ಬಿಎಸ್‌ವೈ ಕೊಟ್ಟ ಮಾತು ಹುಸಿಯಾಗದಿರಲಿ
ಸಮಾಜಕ್ಕೆ ಬಸವಣ್ಣನ ಶಾಂತಿ-ಚನ್ನಮ್ಮಳ ಹೋರಾಟ ಎರಡೂ ಗೊತ್ತು
Team Udayavani, Jan 22, 2021, 5:48 PM IST
ಹೊಸಪೇಟೆ: ಪಂಚಮಸಾಲಿ ಸಮಾಜಕ್ಕೆ 2ಎಮೀಸಲಾತಿ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಅವರು ಮಠಾಧಿಧೀಶರಿಗೆ ನೀಡಿರುವ ಭರವಸೆ ಹುಸಿಗೊಳಿಸಬಾರದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದ ಹೊರವಲಯದಲ್ಲಿರುವ ಗುಂಡಾ ಸಸ್ಯೋದ್ಯಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ಭರವಸೆ ನೀಡಿ ವಚನಭ್ರಷ್ಟ ಆರೋಪ ಹೊತ್ತುಕೊಂಡರು. ಅದೇ ರೀತಿ ಯಡಿಯೂರಪ್ಪ ಕೊಟ್ಟ ಮಾತನ್ನು ಮೀರಬಾರದು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸಬೇಕು. ಲಿಂಗಾಯತರ ಪ್ರಥಮ ಪಾದಯಾತ್ರೆ ಇದಾಗಿದ್ದು, ಈ ಪಾದಯಾತ್ರೆ ಲಿಂಗಾಯತರ ಒಳಿತಿಗಾಗಿ, ಮಕ್ಕಳ ಶೈಕ್ಷಣಿಕ ಏಳ್ಗೆಗಾಗಿ ಮಾಡಲಾಗುತ್ತಿದೆ. 26 ವರ್ಷಗಳಿಂದ ಶಾಂತಿ, ಸಹನೆಯಿಂದಮೀಸಲಾತಿಗಾಗಿ ಮನವಿ ನೀಡುತ್ತಿದ್ದೇವೆ. ಇದಕ್ಕೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ನಮಗೆ ಬಸವಣ್ಣರ ಶಾಂತಿ ಹಾಗೂ ಚನ್ನಮ್ಮರಂತೆ ಹೋರಾಡುವುದು ಗೊತ್ತು. ವಿಧಾನಸೌಧದ ಕಡೆಗೆ ಪಾದಯಾತ್ರೆ ಹೊರಟಿದ್ದು, ಸರ್ಕಾರ ಕೂಡಲೇ ತನ್ನ ನಿಲುವು ಪ್ರಕಟಿಸಬೇಕು ಎಂದರು. ಸರ್ಕಾರ ಮೀಸಲಾತಿ ಹೋರಾಟವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಂಪುಟ ರಚನೆಯಲ್ಲೇ ಕಾಲ ಕಳೆಯಲಾಗುತ್ತಿದೆ. ಈ ಕೂಡಲೇ ವರದಿ ತರಿಸಿಕೊಂಡು ಪರಿಶೀಲಿಸಿ ಕಲ್ಯಾಣ ಕರ್ನಾಟಕದ ಗಡಿ ಭಾಗವಾದ ಹರಪನಹಳ್ಳಿಯಲ್ಲಿ ಪಾದಯಾತ್ರೆ ಮುಗಿಸುವುದರೊಳಗೆ ಮುಖ್ಯಮಂತ್ರಿಗಳು ನಮಗೆ ಸಿಹಿ ಸುದ್ದಿ ನೀಡಬೇಕು. ಪಂಚಮಸಾಲಿ ಸಮಾಜದ 15 ಶಾಸಕರು ಸದ್ಯ ಬಿಜೆಪಿಯಲ್ಲಿದ್ದಾರೆ. ಉತ್ತರ ಕರ್ನಾಟದಲ್ಲಿ ಬಿಜೆಪಿ ಪ್ರಬಲವಾಗಲು ಪಂಚಮಸಾಲಿ ಸಮುದಾಯವೇ ಕಾರಣ. ಯಡಿಯೂರಪ್ಪನವರು ನಂಬಿಕೆ ಉಳಿಸಿಕೊಳ್ಳಬೇಕು. ಈ ಹಿಂದೆ ಕುಮಾರಸ್ವಾಮಿ ಅವರು ಕೊಟ್ಟ ಮಾತಿಗೆ ವಿರುದ್ಧವಾಗಿ ನಡೆದುಕೊಂಡು ಅಧಿ ಕಾರ ಕಳೆದುಕೊಂಡರೋ ಹಾಗೇ ಯಡಿಯೂರಪ್ಪನವರ ವಿಷಯದಲ್ಲಿ ಆಗಬಾರದು ಎಂದು ಎಚ್ಚರಿಸಿದರು.
ಇದನ್ನೂ ಓದಿ : ಯಶವಂತಪುರ ರೈಲುಗಾಡಿ ದಾವಣಗೆರೆಗೂ ಓಡಿಸಲಿ
ಬಹಿರಂಗ ಸಭೆ: ಜ.29ರಂದು ಪಂಚಮಸಾಲಿ ಸಮಾಜದ ವತಿಯಿಂದ ಹರಿಹರದಲ್ಲಿ ಬೃಹತ್ ಸಭೆ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಜನ ಸಾಗರೋಪಾದಿಯಲ್ಲಿ ಬರಲಿದ್ದಾರೆ.ವಚನಾನಂದ ಶ್ರೀಗಳು ಭಾಗವಹಿಸಿದರೆ ಸ್ವಾಗತಿಸಲಾಗುವುದು. ಸಮಾಜದ ಶಾಸಕರು, ಸಚಿವರು ಭಾಗವಹಿಸಲಿದ್ದಾರೆ ಎಂದುಶ್ರೀಗಳು ಹೇಳಿದರು.
ಮಾಜಿ ಶಾಸಕ ಹಾಗೂ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, ಕೂಡಲಸಂಗಮದಿಂದ ಹೊಸಪೇಟೆಯವರೆಗೂ 206 ಕಿಮೀ ಕ್ರಮಿಸಲಾಗಿದೆ. ಸಮಾಜದ ಶಾಸಕರು ತಮ್ಮ ನಿಲುವನ್ನು ಪ್ರಕಟಿಸಬೇಕು. ಸರ್ಕಾರ ಈ ಹೋರಾಟವನ್ನು ಕಡೆಗಣಿಸಬಾರದು. ಈಗಾಗಲೇ ಹರಿಹರ ಪೀಠದ ಭಕ್ತರು ಕೂಡ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಮಾಜದ ಹೋರಾಟದಲ್ಲಿ ಎಲ್ಲರೂ ಪಾಲ್ಗೊಳ್ಳಲಿದ್ದಾರೆ ಎಂದರು. ಮೀಸಲಾತಿಗಾಗಿ ಹಲವು ಹೋರಾಟ ಮಾಡಲಾಗಿದೆ. ಇದು ಮಾಡು ಇಲ್ಲವೇ ಮಡಿ ಎಂಬಂತೆ ಕೊನೆಯ ಪಾದಯಾತ್ರೆ ಆಗಿದೆ. ಮಹಿಳೆಯರು, ಮಕ್ಕಳು ಸಹ ಪಾದಯಾತ್ರೆಯಲ್ಲಿಭಾಗವಹಿಸಿ ಬೆಂಬಲ ನೀಡುತ್ತಿದ್ದಾರೆ. ಸಮಾಜದ ಸ್ವಾಮೀಜಿಗೆ ಏನಾದರೂ ತೊಂದರೆ ಉಂಟಾದರೆ ಮುಖ್ಯಮಂತ್ರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು. ಮುಖಂಡರಾದ ಅಮರೇಶ್ ಕರಡಿ, ಗುಳಗಿ ವೀರೇಂದ್ರ, ಯುವರಾಜ್ ಇಂಡಿ, ಮಹಾಬಲೇಶ್ವರ ರೆಡ್ಡಿ, ಶಿವಾನಂದ, ರವಿ ಬಿಡ್ಡಪ್ಪ ಮತ್ತಿತರರಿದ್ದರು.
ಇದನ್ನೂ ಓದಿ : ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.