ಹಂಪಿಯಲ್ಲಿ ಸರಳ ಬ್ರಹ್ಮರಥೋತ್ಸವ
ಹಂಪಿ ವಿರೂಪಾಕ್ಷನಿಗೆ ಸುವರ್ಣ ಮುಖ-ನವರತ್ನ ಖಚಿತ ಕಿರೀಟವಿಲ್ಲದೇ ಅಲಂಕಾರ
Team Udayavani, Apr 9, 2020, 4:07 PM IST
ವಿರೂಪಾಕ್ಷೇಶ್ವರ ಸ್ವಾಮಿ ಮಡಿತೇರಿಗೆ ವಿದ್ಯಾರಣ್ಯ ಭಾರತಿ ಶ್ರೀಗಳು ಚಾಲನೆ ನೀಡಿದರು.
ಹೊಸಪೇಟೆ: ಲಾಕ್‌ಡೌನ್ ಹಿನ್ನೆಲೆಯಲ್ಲಿ ದಕ್ಷಿಣಕಾಶಿ ಖ್ಯಾತಿಯ ಹಂಪಿ ವಿರೂಪಾಕ್ಷೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಬುಧವಾರ ಸರಳವಾಗಿ ನಡೆಯಿತು. ವಿರೂಪಾಕ್ಷೇಶ್ವರ ಸ್ವಾಮಿ ದೇವಾಲಯದ ಪ್ರಾಂಗಣದಲ್ಲಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ ಮಡಿತೇರು ಸಂಜೆ ರಥೋತ್ಸವ ನಡೆಯಿತು.
ವಿಜಯನಗರ ಅರಸರ ಕಾಲದಿಂದಲೂ ವೈಭವದಿಂದ ನಡೆಯುತ್ತಿದ್ದ ವಿರೂಪಾಕ್ಷೇಶ್ವರ ಸ್ವಾಮಿ, ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ದೇವಸ್ಥಾನದ ಪಟ್ಟದ ಆನೆ ಲಕ್ಷ್ಮೀ, ಅರ್ಚಕರು, ಅಧಿಕಾರಿ ಹಾಗೂ ಸಿಬ್ಬಂದಿಗಳಷ್ಟೇ ಸಾಕ್ಷಿಯಾದರು. ರಥೋತ್ಸವದ ಅಂಗವಾಗಿ ಸಿಂಹ ವಾಹನೋತ್ಸವ, ಚಂದ್ರ ಮಂಡಲ ವಾಹನೋತ್ಸವ, ಸೂರ್ಯಪ್ರಭಾ ವಾಹನೋತ್ಸವ, ಶೇಷ ವಾಹನೋತ್ಸವ, ಪುಷ್ಪ ಮಂಟಪ ವಾಹನೋತ್ಸವ, ಗಜ ವಾಹನೋತ್ಸವ, ವಿರೂಪಾಕ್ಷೇಶ್ವರ ಕಲ್ಯಾಣೋತ್ಸವ, ತೆಪ್ಪೋತ್ಸವ ಹಾಗೂ ರಜತ ನಂದಿ ವಾಹನೋತ್ಸವ ಸೇರಿದಂತೆ ವಿವಿಧ ಪೂಜಾ ವಿಧಾನಗಳು ನಡೆದವು.
ದೇವಸ್ಥಾನದ ಪ್ರಧಾನ ಅರ್ಚಕ ಪಿ. ಶ್ರೀನಾಥ ಶರ್ಮಾ, ಮುರಳೀಧರ ಶಾಸ್ತ್ರಿ, ಜೆ.ಎಸ್. ಶ್ರೀನಾಥ ಶರ್ಮಾ ಸೇರಿದಂತೆ ಇತರರು ಪೂಜಾ-ವಿಧಿ -ವಿಧಾನಗಳನ್ನು ನೆರವೇರಿಸಿದರು. ಸಾರ್ವಜನಿಕರ ಪ್ರವೇಶ ನಿಷೇಧದ ನಡುವೆಯೂ ನಿತ್ಯ ವಿರೂಪಾಕ್ಷನಿಗೆ ತ್ರಿಕಾಲ ಪೂಜೆ, ನೈವೇದ್ಯ ಸೇರಿದಂತೆ ವಿಶೇಷ ಪೂಜೆಗಳು ನಿರಂತರವಾಗಿ ನಡೆಯುತ್ತಿವೆ.
ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಹಂಪಿ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಇತರೆ ಎಲ್ಲಾ ಪುರಾತನ ದೇಗುಲಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಕಳೆದ ಮಾ.21 ರಿಂದ ನಿಷೇಧ ಹೇರಲಾಗಿತ್ತು. ಈ ಆದೇಶದ ಅನ್ವಯ ಪ್ರವೇಶ ದ್ವಾರವನ್ನು ಬಂದ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಬೇಕಿದ್ದ ಬ್ರಹ್ಮರಥೋತ್ಸವಕ್ಕೆ ಕೊರೊನಾ ಅಡ್ಡಿಯುಂಟು ಮಾಡಿರುವುದು ಭಕ್ತರಿಗೆ ತೀವ್ರ ಬೇಸರ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.