ಮಕ್ಕಳ ಕಳ್ಳರು ಬಂದಿದ್ದಾರೆ: ವಂದತಿಗೆ ಕಿವಿಗೊಡದಿರಿ ಎಸ್ಪಿ ಅರುಣ್
Team Udayavani, Sep 15, 2022, 8:22 PM IST
ಹೊಸಪೇಟೆ: ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುಳ್ಳು ಸುದ್ದಿಗಳು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ವದಂತಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಈ ಕುರಿತು ಬೇರೆ ದೇಶಗಳ ವಿಡಿಯೋ ತುಣಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಿಂದ ಆತಂಕಗೊಂಡ ಸಾರ್ವಜನಿಕರು, ಅಮಾಯಕ ವ್ಯಕ್ತಿಗಳನ್ನು ಮಕ್ಕಳ ಕಳ್ಳರು ಎಂದು ತಪ್ಪು ಗ್ರಹಿಸಿ, ಹಲ್ಲೆ ನಡೆಸಿರುವ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಯಾವುದೇ ಪ್ರದೇಶಗಳಲ್ಲಿ ಸಂಶಯಸ್ಪಾದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಬೇಕು. ಈ ಸಂದರ್ಭದಲ್ಲಿ ಘಟನಾಸ್ಥಳಕ್ಕೆ ಪೊಲೀಸ್ ಆಗಮಿಸಿ, ಕೂಲಂಕುಶವಾಗಿ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ವದಂತಿಗಳನ್ನು ನಂಬಿ ವಿನಾಃಕಾರಣ ಅಮಾಯಕ ವ್ಯಕ್ತಿಗಳಿಗೆ ತಡೆಯೊಡ್ಡಿ ಹಲ್ಲೆ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಮಕ್ಕಳ ಕಳ್ಳತನ ಬಗ್ಗೆ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಡಿಸುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Bellary; ಜೈಲಿನಲ್ಲಿಂದು ದರ್ಶನ್ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು
Darshan ಭೇಟಿಗೆ ಮಾಹಿತಿ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು
Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.