ಕಾಂಗ್ರೆಸ್‌ನಲ್ಲಿ ವ್ಯಕ್ತಿ ಪೂಜೆಗಿಲ್ಲ ಅವಕಾಶ

•ಪುರಸಭೆ ಗೆಲುವಿಗೆ ಅರ್ಹ ಅಭ್ಯರ್ಥಿಗಳಿಗೆ ಟಿಕೆಟ್: ಪರಮೇಶ್ವರ ನಾಯ್ಕ

Team Udayavani, May 14, 2019, 3:23 PM IST

ballry-tdy-3..

ಹರಪನಹಳ್ಳಿ; ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಮಾತನಾಡಿದರು.

ಹರಪನಹಳ್ಳಿ: ಪುರಸಭೆ ಕಾರ್ಯಕರ್ತರ ಚುನಾವಣೆ ಆಗಿರುವುದರಿಂದ ಮುಖಂಡರು ಹೆಚ್ಚಿನ ಜವಾಬ್ಟಾರಿ ವಹಿಸಿಕೊಳ್ಳಬೇಕು. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಬೇಕು. ಕಾಂಗ್ರೆಸ್‌ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ. ಪ್ರತಿಯೊಬ್ಬರೂ ವೈಯಕ್ತಿಕ ಪ್ರತಿಷ್ಠೆ ಬಿಡಬೇಕು ಎಂದು ಕೌಶಲ್ಯಾಭಿವೃದ್ಧಿ ಮತ್ತು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು.

ಪಟ್ಟಣದ ಎಚ್ಪಿಎಸ್‌ ಕಾಲೇಜ್‌ ಅವರಣದಲ್ಲಿ ಪುರಸಭೆ ಚುನಾವಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಪಿಸಿಸಿ ಸ್ಥಳೀಯ ಪುರಸಭೆ ಚುನಾವಣೆ ಉಸ್ತುವಾರಿ ನನಗೆ ಒಬ್ಬನೇ ಕೊಟ್ಟಿಲ್ಲ, ಎಲ್ಲರೂ ಸೇರಿಕೊಂಡು ಚುನಾವಣೆ ಎದುರಿಸಬೇಕಾಗಿದೆ. ನಿಮ್ಮೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಲಹೆ ಪಡೆದು ಸಾಮಾಜಿಕ ನ್ಯಾಯದಡಿ ಸಾಗಬೇಕಾಗಿದೆ. ಜವಾಬ್ಟಾರಿ ಮನಸೋಇಚ್ಛೆ ನಿಭಾಯಿಸುವುದಕ್ಕೆ ಅಲ್ಲ. ಪಕ್ಷಕ್ಕೆ ನಿಷ್ಠೆಯಿಂದ ಇರುವವರ ಹಿತ ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಇದು ಲೀಡರ್‌ ಚುನಾವಣೆ ಅಲ್ಲ, ಕಾರ್ಯಕರ್ತರ ಚುನಾವಣೆಯಾಗಿದೆ. ಕಾರ್ಯಕರ್ತರಿಗೆ ನಾಯಕತ್ವ ರೂಢಿಸಿಕೊಳ್ಳುವುದಕ್ಕೆ ಇದೊಂದು ಅವಕಾಶ. ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವುದಕ್ಕೆ ನಾವು ನಿಮ್ಮ ಚುನಾವಣೆ ಮಾಡುತ್ತೇವೆ ಎಂದರು.

ನಾನು ಶಾಸಕನಾಗುವವರೆಗೂ ಪುರಸಭೆಯಲ್ಲಿ ಎಂದಿಗೂ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿರಲಿಲ್ಲ. ನಾನು ಇಲ್ಲಿಂದ ಬಿಟ್ಟು ಹೋದ ಮೇಲೂ ಬಹುಮತ ಬಂದಿಲ್ಲ. ಯುವಕರಿಗೆ ಹೆಚ್ಚಿನ ಅದ್ಯತೆ ಕೊಡುವ ಕೆಲಸ ಮುಖಂಡರು ಮಾಡಬೇಕು. ಪುರಸಭೆ 27ಸ್ಥಾನಗಳಿಗೆ ಎಲ್ಲರಿಗೂ ಟಿಕೆಟ್ ಕೊಡಲು ಆಗಲ್ಲ, ಎಲ್ಲರೂ ಪಕ್ಷದ ಹಿತದೃಷ್ಟಿಯಿಂದ ಸಹಕಾರ ಕೊಡಬೇಕು. ಹಳ್ಳಿಯ ಮುಖಂಡರು ಒಂದೊಂದು ವಾರ್ಡ್‌ ಜವಾಬ್ಟಾರಿ ತೆಗೆದುಕೊಂಡು ಕೆಲಸ ಮಾಡಬೇಕು. ಅಭ್ಯರ್ಥಿಗಳ ಅಂತಿಮ ಆಯ್ಕೆಯಾದ ನಂತರ ವೀಕ್ಷಕರ ನೇಮಕ ಮಾಡಲಾಗುವುದು. ಸಾಮಾಜಿಕ ನ್ಯಾಯದಡಿ ಎಲ್ಲಾ ಜಾತಿಯವರನ್ನು ಪರಿಗಣಿಸಿ ಟಿಕೆಟ್ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ಬಳ್ಳಾರಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವಯೋಗಿ ಮಾತನಾಡಿ, ಸಂಸದರು, ಶಾಸಕರ ಚುನಾವಣೆಗೆ ಶ್ರಮಿಸಿದ ಕಾರ್ಯಕರ್ತರ ಚುನಾವಣೆಯಾಗಿರುವ ಪುರಸಭೆಗೆ ಸ್ಪರ್ಧಿಸಲು ಪ್ರಾಮಾಣಿಕತೆ, ಸಾಮಾಜಿಕ ನ್ಯಾಯ, ಗೆಲ್ಲುವ ಶಕ್ತಿ ಗುರುತಿಸಿ ಟಿಕೆಟ್ ಹಂಚಿಕೆ ಮಾಡಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡಬೇಕಿದೆ. ವೈಯಕ್ತಿಕ ದ್ವೇಷ ಬದಿಗೊತ್ತಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ಎಚ್.ಮಂಜಪ್ಪ ಮಾತನಾಡಿ, ಪುರಸಭೆ ಚುನಾವಣೆಯಲ್ಲಿ ಕಾಲು ಎಳೆವ ಕೆಲಸ ಮಾಡಬೇಡಿ. ಕಾಂಗ್ರೆಸ್‌ ಅಭ್ಯರ್ಥಿ ಸೋಲಿಗೆ ಕಾಂಗ್ರೆಸ್‌ನವರೇ ಕಾರಣವಾಬಾರದು. ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರ ತಾಲೂಕಿಗೆ 371ಜೆ ಕಲಂ ಸೌಲಭ್ಯ, 60 ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ಶಾಶ್ವತ ಕೆಲಸ ಮಾಡಿದ್ದಾರೆ. ಅಭಿವೃದ್ಧಿ ಕೆಲಸಗಳೇ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆ ಆಗಲಿವೆ ಎಂದರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಚಂದ್ರಶೇಖರಭಟ್, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಲೂರು ಅಂಜಪ್ಪ, ಮುಖಂಡರಾದ ಎಂ.ರಾಜಶೇಖರ್‌, ಟಿ.ಎಚ್.ಎಂ.ವಿರೂಪಾಕ್ಷಯ್ಯ, ಸಿ.ಜಾವೀದ್‌, ಹಲಗೇರಿ ಮಂಜಪ್ಪ ಮಾತನಾಡಿದರು. ಕೆಪಿಸಿಸಿ ಮಹಿಳಾ ಘಟಕ ರಾಜ್ಯ ಕಾರ್ಯದರ್ಶಿ ಎಂ.ಪಿ.ಲತಾ ಮಲ್ಲಿಕಾರ್ಜುನ್‌, ಎಸ್‌.ಮಂಜುನಾಥ್‌, ಬಿ.ಕೆ.ಪ್ರಕಾಶ್‌, ಪಿ.ಎಲ್.ಪೋಮ್ಯನಾಯ್ಕ, ಶಶಿಧರ ಪೂಜಾರ, ಎಂ.ವಿ.ಅಂಜಿನಪ್ಪ, ಎಚ್.ಬಿ.ಪರುಶುರಾಮಪ್ಪ, ಎಂ.ಪಿ.ವೀಣಾ ಮಹಾಂತೇಶ, ಅಬ್ದುಲ್ರಹಿಮಾನ್‌, ಮುತ್ತಿಗಿ ಜಂಬಣ್ಣ, ನೀಲಗುಂದ ವಾಗೀಶ್‌, ಅಂಬ್ಲಿ ಮಂಜುನಾಥ, ಎಂ.ಟಿ.ಬಸವನಗೌಡ, ಮತ್ತಿಹಳ್ಳಿ ಅಜ್ಜಪ್ಪ, ಯರಬಳ್ಳಿ ಉಮಾಪತಿ, ರಾಮಚಂದ್ರರಾವ್‌, ತೆಲಿಗಿ ಚನ್ನಪ್ಪ, ಕೆಂಚನಗೌಡ, ಮಲ್ಲಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.