ವಲಸಿಗರ ಸಾಗಾಟಕ್ಕೆ ವಿಶೇಷ ರೈಲು
Team Udayavani, May 18, 2020, 5:33 PM IST
ಸಾಂದರ್ಭಿಕ ಚಿತ್ರ
ಹೊಸಪೇಟೆ: ನಗರ ರೈಲ್ವೆ ನಿಲ್ದಾಣದಿಂದ ಹೊರ ರಾಜ್ಯದ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಭಾನುವಾರ ಉತ್ತರ ಪ್ರದೇಶದತ್ತ ತೆರಳಿತು.
ಉಪವಿಭಾಗಾಧಿಕಾರಿ ಶೇಖ್ ತನ್ವೀರ್ ಆಸೀಫ್, ತಹಶೀಲ್ದಾರ್ ವಿಶ್ವನಾಥ ಮತ್ತು ಸಿಬ್ಬಂದಿ 1452 ವಲಸಿಗರಿಗೆ ಶುಭಹಾರೈಸಿ, ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು. ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಉತ್ತರಪ್ರದೇಶದ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾಗೂ ತೋರಣಗಲ್ಲು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ, ಪ್ರಮಾಣಪತ್ರ ವಿತರಿಸಿ, ರೈಲ್ವೆ ಟಿಕೆಟ್ ನೀಡಲಾಗಿತ್ತು.
ಅವರಿಗೆ ನೀಡಲಾದ ಟಿಕೆಟ್ ಹಿಂಬದಿಯಲ್ಲಿ ಬರೆಯಲಾದ ಬೋಗಿ ಮತ್ತು ಸೀಟ್ ಸಂಖ್ಯೆಯಲ್ಲಿ ಆಸೀನರಾಗುವಂತೆ ಸೂಚಿಸಲಾಗಿತ್ತು. ಉತ್ತರ ಪ್ರದೇಶದ ಆಗ್ರಾ, ಅಲಿಘರ್, ಅಜಂಘರ್, ಲಕ್ನೋ, ಅಲಹಾಬಾದ್, ಅಮೇಥಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ತೆರಳಲು ರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸಿದರು.
ಉತ್ತರ ಪ್ರದೇಶಕ್ಕೆ ಈ ರೈಲು ತೆರಳಲಿದ್ದು, 34 ಗಂಟೆಗಳ ಪ್ರಯಾಣದ ಅವಧಿಯದ್ದಾಗಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.