ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯದ ಅಮಲು!

Team Udayavani, Jun 5, 2021, 10:27 AM IST

ಹಳ್ಳಿಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯದ ಅಮಲು!

ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ಒಂದೆಡೆ ಕೋವಿಡ್ ಸೋಂಕು ಹೆಚ್ಚುತ್ತಿದೆ. ಹಳ್ಳಿಗಳಲ್ಲೂ ಸೋಂಕು ತನ್ನ ಪ್ರಭಾವ ತೋರಿಸುತ್ತಿದೆ. ಇನ್ನೊಂದೆಡೆ ಹಳ್ಳಿಗಳಲ್ಲಿ ಮದ್ಯ ಅಕ್ರಮ ಮಾರಾಟವೂ ಜೋರಾಗಿದ್ದು ಇದನ್ನು ತಡೆಯುವವರ್ಯಾರು ಎಂಬುದೇ ಪ್ರಶ್ನೆಯಾಗಿದೆ.

ತಾಲೂಕಿನ ಅನೇಕ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಪರೋಕ್ಷವಾಗಿ ಸರಕಾರವೇ ಇದನ್ನು ಬೆಂಬಲಿಸುತ್ತಿದೆಯೇ ಎಂಬ ಶಂಕೆ ಮೂಡಿದೆ. ಮದ್ಯ ಮಾರಾಟ ನಡೆಯುತ್ತಿದ್ದರೂ ಪೊಲೀಸ್‌ ಇಲಾಖೆ ಜಾಣ ಮೌನ ವಹಿಸಿದೆ. ಈ ವರೆಗೂ ಸರಕಾರ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್‌ ಹಾಕದೆ, ಅಬಕಾರಿ ಇಲಾಖೆ ಗುರಿ ಮುಟ್ಟುವ ತವಕದಲ್ಲಿ ಹಳ್ಳಿ ಜನರ ಆರೋಗ್ಯದೊಂದಿಗೆ ಆಟವಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಪಟ್ಟಣದಲ್ಲಿರುವ ಮದ್ಯದಂಗಡಿಯವರು ಸುತ್ತಮುತ್ತಲಿನ ಹಳ್ಳಿಗಳಿಗೆ ಮದ್ಯ ಸರಬರಾಜು ಮಾಡುತ್ತಾರೆ. ಹೀಗೆ ಬಂದ ಮದ್ಯ ಹಳ್ಳಿಗಳಲ್ಲಿ ನಿರಾತಂಕವಾಗಿ ಮಾರಾಟವಾಗುತ್ತಿದೆ. ಆಗೊಮ್ಮೆ ಈಗೊಮ್ಮೆ ಪೊಲೀಸರು ಅಕ್ರಮವಾಗಿ ಮದ್ಯ ಮಾರುವವರ ವಿರುದ್ಧ ಪ್ರಕರಣ ದಾಖಲಿಸಿ ಸುಮ್ಮನಾಗುತ್ತಿದ್ದಾರೆ ಹೊರತು ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ. ಇದರಿಂದ ಅದೇ ರಾಗ ಅದೇ ಹಾಡು ಎಂಬಂತೆ ಹಳ್ಳಿಯಲ್ಲಿ ಮದ್ಯದ ಅಮಲು ಹೆಚ್ಚುತ್ತಲೇ ಇದೆ ಹೊರತು ಕಡಿಮೆಯಾಗುತ್ತಿಲ್ಲ.

ಒಮ್ಮೊಮ್ಮೆ ಪೊಲೀಸರು ಮದ್ಯ ಅಕ್ರಮ ಮಾರಾಟ ಪತ್ತೆ ಹಚ್ಚುವ ನೆಪದಲ್ಲಿ ಯಾರು ಮದ್ಯ ಮಾರಾಟ ಮಾಡುತ್ತಿಲ್ಲವೋ ಅಂತಹವರ ಮನೆಗಳನ್ನು ಪರಿಶೀಲಿಸಿ ಬರಿಗೈಲಿ ವಾಪಸ್ಸಾಗಿದ್ದೂ ಇದೆ. ಇದು ಮದ್ಯ ಮಾರದವರ ಮುಜುಗರಕ್ಕೆ ಕಾರಣವಾದರೆ ನಿಜವಾಗಿಯೂ ಮದ್ಯ ಮಾರುವವರು ಭಯವಿಲ್ಲದೆ ತಮ್ಮ ದಂಧೆ ಮುಂದುವರಿಸಲು ಪೊಲೀಸರೇ ಸಹಕಾರ ನೀಡಿದಂತಾಗಿದೆ ಎಂಬುದು ಅನೇಕ ಗ್ರಾಮಸ್ಥರ ಅಭಿಪ್ರಾಯವಾಗಿದೆ.

ಧಾರ್ಮಿಕ ಕಾರ್ಯಕ್ರಮದ ನೆವ: ಹಳ್ಳಿಗಳಲ್ಲಿ ದೇವಾಲಯ, ಧಾರ್ಮಿಕ ಕಾರ್ಯಕ್ರಮದ ಹೆಸರಲ್ಲಿ ಮದ್ಯ ಮಾರಾಟ ನಡೆಯುತ್ತಿರುವುದು ದೊಡ್ಡ ದುರಂತ. ದೇವಾಲಯದ ಗೋಪುರ ಕಟ್ಟಿಸಲು, ಇನ್ಯಾವುದೋ ಧಾರ್ಮಿಕ ಕಾರ್ಯಕ್ರಮಗಳಿಗೆ ಇಂತಿಷ್ಟು ಹಣ ಎಂದು ಮೊದಲೇ ವಾಗ್ಧಾನ ಮಾಡಿ ಹರಾಜು ಪ್ರಕ್ರಿಯೆಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಪಡೆಯಲಾಗುತ್ತಿದೆ ಎಂದು ತಿಳಿದು ಬಂದಿದೆ.

ಹಳ್ಳಿಗಳಲ್ಲಿ ಲಕ್ಷಾಂತರ ರೂ.ಗಳಿಗೆ ಮದ್ಯ ಮಾರಾಟದ ಹರಾಜು ನಡೆಯುತ್ತದೆ. ಉಳ್ಳವರುಹರಾಜಿನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಪಡೆದು ದೇವಾಲಯದ ಆಡಳಿತ ಮಂಡಳಿಅಥವಾ ಧಾರ್ಮಿಕ ಕಾರ್ಯಕ್ರಮಕ್ಕೆ ಸೂಚಿಸಿದ ಹಣ ನೀಡುತ್ತಾರೆ ಎನ್ನಲಾಗಿದೆ. ಸರಕಾರ ಮದ್ಯ ಮಾರಾಟಕ್ಕಾಗಿ ಅಲ್ಲಲ್ಲಿ ಎಂಎಸ್‌ಐಲ್‌ ಮಳಿಗೆ ಸ್ಥಾಪಿಸಿದ್ದರೂ ಸಹ ಗ್ರಾಮೀಣ ಪ್ರದೇಶದ ಕೆಲ ಉಳ್ಳವರು ತಮ್ಮ ಲಾಭಕ್ಕಾಗಿ ಗ್ರಾಮದಲ್ಲಿಯೇ ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬರುತ್ತಿವೆ.

ಕೋವಿಡ್  ವೈರಸ್‌ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿದ್ದರೂ ಅಕ್ರಮ ಮದ್ಯ ಮಾರಾಟ ಮಾತ್ರ ನಿಂತಿಲ್ಲ. ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಲಾಕ್‌ ಡೌನ್‌, ಸೀಲ್‌ಡೌನ್‌ ಎಲ್ಲ ಮಾಡಲಾಗಿದ್ದರೂ ಹಳ್ಳಿಗಳಲ್ಲಿ ಕದ್ದುಮುಚ್ಚಿ ಅಕ್ರಮ ಮದ್ಯ ಮಾರಾಟ ನಡೆಯುತ್ತಲೇ ಇದೆ. ಮದ್ಯ ಮಾರಾಟ ತಡೆಗೆ ಸಂಬಂಧಿಸಿದ ಇಲಾಖೆ, ಅಧಿಕಾರಿಗಳು ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ತಾಲೂಕಿನ ಮದ್ಯದಂಗಡಿ ಸನ್ನದ್ದುದಾರರು ಅಕ್ರಮ ಮಾರಾಟಕ್ಕೆ ಸಂಪೂರ್ಣ ಒತ್ತು ನೀಡುತ್ತಾರೆ. ಕಾರಣ, ಇಲಾಖೆಯವರು ಟಾರ್ಗೆಟ್‌ ಮುಟ್ಟಲು ಒತ್ತಾಯ ಮಾಡುವುದರಿಂದ ಮದ್ಯದಂಗಡಿಯವರು ಅಕ್ರಮ ಮಾರಾಟಕ್ಕೆ ಬೆಂಬಲಿಸುವುದು ಸಾಮಾನ್ಯವಾಗಿದೆ. ಇಂತಹ ಕೋವಿಡ್ ಸಮಯದಲ್ಲೂ ಕೂಡ ಮುಂಚಿತವಾಗಿಯೇ ಮದ್ಯ ಸಂಗ್ರಹಿಸಿ ಹಳ್ಳಿಗಳಲ್ಲಿ ಎಲ್ಲೆಂದರಲ್ಲಿ ಮದ್ಯ ಅಕ್ರಮ ಮಾರಾಟ ಎಗ್ಗಿಲ್ಲದೆ ನಡೆದಿದೆ. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮದ್ಯ ಅಕ್ರಮ ಮಾರಾಟ ತಡೆಯಲು ಗ್ರಾಪಂ ಅಧಿಕಾರಿಗಳು, ಸದಸ್ಯರು, ಸ್ವಯಂಸೇವಕರು ಒಳಗೊಂಡ ತಂಡ ರಚಿಸಿ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು. -ಮಲ್ಲೇಶ್‌ ಕೋಗಳಿ, ಜಿಲ್ಲಾ ಸಂಯೋಜಕ, ಗ್ರಾಕೂಸ್‌ .

ಮದ್ಯ ಅಕ್ರಮ ಮಾರಾಟ ನಿಯಂತ್ರಣಕ್ಕೆ ತರಲು ಆಯಾ ಜಿಲ್ಲೆಗಳ ಅಬಕಾರಿ ಡಿಸಿಗಳಿಗೆ ತಿಳಿಸಲಾಗುವುದು. ಮೊದಲು ಎಲ್ಲರೂ ಕೊರೊನಾದಿಂದ ಮುಕ್ತರಾಗೋಣ. ಬಳಿಕ ಮದ್ಯ ಮಾರಾಟಕ್ಕೆ ಆದ್ಯತೆ ನೀಡೋಣ. ಇಂತಹ ಸಂದಿಗ್ಧ ಪರಿಸ್ಥಿಯಲ್ಲಿ ಮದ್ಯ ಅಕ್ರಮ ಮಾರಾಟಕ್ಕೆ ಆಸ್ಪದ ನೀಡುವುದಿಲ್ಲ. ಈ ಸಂದರ್ಭದಲ್ಲಿ ಮದ್ಯ ಅಕ್ರಮ ಮಾರಾಟಕ್ಕೆ ಬೆಂಬಲಿಸಿ ಮದ್ಯ ನೀಡಿದ ಮದ್ಯದಂಗಡಿಗಳ ಪರವಾನಗಿ ರದ್ದು ಮಾಡಲಾಗುವುದು.-ಕೆ.ಗೋಪಾಲಯ್ಯ ಅಬಕಾರಿ ಸಚಿವರು

ಮದ್ಯ ಅಕ್ರಮ ಮಾರಾಟಕ್ಕೆ ಸರಕಾರವೇ ಅವಕಾಶ ಕೊಟ್ಟಂತಿದೆ. ತಾಲೂಕಿನ ಸಿಪಿಐ, ಪಿಎಸ್‌ಐಗಳು ಮದ್ಯ ಅಕ್ರಮ ಮಾರಾಟದಲ್ಲಿ ಭಾಗಿಯಾಗಿರುವ ಸಂಶಯವಿದೆ. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ, ಪ್ರಕರಣ ದಾಖಲಿಸಿಲ್ಲ. ತಾಲೂಕಿನ ಕೆಲ ಮದ್ಯದಂಗಡಿಗಳಲ್ಲಿ ಸೆಕೆಂಡ್ಸ್‌ ಮದ್ಯ ಮಾರುವವರ ವಿರುದ್ಧ ಅಬಕಾರಿ ಡಿಸಿಯವರ ಗಮನಕ್ಕೆ ತಂದರೂ ಈವರೆಗೂ ಗಮನಹರಿಸಿಲ್ಲ. -ಎಸ್‌.ಭೀಮಾನಾಯ್ಕ, ಶಾಸಕರು, ಹಗರಿಬೊಮ್ಮನಹಳ್ಳಿ.

ಏನ್‌ ಮಾಡೋದ್ರಿ ಕೊರೊನಾದಲ್ಲಿ ಕೆಲಸ ಇಲ್ದೆ ಮನೆಯಲ್ಲಿಯೇ ಇದ್ದಿವಿ. ಮನೆಗಿದ್ದರೆ ಗಂಡ ಕುಡಿಲಿಕ್ಕೆ ರೊಕ್ಕ ಕೇಳ್ತಾನ್ರಿ, ಎಲ್ಲಿಂದ ಕೊಡಬೇಕ್ರಿ. ಕೋವಿಡ್ ಅಂತಹ ಎಲ್ಲಾ ಬಂದ್‌ ಮಾಡ್ಯಾರ. ಆದ್ರ ಈ ಬ್ರ್ಯಾಂಡಿ ಬಂದ್‌ ಮಾಡೋದು ಆಗೋಲ್ದು. ನಮ್ಮ ಹಳ್ಯಾಗ ಎಲ್ಲಿಬೇಕು ಅಲ್ಲಿ ಬ್ರಾಂಡಿ ಸಿಗೋಕ್ಕತೈತಿ ಹಂಗಾ ಆಗಿ ಕುಡಿಯೋದು ಊರಾಗ ಬಾಳ ಆಗೈತಿ.-ನೊಂದ ಮಹಿಳೆ.

ಗ್ರಾಮೀಣ ಪ್ರದೇಶಗಳಲ್ಲಿ ದೈವಸ್ಥರು ಎಂದರೆ ದೇವರು ಇದ್ದಂತೆ. ಇವರನ್ನು ಜನರು ಪೂಜ್ಯ ಭಾವದಿಂದ ಕಾಣುತ್ತಾರೆ. ಕೆಲ ಹಳ್ಳಿಗಳಲ್ಲಿ ದೈವಸ್ಥರು ಇಂಥ ಅಕ್ರಮ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ತಮ್ಮ ಗೌರವ ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಜನರ ಆರೋಗ್ಯ ಕಾಪಾಡಬೇಕಾದ ಸರ್ಕಾರವೇ ಅಕ್ರಮ ಮದ್ಯ ಮಾರಾಟಕ್ಕೆ ಪರೋಕ್ಷವಾಗಿ ಅವಕಾಶ ನೀಡಿ ಆರೋಗ್ಯ ಹದಗೆಡಿಸುತ್ತಿದೆ. -ಅಕ್ಕಮಹಾದೇವಿ ಮದ್ಯ ನಿಷೇಧ ಆಂದೋಲನದ ಸಂಚಾಲಕಿ

-ಸುರೇಶ ಯಳಕಪ್ಪನವರ

ಟಾಪ್ ನ್ಯೂಸ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.