ʼಕ್ರಾಂತಿʼ ಆಡಿಯೋ ಬಿಡುಗಡೆ ವೇಳೆ ದರ್ಶನ್ ಬ್ಯಾನರ್‌ಗೆ ಹಾನಿ, ಚಪ್ಪಲಿ ಎಸೆತ; ಭುಗಿಲೆದ್ದ ಆಕ್ರೋಶ
Team Udayavani, Dec 19, 2022, 11:19 AM IST
ಹೊಸಪೇಟೆ: ದರ್ಶನ್ ಅಭಿನಯದ ʼಕ್ರಾಂತಿʼ ಸಿನಿಮಾದ ಹಾಡು ಬಿಡುಗಡೆಯ ವೇಳೆ ಕಿಡಿಗೇಡಿಗಳು ನಟನ ಮೇಲೆ ಚಪ್ಪಲಿ ಎಸೆದಿರುವುದು ಅಭಿಮಾನಿಗಳ ಆಕ್ರೋಶ ಭುಗಿಲೇಳುವಂತೆ ಮಾಡಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ಭಾನುವಾರ (ಡಿಸೆಂಬರ್ 18) ನಡೆದಿದೆ.
ನಟ ದರ್ಶನ್ ತೂಗದೀಪ ಅಭಿಯನದ ಬಹುನಿರೀಕ್ಷಿತ ಕ್ರಾಂತಿ ಚಿತ್ರದ “ಬೊಂಬೆ, ಬೊಂಬೆ’ ಆಡಿಯೋ ಬಿಡುಗಡೆ ಸಮಾರಂಭ ನಗರದ ವಾಲ್ಮೀಕಿ ವೃತ್ತದಲ್ಲಿ ಭಾನುವಾರ ರಾತ್ರಿ ನಡೆಯಿತು.
ದರ್ಶನ್ ಸೇರಿದಂತೆ ನಟರನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆಗೊಂಡಿದ್ದರು. ಇದೇ ವೇಳೆ ಯಾರೋ ಕಿಡಿಗೇಡಿಗಳು ನಟ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದಿರುವ ಘಟನೆ ನಡೆದಿದೆ.
ಲಘು ಲಾಠಿ ಪ್ರಹಾರ: ನಟ ದರ್ಶನ್ ಅಭಿಯನದ ಕ್ರಾಂತಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಘಟನೆ ಹಿನ್ನೆಲೆಯಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಯುವಕರು ದರ್ಶನ್ ಬ್ಯಾನರ್ ಹರಿದು ಹಾಕಿದ್ದರು. ಈ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಹಾಡು ಬಿಡುಗಡೆಗೊಳಿಸಿ ಚಿತ್ರ ತಂಡ ಮರಳಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.
ದರ್ಶನ್ ಅವರ ಮೇಲಿನ ಚಪ್ಪಲಿ ಎಸೆತ ಘಟನೆ ಅಭಿಮಾನಿಗಳು ರೊಚ್ಚಿಗೇಳುವಂತೆ ಮಾಡಿದೆ. ಯಾರೇ ಆಗಲಿ, ಯಾವುದೇ ಅಭಿಮಾನವಿರಲಿ ಈ ರೀತಿ ಮಾಡಿರುವುದು ಸರಿಯಲ್ಲ ಎಂದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕಾಗಿ ಒಗ್ಗಟ್ಟಾಗಿ ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸುತ್ತಿದ್ದಾರೆ.
ಘಟನೆ ಖಂಡಿಸಿದ ಧನ್ವೀರ್: ನಟ ಧನ್ವೀರ್ ಅವರು ಈ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಇನ್ಸ್ಟಾಗ್ರಾಮ್ ನಲ್ಲಿ ಸ್ಟೋರಿ ಹಾಕಿಕೊಂಡಿದ್ದಾರೆ. “ನಿನ್ನೆ ಹೊಸಪೇಟೆಯಲ್ಲಿ ನಡೆದ ಘಟನೆ ತುಂಬಾ ನೋವುಂಟು ಮಾಡಿದೆ. ನಿಮ್ಮ ಮೇಲೆ ನಡೆದಿರುವ ಪಿತೂರಿ ಖಂಡನೀಯ. ನಿಮ್ಮ ಸಹಸ್ರ ಅಭಿಮಾನಿಗಳಲ್ಲಿ ಒಬ್ಬನಾಗಿ ಸಾಯೋವರೆಗೂ ನಿಮ್ಮ ಮೇಲಿನ ಅಭಿಮಾನ ದುಪ್ಪಟ್ಟಾಗುತ್ತೆ ಹೊರತು ಕಡಿಮೆಯಾಗುವುದಿಲ್ಲ. ಈ ಘಟನೆಗೆ ಕಾರಣರಾದವರಿಗೆ ಭಗವಂತ ಒಳ್ಳೆಯದೇ ಮಾಡಲಿ. ಕೆಟ್ಟದು ಬಯಸಿದವರಿಗೂ ಒಳ್ಳೆದು ಮಾಡಿ ಎಂದು ಹೇಳಿಕೊಟ್ಟಿದ್ದಿರಾ ಬಾಸ್. ಕರ್ಮ ಎನ್ನುವುದು ಯಾರಿಗೂ ಬಿಟ್ಟಿರುವುದಿಲ್ಲ, ಕರ್ಮ ತಿರುಗುತ್ತೆ. ಚಪ್ಪಲಿ ಎಸೆದ ವ್ಯಕ್ತಿಗೂ, ಅವನ ಮನಸ್ಥಿತಿಗೂ ಮತ್ತು ಪ್ರಚೋದಿಸಿದರವರಿಗೂ ನೆಮ್ಮದಿ ಸಿಗಲಿ. ನಿಮ್ಮ ಸೆಲೆಬ್ರಿಟಿ ಅಭಿಮಾನಿಗಳ ಮುಂದೆ ಈ ಘಟನೆಗಳು ಸಾಸಿವೆ ಕಾಳಿಗೆ ಸಮ. ನಿಮ್ಮ ಮೇಲಿನ ಅಭಿಮಾನದೊಂದಿಗೆ.. ಧನ್ವೀರ್, ನಿಮ್ಮೊಂದಿಗೆ ಸದಾ ನಾವು” ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.