ಮೈಲಾರ ಜಾತ್ರೆಗೆ ಭರದ ಸಿದ್ಧತೆ
ದೇವಾಲಯ ಸುತ್ತಲಿನ ಅಕ್ರಮ ಅಂಗಡಿಗಳ ತೆರವು
Team Udayavani, Feb 7, 2020, 5:19 PM IST
ಹೂವಿನಹಡಗಲಿ: ನಾಡಿನ ಸುಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ಶ್ರೀ ಮೈಲಾರ ಜಾತ್ರೆ ಹಿನ್ನೆಲೆಯಲ್ಲಿ ಫೆ.11ರಂದು ಕಾರ್ಣಿಕ ಜರುಗಲಿದ್ದು ಕಾರ್ಣಿಕ ನುಡಿ ಆಲಿಸಲು ರಾಜ್ಯ ಹಾಗೂ ಹೊರ ರಾಜ್ಯದಿಂದಲೂ ಲಕ್ಷಾಂತರ ಸಂಖ್ಯೆ ಭಕ್ತರು ಆಗಮಿಸುತ್ತಾರೆ. ಇಷ್ಟೊಂದು ದೊಡ್ಡ ಪ್ರಮಾಣದ ಭಕ್ತರ ಸಂಖ್ಯೆಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಡಳಿತ ಒಳಗೊಂಡಂತೆ ತಾಲೂಕು ಆಡಳಿತ 7-8 ದಿನಗಳಿಂದಲೂ ಭರದ ಸಿದ್ಧತೆ ನಡೆಸಿದೆ.
ದೇವಸ್ಥಾನದ ಸುತ್ತಮುತ್ತಲಿರುವ ಅತಿಕ್ರಮಿತ ಅಂಗಡಿ ಮಂಗಟ್ಟುಗಳು ತೆರವು ಕಾರ್ಯ ನಡೆಯುತ್ತಿದೆ. ದೇವಸ್ಥಾನದ ಗೋಪುರದ ಮುಂದೆ, ದೇವಸ್ಥಾನಕ್ಕೆ ತೆರಳುವ ಕಮಾನು ರಸ್ತೆ ಇಕ್ಕೆಲಗಳಲ್ಲಿ ಅತಿಕ್ರಮಣ ಮಾಡಿದ್ದ ಅಂಗಡಿಗಳನ್ನು ತೆರವು ಮಾಡಿಸಿ ಭಕ್ತರ ಸಂಚಾರಕ್ಕೆ ಆನುಕೂಲ ಮಾಡಿಕೊಡಲಾಗಿದೆ. ಜಾತ್ರೆಗೆ ಬರುವ ಅಪಾರ ಸಂಖ್ಯೆ ಭಕ್ತರಿಗೆ ಕುಡಿಯುವ ನೀರು ಪೂರೈಸಲು ಡೆಂಕನ ಮರಡಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟ್ಯಾಂಕ್‌ನ್ನು ಸುಸ್ಥತಿಗೆ ತರಲಾಗಿದೆ. ಗ್ರಾಪಂ ಆರು ಬೋರ್‌ವೆಲ್‌ಗಳಿಗೆ ಹೊಸದಾಗಿ ಮೋಟರ್ ವ್ಯವಸ್ಥೆ ಮಾಡಲಾಗಿದೆ. ನೂತನವಾಗಿ ಎರಡು ಬೋರ್‌ವೆಲ್ ಸಹ ಕೊರೆಸಲಾಗಿದೆ. ಜಾತ್ರೆ ಪ್ರದೇಶದಲ್ಲಿ ಭಕ್ತರಿಗೆ ಅನುಕೂಲವಾಗಲು 23 ಸಿಸ್ಟನ್ ಗಳನ್ನು ಸಜ್ಜುಗೊಳಿಸಲಾಗಿದೆ. ಆಲ್ಲದೆ ಆಗತ್ಯ ಬಿದ್ದಲ್ಲಿ ಟ್ಯಾಂಕರ್ ಮೂಲಕವಾಗಿ ನೀರನ್ನು ಸರಬರಾಜು ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ.
ನೈರ್ಮಲ್ಯಕ್ಕೆ ಅಗತ್ಯವಿರುವ ಪಿನಾಯಿಲ್ ಬ್ಲಿಚಿಂಗ್ ಪೌಡರ್ ಸಾಕಷ್ಟು ಪ್ರಮಾಣದಲ್ಲಿ ತರಿಸಿಕೊಳ್ಳಲಾಗಿದೆ. ಭಕ್ತರಿಗೆ ಸಮರ್ಪಕ ಮೂಲ ಸೌಕರ್ಯ ಒದಗಿಸುವ ಕಾರ್ಯದ ಮೇಲುಸ್ತುವಾರಿಗೆ ತಾಪಂ ಆರು ಜನ ಅಧಿಕಾರಿಗಳ ತಂಡ ರಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.