ಕೃಷಿಮೇಳದ ಯಶಸ್ಸಿಗೆ ಶ್ರಮಿಸೋಣ
ರೈತರ ಹಿತ ಕಾಪಾಡುವ ಮೇಳದ ಉದ್ದೇಶ ಈಡೇರಲಿಕೋಟಿಗಿಂತ ಹೆಚ್ಚು ವೆಚ್ಚ
Team Udayavani, Mar 2, 2020, 5:02 PM IST
ಹೊನ್ನಾಳಿ: ಹಿರೇಕಲ್ಮಠದಲ್ಲಿ ಲಿಂ|ಒಡೆಯರ್ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಮತ್ತು ಲಿಂ| ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಪುಣ್ಯಾರಾಧನೆ ಅಂಗವಾಗಿ ಮಾ.5ರಿಂದ 7ರವರೆಗೆ ನಡೆಯುವ ರಾಜ್ಯ ಮಟ್ಟದ ಕೃಷಿಮೇಳ ಅತ್ಯಂತ ಯಶಸ್ವಿಯಾಗಿ ನಡೆಯಲು ಎಲ್ಲರು ಕಂಕಣಬದ್ಧರಾಗಿ ದುಡಿಯಬೇಕಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.
ಕೃಷಿ ಮೇಳದ ಪ್ರಯುಕ್ತ ಭಾನುವಾರ ಹಿರೇಕಲ್ಮಠದಲ್ಲಿ ಈಗಾಗಲೇ ನಡೆದ ಹಾಗೂ ಮುಂದಿನ ಎರಡು ದಿನಗಳಲ್ಲಾಗಬೇಕಾದ ಕಾಮಗಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯಮಟ್ಟದ ಕೃಷಿ ಮೇಳ ರಾಜ್ಯದಲ್ಲಿಯೇ ಗುರ್ತಿಸುವಂತಾಗಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಾಗಬೇಕಿದೆ. ಇದಕ್ಕೆ 1ಕೋಟಿಗಿಂತ ಹೆಚ್ಚು ಖರ್ಚು ಬರಲಿದ್ದು ಈಗಾಗಲೇ ಸರ್ಕಾರ ರೂ.50ಲಕ್ಷ ಅನುದಾನ ಬಿಡುಗಡೆ ಮಾಡಿದೆ. ಹೆಚ್ಚಿನ ಅನುದಾನಕ್ಕೆ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಕೃಷಿಮೇಳ ಜಾತ್ಯತೀತ ಹಾಗೂ ಪಕ್ಷಾತೀತವಾಗಿರುವುದರಿಂದ ತಾಲೂಕಿನ ಎಲ್ಲಾ ಪಕ್ಷದ ಮುಖಂಡರುಗಳನ್ನು ಸೇರಿಸಿಕೊಂಡು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಮುಖ್ಯಮಂತ್ರಿ, ವಿಪಕ್ಷ ನಾಯಕ, ಸಚಿವರನ್ನು ತಾಲೂಕಿನ ಎಲ್ಲಾ ಪ್ರಮುಖ ಮುಖಂಡರನ್ನು ಕರೆದುಕೊಂಡು ಹೋಗಿ ಆಹ್ವಾನ ಮಾಡಲಾಗಿದೆ ಎಂದು ಹೇಳಿದರು.
ಪ್ರತಿ ವರ್ಷ ಹೊನ್ನಾಳಿಯಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ಹಮ್ಮಿಕೊಂಡು ಸರ್ಕಾರದಿಂದ ಇಂತಿಷ್ಟು ಹಣ ನಿಗದಿ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದು ಹೇಳಿದರು.
ಸಭೆಯ ಸಾನ್ನಿಧ್ಯವಹಿಸಿ ಮಾತನಾಡಿದ ಡಾ|
ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಕೃಷಿ ಮೇಳಕ್ಕೆ ನನಗೆ ಆಹ್ವಾನ ನೀಡಿಲ್ಲ ಎಂದು ಎನ್ನದೇ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಜಿಲ್ಲಾ ಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಇತರ ಎಲ್ಲಾ ಇಲಾಖೆಗಳು ಶಕ್ತಿಮೀರಿ ಕೆಲಸ ಮಾಡುತ್ತಿದ್ದು ರೈತರ ಹಿತ ಕಾಪಾಡುವ ಕೃಷಿಮೇಳದಲ್ಲಿ ನಮ್ಮ ಮುಖ್ಯ ಉದ್ದೇಶ ಈಡೇರಬೇಕಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಕುಂದೂರು ಹನುಮಂತಪ್ಪ ತಮ್ಮ ಭಾಗದ ಹಳ್ಳಿಗಳಿಂದ ಕೃಷಿಮೇಳಕ್ಕೆ ಆಗಮಿಸುವ ಎಲ್ಲಾ ರೈತರಿಗೆ ಹಾಗೂ ಜನರಿಗೆ ವಾಹನ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿದರು. ಸಾವಿತ್ರಿಬಾಯಿ ಫುಲೆ ಸಂಘಟನೆ ಅಧ್ಯಕ್ಷೆ ಶಹಜಾನ್, ಕೃಷಿ ಮೇಳಕ್ಕೆ ರೂ.25 ಸಾವಿರ ದೇಣಿಗೆ ನೀಡುತ್ತೇನೆ ಎಂದು ಹೇಳಿದರು. ವಿವಿಧ ಪಕ್ಷದ ಮುಖಂಡರು, ರೈತರು ಮಾತನಾಡಿದರು. ಜಿ.ಪಂ ಉಪಾಧ್ಯಕ್ಷ ಸುರೇಂದ್ರನಾಯ್ಕ, ಜಿ.ಪಂ ಸದಸ್ಯೆ ಉಮಾರಮೇಶ್, ತಾ.ಪಂ ಪ್ರಭಾರಿ ಅಧ್ಯಕ್ಷ ತಿಪ್ಪೇಶಪ್ಪ, ಜಿ.ಪಂ ಸಿಇಒ ಪದ್ಮಾಬಸವಂತಪ್ಪ ಮತ್ತು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.