ಹೊಸಪೇಟೆ: ವಸಂತ ವೈಭವ ಮೆರವಣಿಗೆ ಸಂಭ್ರಮ
Team Udayavani, Feb 2, 2024, 4:10 PM IST
ಹೊಸಪೇಟೆ: ಹಂಪಿ ಉತ್ಸವ-2024ಕ್ಕೆ ಹೊಸಪೇಟೆ ನಗರಿ ಸಿಂಗಾರಗೊಂಡಿದೆ. ನಗರ ಸಂಪರ್ಕಿಸುವ ಪ್ರಮುಖ ರಸ್ತೆಗಳು ವಿದ್ಯುತ್ ದೀಪಾಲಂಕಾರದಿಂದ ಅಲಂಕೃತವಾಗಿವೆ. ಬೀದಿಗಳಿಗೆ ಅಳವಡಿಸಿರುವ ಬೆಳಕಿನ ತೋರಣ ಹಂಪಿ ಉತ್ಸವಕ್ಕೆ ಸರ್ವರನ್ನು
ಸ್ವಾಗತಿಸುತ್ತಿದೆ.
ಹಂಪಿ ಉತ್ಸವದ ಕ್ಷಣಗಣನೆ ನಡುವೆ, ಗುರುವಾರ ಹೊಸಪೇಟೆ ನಗರದ ವಡಕರಾಯನ ದೇವಸ್ಥಾನದ ಬಳಿ, ವಸಂತ ವೈಭವ ಮೆರವಣಿಗೆಗೆ ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ ಚಾಲನೆ ನೀಡಿದರು.
ಕಂಸಾಳೆ, ಪೂಜಾಕುಣಿತ, ಕರಡಿ ಮಜಲು, ಲಂಬಾಣಿ ನೃತ್ಯ, ಚಿಲಿಪಿಲಿ ಗೊಂಬೆ, ಆಲಾಯಿ ಹೆಜ್ಜೆಮೇಳ, ಸೋಮನ ಕುಣಿತ, ಮಹಿಳಾ ವೀರಗಾಸೆ, ಕೊಂಬು ಕಹಳೆ, ಚಂಡೆ ವಾದನ, ಝಾಂಜ್ ಮೇಳ, ಮೋಜಿನ ಗೊಂಬೆ, ಜಗ್ಗಲಿಗಿ, ಖಡ್ಗವರಸೆ, ನವಿಲು ಕುಣಿತ, ಮರಗಾಲು ಬೀಸು, ಕಂಸಾಳೆ, ಸಿಂಧೋಳ ಕುಣಿತ, ಸಮಾಳ ಮತ್ತು ನಂದಿಕೋಲು, ಕುದುರೆ ಕುಣಿತ, ನಾದಸ್ವರ, ಡೊಳ್ಳುಕುಣಿತ, ಕೋಲಾಟ, ಹಗಲು ವೇಷ, ತಾಷಾ ರಂಡೋಲ್, ಗೊಂದಲಿಗರಹಾಡು,ಗೊರವರ ಕುಣಿತ ಮುಂತಾದ ನೃತ್ಯ ಪ್ರಕಾರಗಳು ಮೆರವಣಿಗೆಗೆ ಮೆರಗು ತಂದವು.
ತಾಯಿ ಭುವನೇಶ್ವರಿ ದೇವಿ ಮೂರ್ತಿಯನ್ನು ಅಲಂಕೃತಗೊಂಡ ಟ್ಯಾಕ್ಟರ್ ಇರಿಸಿ ಡಾ|ಪುನೀತ್ ರಾಜ್‌ಕುಮಾರ್ ಜಿಲ್ಲಾ
ಕ್ರೀಡಾಂಗಣದವರೆಗೆ ಅದ್ಧೂರಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ಜಿಲ್ಲಾ ಧಿಕಾರಿ ಎಂ.ಎಸ್.ದಿವಾಕರ, ಜಿ.ಪಂ.
ಸಿಇಒ ಸದಾಶಿವಪ್ರಭು ಬಿ., ಉಪವಿಭಾಗಾಧಿಕಾರಿ ಮಹದ್‌ಅಲಿ ಅಕ್ರಂ ಷಾ, ತಹಶೀಲ್ದಾರ್ ವಿಶ್ವಜಿತ್ ಮೆಹ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣವರ್ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.