ಕೋವಿಡ್ ನಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ
ವಿಶೇಷ ಪ್ಯಾಕೇಜ್ ಘೋಷಿಸಿ ದೇಶದ ಆರ್ಥಿಕತೆಗೆ ನಾಂದಿ: ಸಚಿವ ಆನಂದ ಸಿಂಗ್
Team Udayavani, May 14, 2020, 6:06 PM IST
ಹೊಸಪೇಟೆ: ಉಸ್ತುವಾರಿ ಸಚಿವ ಆನಂದ ಸಿಂಗ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಹೊಸಪೇಟೆ: ಪ್ರಧಾನಿ ಮೋದಿಯವರ ಸಮರ್ಥ ಆಡಳಿತದ ಪರಿಣಾಮ ದೇಶದಲ್ಲಿ ಕೋವಿಡ್ ನಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ವೈರಸ್ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ವಿಶ್ವದ ಬಲಾಡ್ಯ ರಾಷ್ಟ್ರಗಳು, ನಲುಗಿಹೋಗಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ತರುವಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಅಮೆರಿಕಾ, ಇಟಲಿಯಂತಹ ಬಲಿಷ್ಠ ರಾಷ್ಟ್ರಗಳು ಕೊರೊನಾ ಹೊಡೆತಕ್ಕೆ ಸಂಕಷ್ಟ ಅನುಭವಿಸಿವೆ. ಬೇರೆ ದೇಶಕ್ಕೆ ಹೋಲಿಕೆ ಮಾಡಿದರೆ, ನಮ್ಮ ದೇಶದಲ್ಲಿ ಹೆಚ್ಚಿನ ಹಾನಿಯಾಗಿಲ್ಲ ಎಂದರು.
ಲಾಕ್‌ಡೌನ್ ಜಾರಿ ಹಿನ್ನೆಲೆಯಲ್ಲಿ ಬಡಜನರು, ಮಧ್ಯಮವರ್ಗ, ಕೂಲಿಕಾರರು, ಕಾರ್ಮಿಕರು, ಸಂಕಷ್ಟ ಅನುಭವಿಸುತ್ತಿದ್ದಾರೆ. ದೇಶದ ಆರ್ಥಿಕತೆ ಕುಗ್ಗಿದೆ. ಇಂತಹ ಹೊತ್ತಿನಲ್ಲಿ 20 ಲಕ್ಷ ಕೋಟಿ ರೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಆರ್ಥಿಕತೆಗೆ ನಾಂದಿ ಹಾಡಿದ್ದಾರೆ ಎಂದರು. ಕೊರೊನಾ ವೈರಸ್‌ನ್ನು ತಂತ್ರಜ್ಞಾನದಿಂದ ಅಳಿಸಲು ಅಸಾಧ್ಯ. ಹಿಂದೂ ಧರ್ಮದ ಆಚಾರ ವಿಚಾರಗಳಿಂದ ಅಳಿಸಲು ಸಾಧ್ಯವಿದೆ. ಪ್ರಕೃತಿ ವಿರುದ್ಧ ಮಾನವ ಹೋದಾಗ ಸಮಸ್ಯೆಗಳು ಉಂಟಾಗುತ್ತದೆ. ಅದನ್ನು ಪಕ್ಷಾತೀತವಾಗಿ ಕೋವಿಡ್ ವೈರಸ್ ವಿರುದ್ಧ ಹೋರಾಡಬೇಕಾಗಿದೆ. ಟೀಕೆ ಮಾಡುವುದನ್ನು ಬಿಟ್ಟು ಸಲಹೆ ನೀಡಬೇಕು. ಪ್ರತಿಯೊಬ್ಬರು ಯೋಧರ ರೀತಿಯಾಗಿ ಕೊರೊನಾ ವಿರುದ್ಧ ಹೋರಾಟ ಮಾಡಬೇಕು. ನಿಜವಾದ ಜೀವನ ಇನ್ನ ಮುಂದೆ ಪ್ರಾರಂಭವಾಗುತ್ತದೆ. ಹಿಂದಿನಂತೆ ಜೀವನ ನಡೆಸಲು ಸಾಧ್ಯವಿಲ್ಲ ಎಂದರು. ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ, ಮಂಡಲಾಧ್ಯಕ್ಷ ಬಸವರಾಜ ನಲತ್ವಾಡ್, ಅನಂತ ಪದ್ಮನಾಭ ಸ್ವಾಮಿ, ಸಂದೀಪ್ ಸಿಂಗ್, ಶಂಕರ ಮೇಟಿ, ಜೀವರತ್ಮಂ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.