ಸ್ಮಾರಕ ದತ್ತು ಸ್ವೀಕಾರ ಶೀಘ್ರ ಜಾರಿ: ಸಚಿವ ರವಿ
ವಿಜಯನಗರ ವೈಭವ ಧ್ವನಿ-ಬೆಳಕು ರೂಪಕ ಪ್ರೀಮಿಯರ್ ಶೋ ಕಾರ್ಯಕ್ರಮ ವೀಕ್ಷಣೆ
Team Udayavani, Jan 9, 2020, 12:30 PM IST
ಹೊಸಪೇಟೆ: ಯಾವ್ಯಾವ ಸ್ಮಾರಕಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ ನೀಡಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಗ್ಲೋಬಲ್ ಇನ್ವೆಸ್ಟರ್ ಮೀಟ್ ಮಾಡುತ್ತಿದ್ದೇವೆ. ಸ್ಮಾರಕಗಳ ನಿರ್ವಹಣೆಗೆ ದತ್ತು ಸ್ವೀಕಾರ ಯೋಜನೆಯೂ ಸಹ ರೂಪಿಸಲಾಗುತ್ತಿದ್ದು, 15ರಿಂದ 20ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ ಅವರು ಹೇಳಿದರು.
ಹಂಪಿ ಗಜಶಾಲೆ ಮಂಟಪದ ಆವರಣದಲ್ಲಿ ಆಯೋಜಿಸಲಾಗಿರುವ ವಿಜಯನಗರ ವೈಭವ ಧ್ವನಿ ಮತ್ತು ಬೆಳಕು ರೂಪಕ ಪ್ರೀಮಿಯರ್ ಶೋ ಕಾರ್ಯಕ್ರಮ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಹಂಪಿ ಉತ್ಸವ, ಮೈಸೂರು ದಸರಾ, ಕಲ್ಯಾಣ ಕರ್ನಾಟಕ ಉತ್ಸವ, ಕಿತ್ತೂರು ಉತ್ಸವ, ಕದಂಬ ಉತ್ಸವ ಹಾಗೂ ಕರಾವಳಿ ಉತ್ಸವಗಳು ರಾಜ್ಯಮಟ್ಟದ ಉತ್ಸವಗಳನ್ನಾಗಿ ಆಚರಿಸುವಂತೆ ಸಲಹೆಗಳು ಬಂದಿದ್ದು, ಅವುಗಳನ್ನು ನ್ಯೂ ಟೂರಿಸಂ ಪಾಲಿಸಿ-2020-25ರಲ್ಲಿ ಸೇರಿಸಲಾಗುವುದು ಎಂದರು.
ಹಂಪಿ ಉತ್ಸವ ದಿನಾಂಕ ನಿಗದಿಗೆ ಸಂಬಂಧಿಸಿದಂತೆ ಐತಿಹಾಸಿಕ ಹಿನ್ನೆಲೆ ಮತ್ತು ಧಾರ್ಮಿಕ ನಂಬುಗೆ ಜೋಡಿಸಿದಾಗ ಮಾತ್ರ ದಿನಾಂಕ ಬದಲಾವಣೆಗಳಾಗಲು ಸಾಧ್ಯವಿಲ್ಲ. ಉತ್ಸವ ದಿನಾಂಕ ನಿಗದಿಗೆ ಸಂಬಂಧಿಸಿದಂತೆ ಇತಿಹಾಸ ತಜ್ಞರು ಹಾಗೂ ನಿರ್ದೇಶಕರಿಗೆ ಸೂಚಿಸಿದ್ದು, ಅವರು ಅಧ್ಯಯನ ನಡೆಸಿ ದಿನಾಂಕದ ನಿಗದಿಗೆ ಸಲಹೆ ನೀಡಲಿದ್ದಾರೆ. ನಂತರ ಕ್ರಮವಹಿಸಲಾಗುವುದು ಎಂದು ಹೇಳಿದ ಸಚಿವ ರವಿ ಅವರು ನವೆಂಬರ್‌ನಲ್ಲಿ ಅತಿವೃಷ್ಟಿ ಹಾಗೂ ಇನ್ನಿತರ ಕಾರಣಗಳಿಂದ ಆಚರಿಸಲು ಆಗಲಿಲ್ಲ ಎಂದರು. ವಿಜಯನಗರ ವೈಭವ, ಸಂಸ್ಕೃತಿ,
ಕಲೆ, ಶ್ರೀಮಂತಿಕೆ, ತಾಂತ್ರಿಕತೆಯನ್ನು ಇಂದಿನ ಪೀಳಿಗೆಗೆ ತಿಳಿಸಿಕೊಡಬೇಕು ಎಂಬ ಸದುದ್ದೇಶದಿಂದ ಹಂಪಿ ಉತ್ಸವ ಆಚರಿಸಲಾಗುತ್ತಿದೆ ಎಂದರು. ಸಿಎಎ ಕುರಿತು ವಾಸ್ತವತೆ ತಿಳಿಸಿಕೊಡುವ ಕೆಲಸವಾಗಬೇಕಿದೆ. ಇದು ಯಾರದೋ ಪೌರತ್ವ ಕಿತ್ತುಕೊಳ್ಳುವ ಕಾಯ್ದೆಯಲ್ಲ. ಮಾನವೀಯ ನೆಲೆಗಟ್ಟಿನಲ್ಲಿ ಸಂವಿಧನಾತ್ಮಕವಾಗಿ ಆಶ್ರಯ ಕೋರಿ ಬಂದವರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ. ಇದರಿಂದ ದೇಶದ ಮುಸ್ಲಿಂ ಬಾಂಧವರು ಭಯಪಡುವ ಅವಶ್ಯಕತೆ ಇಲ್ಲ ಎಂದರು.
ಜಿಲ್ಲಾಧಿ ಕಾರಿ ಎಸ್.ಎಸ್. ನಕುಲ್ ಮಾತನಾಡಿ, ಧ್ವನಿ ಮತ್ತು ಬೆಳಕು ಸಂಯೋಜಿಸಿ ರೂಪಕದ ಮುಖಾಂತರ ವಿಜಯನಗರ ವೈಭವ ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಸುಂದರವಾದ ಬ್ಯಾಕ್ ಡ್ರಾಪ್ ಜತೆಗೆ ಸುಂದರವಾದ ಪ್ರದರ್ಶನ ಇದಾಗಿದೆ.
3ರಿಂದ 4 ಸಾವಿರ ಜನರಿಗೆ ನೋಡುವುದಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಜ.10ರಿಂದ 16ರವರೆಗೆ ಸಂಜೆ 7ರಿಂದ 9:30ರವರೆಗೆ ನಡೆಯಲಿದೆ. ಜನರು ಬಂದು ವೀಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು.
ಡ್ಯಾನ್ಸ್ ಕೋರಿಯಾಗ್ರಾಫರ್ ಡಾ| ಶೀಲಾ ಶ್ರೀಧರ್ ಮಾತನಾಡಿ, ಇದು 8ನೇ ಧ್ವನಿ ಮತ್ತು ಬೆಳಕು ರೂಪಕಕ್ಕೆ ಡ್ಯಾನ್ಸ್ ಕೊರಿಯಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದೇನೆ. ಹೊಸಪೇಟೆ ಮಕ್ಕಳೇ ಶೇ.90ರಷ್ಟು ಇದ್ದಾರೆ. ಉಳಿದವರು ನುರಿತ ಕಲಾವಿದರಿದ್ದಾರೆ. ಸ್ಥಳೀಯ ಮಕ್ಕಳಿಗೆ ಪ್ರತಿಭೆ ಪ್ರದರ್ಶಿಸುವುದಕ್ಕೆ ಒಳ್ಳೆಯ ಅವಕಾಶ. ವಿಜಯನಗರ ಸಾಮ್ರಾಜ್ಯದ ಪ್ರದೇಶದಲ್ಲಿಯೇ ಈ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟಿರುವುದು ಸಂತಸದ ತಂದಿದೆ. ಎಲ್ಲರ ಸಹಕಾರದೊಂದಿಗೆ ಪ್ರದರ್ಶನ ಮಾಡುತ್ತಿದ್ದೇವೆ ಎಂದರು. ಈ ಸಂದರ್ಭದಲ್ಲಿ ಶಾಸಕ ಆನಂದಸಿಂಗ್, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.