ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಒತ್ತಾಯ
Team Udayavani, May 16, 2020, 7:30 AM IST
ಹಗರಿಬೊಮ್ಮನಹಳ್ಳಿ: ಲಾಕ್‌ಡೌನ್ ಅವಧಿಯಲ್ಲಿ ಹಾಗೂ ಅದಕ್ಕಿಂತ ಮುಂಚಿತವಾಗಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕೊಟಿಗಿ ಮಲ್ಲಿಕಾರ್ಜುನ ಆಗ್ರಹಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರಾಂತ ರೈತ ಸಂಘದ ತಾಲೂಕು ಪದಾಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬದ ಶಿಕ್ಷಣವಂತ ಯುವಕರಿಗೆ ಸರಕಾರಿ ಉದ್ಯೋಗ ನೀಡಬೇಕು. ಲಾಕ್‌ಡೌನ್ ವೇಳೆ ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳ ಸಾಲಮನ್ನಾ ಮಾಡಬೇಕು. ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮದ ಮೃತ ರೈತ ಬಸವರಾಜ ಕುಟುಂಬದವರಿಗೆ ತಕ್ಷಣವೇ ಪರಿಹಾರ ನೀಡಬೇಕು. ಮೃತ ರೈತರ ಮಡದಿಗೆ ಮಾಸಿಕ 5ಸಾವಿರ ರೂ. ನೆರವು ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್ ಶಿವಕುಮಾರ ಗೌಡಗೆ ಮನವಿ ಸಲ್ಲಿಸಿದರು.
ಸಂಘದ ತಾಲೂಕು ಅಧ್ಯಕ್ಷ ಕೆ.ಗಾಳೆಪ್ಪ, ಉಪಾಧ್ಯಕ್ಷ ಹನುಮನಗೌಡ, ಕಾರ್ಯದರ್ಶಿ ಎಚ್.ಮಂಜುನಾಥ, ಮುಖಂಡರಾದ ಸಿ.ಹನುಮಂತಪ್ಪ, ಎಂ.ಆನಂದ, ಕೆ.ತಿಂದಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.