ಅಕ್ರಮ ಶಾಲಾ ಕಟ್ಟಡ ತೆರವುಗೊಳಿಸಲು ಒತ್ತಾಯ
Team Udayavani, Jul 22, 2020, 12:01 PM IST
ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಅಕ್ರಮವಾಗಿ ಸರಕಾರಿ ಜಮೀನಿನಲ್ಲಿ ಶಾಲೆ ನಿರ್ಮಿಸಿರುವುದನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿ ಗಳು ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಬ್ಲಾಕ್ ಮಾಜಿ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್ ಮಾತನಾಡಿ, ಪಟ್ಟಣದ ನೋಬೆಲ್ ಎಜ್ಯುಕೇಷನ್ ಟ್ರಸ್ಟ್ 44 ಸೆಂಟ್ಸ್ ಸರಕಾರಿ ಜಮೀನಿನ ಜಾಗದಲ್ಲಿ ಅತಿಕ್ರಮವಾಗಿ ಕಟ್ಟಡ ನಿರ್ಮಿಸಿದ್ದು, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಿ ತೆರವುಗೊಳಿಸಬೇಕು. ಚಿಂತ್ರಪಳ್ಳಿಗೆ ಸೇರಿದ ಸ.ನಂ.409/ಎ.ನ ಒಟ್ಟು 5.92 ಎಕರೆ ಪ್ರದೇಶದಲ್ಲಿ 44 ಸೆಂಟ್ಸ್‌ನಷ್ಟು ಜಮೀನು ಪಹಣಿಯಲ್ಲಿ ಗ್ರಾಮನತ್ತು ಎಂದೇ ಇದೆ. ಆದರೆ, ಸಂಸ್ಥೆಯ ಅಧ್ಯಕ್ಷ ಮಾಜಿ ಶಾಸಕ ಸಿರಾಜ್‌ಶೇಖ್ ಸೋನಿಯಾಗಾಂಧಿ ನಗರದಲ್ಲಿ ಉದ್ಯಾನಕ್ಕೆ ಮೀಸಲಿರಿಸಿದ್ದ ನಿವೇಶನದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ. ಕೂಡಲೇ ಸಿರಾಜ್‌ಶೇಖ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ತಾಪಂ ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ಮಾಜಿ ಶಾಸಕ ಸಿರಾಜ್‌ಶೇಕ್ ಸರಕಾರಕ್ಕೆ ವಂಚಿಸಿ ಶಾಲಾ ಕಟ್ಟಡ ನಿರ್ಮಿಸಿದರ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು. ಪುರಸಭೆ ಪರವಾನಗಿ ಪಡೆಯದೆ ಕುಡಿಯುವ ನೀರನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಯಾವುದೇ ವ್ಯಕ್ತಿ ಸರಕಾರಿ ಜಮೀನನ್ನು ಅಕ್ರಮವಾಗಿ ಹೊಂದುವುದು ಸೂಕ್ತವಲ್ಲ. ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡವನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್ ತಹಶೀಲ್ದಾರ್ ಆಶಪ್ಪ ಪೂಜಾರ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣನಾಯ್ಕಗೆ ಮನವಿ ಸಲ್ಲಿಸಿದರು. ಮಾಜಿ ಸದಸ್ಯ ಹೆಗ್ಗಾಳ್ ರಾಮಣ್ಣ, ವಾಲ್ಮೀಕಿ ಮಹಾಸಭಾದ ತಾಲೂಕು ಉಪಾಧ್ಯಕ್ಷ ಕನ್ನಿಹಳ್ಳಿ ಚಂದ್ರಶೇಖರ, ಕೆಪಿಸಿಸಿ ಎಸ್ಟಿ ಘಟಕದ ಉಪಾಧ್ಯಕ್ಷ ಪವಾಡಿ ಹನುಮಂತಪ್ಪ ಮಾತನಾಡಿದರು.
ಜಿಪಂ ಮಾಜಿ ಸದಸ್ಯ ಎಚ್. ಭೀಮಪ್ಪ, ವಿಎಸ್‌ಎಸ್‌ಎನ್ ನಿರ್ದೇಶಕ ಹುಡೇದ್ ಗುರುಬಸವರಾಜ, ರೈತ ಸಂಘದ ಅಧ್ಯಕ್ಷ ಹತ್ತಿ ಅಡಿವೆಪ್ಪ, ಪುರಸಭೆ ಸದಸ್ಯ ಹಂಚಿನಮನಿ ಹನುಮಂತಪ್ಪ, ಮರಿಯಮ್ಮನಹಳ್ಳಿ ಪಪಂ ಅಧ್ಯಕ್ಷ ವಿಷ್ಣುನಾಯ್ಕ, ಸದಸ್ಯ ಹಾದಿಮನಿ, ತಾಪಂ ಮಾಜಿ ಸದಸ್ಯ ಶಿವಕುಮಾರ, ವಕೀಲ ಗೋಣಿಬಸಪ್ಪ, ಮುಖಂಡರಾದ ತೆಲಿಗಿ ನೆಲ್ಲು ಇಸ್ಮಾಯಿಲ್, ಗೌರಜ್ಜನವರ ಗಿರೀಶ್, ಸೋಗಿ ಕೊಟ್ರೇಶ, ಆನಂದೇವನಹಳ್ಳಿ ಪ್ರಭು, ಸೈಯದ್ ಇರ್ಪಾನ್, ಬುಡೇನ್‌ಸಾಬ್, ಸತ್ಯಣ್ಣ, ರಮೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.