ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠ
Team Udayavani, May 15, 2020, 2:56 PM IST
ಹೊಸಪೇಟೆ: ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ವಿಜಯನಗರ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಬಾಕಿ ಉಳಿದಿರುವ ಪಠ್ಯಕ್ರಮವನ್ನು ಆನ್‌ಲೈನ್ ಮೂಲಕ ನೀಡಲಾಗುತ್ತಿದೆ ಎಂದು ಕಾಲೇಜಿನ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ ಹಾಗೂ ಪ್ರಾಂಶುಪಾಲ ಪ್ರಭಯ್ಯ ತಿಳಿಸಿದರು.
ನಗರದ ವಿಜಯನಗರ ಕಾಲೇಜಿನಲ್ಲಿ ಮಂಗಳವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೊರೊನಾ ನಿಯಂತ್ರಣಕ್ಕಾಗಿ ಮಾ.14 ರಿಂದ ಮೇ 17ರ ಮುಂದಿನ ಆದೇಶದ ವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಈ ಸಮಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಬಾಕಿ ಉಳಿದಿರುವ ಪಠ್ಯಕ್ರಮವನ್ನುಆನ್‌ಲೈನ್ ಮೂಲಕ ನೀಡಲಾಗುತ್ತಿದೆ. ಕಾಲೇಜಿನ ಬಿಎ, ಬಿಕಾಂ, ಬಿಎಸ್‌ಸಿ, ಬಿಸಿಎ, ಪಿಜಿಐ ಪಿಜಿ ಸುಮಾರು 3276 ವಿದ್ಯಾರ್ಥಿಗಳಿದ್ದು, ಇದರಲ್ಲಿ 2274 ವಿದ್ಯಾರ್ಥಿಗಳಿಗೆ ಶೇ.69 ರಷ್ಟು ಆನ್ ಲೈನ್ ಮೂಲಕ ಬೋಧನೆ ಮಾಡಿಸಿ, ಪಠ್ಯಕ್ರಮ ಪೂರ್ಣಗೊಳಿಸುವ ಪ್ರಯತ್ನ ಮಾಡಲಾಗಿದೆ. ಕಾಯಂ ಮತ್ತು ಅತಿಥಿ ಬೋಧಕ ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ಆನ್‌ಲೈನ್ ಮೂಲಕ ಬೋಧನೆ ಮಾಡುತ್ತಿದೆ ಎಂದರು.
ಯುಜಿಸಿ, ಕಾಲೇಜ್ ಶಿಕ್ಷಣ ಆಯುಕ್ತರು ಹಾಗೂ ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದ ಶೇ.31 ರಷ್ಟು ವಿದ್ಯಾರ್ಥಿಗಳಿಗೆ ಲಾಕ್‌ಡೌನ್ ತೆರವು ನಂತರ ವಿಶ್ವವಿದ್ಯಾಲಯದ ಆದೇಶದಂತೆ ನಡೆಸಲಾಗುವುದು. ಜುಲೈ/ ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಯುವ ಸಂಭವವಿದೆ ಎಂದರು. ಪ್ರಾಧ್ಯಾಪಕ ಮೃತ್ಯುಂಜಯ ರುಮಾಲೆ, ವೆಂಕಟೇಶ ಬೋವಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.