ಮಹಿಳೆಯರು ಪ್ರಗತಿ ಸಾಧಿಸಿ: ಅಪರ್ಣಾ
Team Udayavani, May 30, 2020, 4:02 PM IST
ಹೊಸಪೇಟೆ:ತರಬೇತಿ ಕಾರ್ಯಾಗಾರದಲ್ಲಿ ಅಪರ್ಣಾ ಕೋಲ್ತೆ ಮಾತನಾಡಿದರು.
ಹೊಸಪೇಟೆ: ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸಲು ಉತ್ಪಾದನಾ ಸಕ್ರಿಯವಾಗಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಬಳ್ಳಾರಿ ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕಿ ಅಪರ್ಣಾ ಕೋಲ್ತೆ ಸಲಹೆ ನೀಡಿದರು.
ತಾಲೂಕಿನ ವೆಂಕಟಾಪುರ 76 ಕ್ಯಾಂಪಿನಲ್ಲಿ ಪೇಪರ್ ಬ್ಯಾಗ್, ಮಾಸ್ಕ್, ವಯರ್ ಬ್ಯಾಗ್ ತಯಾರಿಕೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಮಹಿಳೆಯರು ಉತ್ಪಾದನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಆರ್ಥಿಕ ಉನ್ನತಿ ಹಾಗೂ ದೇಶದ ಏಳಿಗೆಗೆ ಕಾರಣವಾಗಬೇಕಿದೆ ಎಂದರು. ಸ್ಥಿರಾ ಸಂಸ್ಥೆಯ ಕಾರ್ಯದರ್ಶಿ ಬಿ. ರೇಣುಕಾ ಮಾತನಾಡಿ, ತರಬೇತಿ ಅವಧಿಯಲ್ಲಿ ಮಹಿಳೆಯರಿಗೆ ಸಾಮಾಜಿಕ ಅಂತರದ ಮೂಲಕ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸ್ಯಾನಿಟೈಸರ್ ಬಳಕೆ ಕೋವಿಡ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.
ಉದಯ್ ಪೇಪರ್ ಕ್ರಾಫ್ಟ್ ಡಿ.ಲಕ್ಷ್ಮಣ, ಕೊಟ್ಟೂರಿನ ಸುರಕ್ಷಾ ಅಸೋಷಿಯೇಷನ್ ಬಿ.ನಿಂಗಮ್ಮ, ಸುರಕ್ಷಿತ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಆಂಜನೇಯ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆ ರಾಮಾಸಾಗರ ವಲಯದ ಮೇಲ್ವಿಚಾರಕ ಬಸಯ್ಯಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.