ಹೊಸಪೇಟೆ: ಲಂಬಾಣಿ ಕಸೂತಿಗೆ ಗಿನ್ನಿಸ್ ದಾಖಲೆ ಮೆರುಗು- ಪ್ರಧಾನಿ ಮೋದಿ ಮೆಚ್ಚುಗೆ
ಅಪರೂಪದ ಕ್ಷಣಕ್ಕೆ ಹಂಪಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಸಾಕ್ಷಿಯಾಗಿದೆ.
Team Udayavani, Jul 11, 2023, 4:30 PM IST
ಹೊಸಪೇಟೆ: ವಿವಿಧ ಬಣ್ಣದ ಹಲವು ಸಣ್ಣ ತುಣುಕುಗಳನ್ನು ದಾರದಿಂದ ಹೊಲಿದು ಜೋಡಿಸಿ, ಅದರ ಮೇಲೆ ಕಸೂತಿ ಮಾಡುವ ಲಂಬಾಣಿ ಮಹಿಳೆಯರ ಕಲೆ, ಶ್ರಮ ಸಂಸ್ಕೃತಿಯ ಪ್ರತೀಕ. ಆದಿ ಕಾಲದ ಮಾನವನ ಸುಪ್ತ ಪ್ರಜ್ಞೆಯಲ್ಲಿ ಅರಳಿದ ಕಲೆಗಳು ಇಂದು ತಂತ್ರಜ್ಞಾನದ ಅತ್ಯುನ್ನತ ಮಟ್ಟ ತಲುಪಿವೆ.
ತಾಂತ್ರಿಕ ಕಾಲಘಟ್ಟದಲ್ಲೂ ಲಂಬಾಣಿ ಮಹಿಳೆಯರು ಉಳಿಸಿ ಬೆಳೆಸಿಕೊಂಡು ಬಂದ ಕಸೂತಿ ಕಲೆ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸೇರಿದ ಅಪರೂಪದ ಕ್ಷಣಕ್ಕೆ ಹಂಪಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ಸಾಕ್ಷಿಯಾಗಿದೆ.
ಸೋಮವಾರ ವಿಶ್ವವಿಖ್ಯಾತ ಹಂಪಿಯ ಎದುರು ಬಸವಣ್ಣ ಮಂಟಪದ ಬಳಿ ಲಂಡನ್ ಗಿನ್ನಿಸ್ ಬುಕ್ ಆಫ್ ರೆಕಾರ್ಡ್‌ನ ಅಧಿಕೃತ ತೀರ್ಪುಗಾರ ರಿಷಿನಾಥ್, ಲಂಬಾಣಿ ಕಸೂತಿ ಕಲೆಗೆ ಸಂದ ಗಿನ್ನಿಸ್ ರೆಕಾರ್ಡ್ ಪ್ರಮಾಣ ಪತ್ರವನ್ನು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ ಮೋಹನ್ ಅವರಿಗೆ ಹಸ್ತಾಂತರಿಸಿದರು.
ಸಂಡೂರಿನ ಲಂಬಾಣಿ ಕಲಾ ಕೇಂದ್ರದ 450ಕ್ಕೂ ಹೆಚ್ಚು ಮಹಿಳೆಯರು 1755 ವಿವಿಧ ರಚನಾ ಕ್ರಮವುಳ್ಳ ಹಸ್ತದಿಂದ ರಚಿಸಿದ ಕಸೂತಿಗಳನ್ನು ಪ್ರದರ್ಶನಕ್ಕೆ ಇರಿಸಿದ್ದರು. ಈ ಹಿಂದಿನ ಗಿನ್ನೆಸ್ ದಾಖಲೆಯಲ್ಲಿ 1000 ಕಸೂತಿ ಕಲೆಗಳನ್ನು ಪ್ರದರ್ಶನಕ್ಕೆ ಇರಿಸಲಾಗಿತ್ತು.
ಲಂಬಾಣಿ ಕಸೂತಿಗೆ ಜಿಐ ಟ್ಯಾಗ್: 1988ರಲ್ಲಿ ಸಂಡೂರಿನಲ್ಲಿ ಕೇವಲ 5 ಲಂಬಾಣಿ ಮಹಿಳೆಯರಿಂದ ಆರಂಭವಾದ ಲಂಬಾಣಿ ಕುಶಲ ಕಲಾ ಕೇಂದ್ರ 600 ಕುಶಲ ಕಸೂತಿ ಕಲೆ ಕಲಿತ ಮಹಿಳೆಯರಿಂದ ನಡೆಸಲ್ಪಡುತ್ತಿದೆ. ಪಾರಂಪರಿಕವಾಗಿ ಮನೆಗಳು ಹಾಗೂ
ತಾಂಡಗಳಿಗೆ ಸೀಮಿತವಾಗಿದ್ದ ಲಂಬಾಣಿ ಕಸೂತಿ ಕಲೆಗೆ ಸಾಂಸ್ಥಿಕ ರೂಪ ನೀಡಿ ಜಿಐ (ಗ್ಲೋಬಲ್ ಇಂಡಿಕೇಷನ್) ಟ್ಯಾಗ್ ಪಡೆಯುವಲ್ಲಿ ಸಂಡೂರಿನ ಕಲಾ ಕೇಂದ್ರ ಯಶಸ್ವಿಯಾಗಿದೆ. ವಿವಿಧ ರೀತಿಯ 29 ಕಲಾತ್ಮಕ ಕಸೂತಿಗಳನ್ನು ಇಲ್ಲಿ ಮಾಡಲಾಗುತ್ತಿದೆ. ಈ ಕೇಂದ್ರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ, ಯುನೆಸ್ಕೋ ಮನ್ನಣೆ ಹಾಗೂ ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿ ಲಭಿಸಿದೆ. ಈಗ ಹಂಪಿಯಲ್ಲಿ ಜಿ20 ಶೃಂಗ ಸಭೆಯಲ್ಲಿ ಗಿನ್ನಿಸ್ ದಾಖಲೆಯೂ ಮುಡಿಗೇರಿದೆ.
ಪ್ರಧಾನಿ ಮೋದಿ ಮೆಚ್ಚುಗೆ
ಲಂಬಾಣಿ ಕಸೂತಿ ಗಿನ್ನಿಸ್ ದಾಖಲೆ ಸೇರಿದ್ದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಶ್ಲಾಘನೀಯ ಪ್ರಯತ್ನ. ಇದು ಲಂಬಾಣಿ ಕಲೆ ಮತ್ತು ಕರಕುಶಲತೆಯನ್ನು ಜನಪ್ರಿಯಗೊಳಿಸುತ್ತದೆ. ಸಾಂಸ್ಕೃತಿಕ ಉಪಕ್ರಮಗಳಲ್ಲಿ ನಾರಿ ಶಕ್ತಿಯ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುತ್ತದೆ’ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿ
ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.