ಮೊಕದ್ದಮೆ ದಾಖಲಿಸಲಾಗುವುದು. ಸಾರ್ವಜನಿಕರು ತಾವು ಕುಡಿಯುವ ತಂಪು ಪಾನೀಯಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದರು.
ಅದೇ ರೀತಿ ಪಟ್ಟಣ ಪಂಚಾಯತ್ ಮುಂಭಾಗದ ರಸ್ತೆಯಲ್ಲಿರುವ ಜಿ.ಬಿ. ಅಯ್ಯಂಗಾರ ಬೇಕರಿಗೂ ಭೇಟಿ ನೀಡಿ ಸcತ್ಛತೆ ಕಾಪಾಡಿಕೊಂಡು ಗ್ರಾಹಕರಿಗೆ ಮಾರಾಟ
ಮಾಡಬೇಕು. ಇಲ್ಲದಿದ್ದರೆ ದಂಡ ವಿ ಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಡಾ| ಪ್ರದೀಪ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಗದೀಶ್ ಕೋಡಿಹಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.