ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ: ಕ್ರಮಕ್ಕೆ ಒತ್ತಾಯ
Team Udayavani, Oct 1, 2019, 4:42 PM IST
ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ 2010-11ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆದಿದ್ದು ಅವ್ಯವಹಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಕರವೇ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕರವೇ ತಾಲೂಕು ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ಅಧಿಕಾರಿಗಳು ವಸತಿ ಫಲಾನುಭವಿಗಳಿಂದ ಫಾರಂ-ಜಿಗೆ ಸಹಿ ಮಾಡಿಸಿಕೊಂಡು ಹಣ ಡ್ರಾ ಮಾಡಿಕೊಂಡು ವಸತಿ ಫಲಾನುಭವಿಗಳಿಗೆ ಹಣ ನೀಡದೆ ದುರುಪಯೋಗಪಡಿಸಿಕೊಂಡಿದ್ದಾರೆ.
ಕ್ಷೇತ್ರದಲ್ಲಿ 2010-11ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ 7997 ಮನೆಗಳು ಮುಂಜೂರಾಗಿದ್ದವು. ಮನೆ ನಿರ್ಮಾಣದ ಜವಾಬ್ದಾರಿ ಹೊತ್ತ ಕೆಆರ್‌ಐಡಿಎಲ್ ನವರು ಫಲಾನುಭವಿಗಳಿಗೆ ಸರಿಯಾಗಿ ಮನೆ ನಿರ್ಮಾಣ ಮಾಡಿಕೊಡದೆ ಫಲಾನುಭವಿಗಳ ಹಣವನ್ನು ಗುಳುಂ ಮಾಡಿದ್ದಾರೆ. ಬಸವ ವಸತಿ ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿದ್ದು, ಲೋಕಾಯುಕ್ತ ತನಿಖೆಯಲ್ಲಿ ತಪ್ಪೆಸಗಿರುವುದು ಸಾಬೀತಾಗಿರುವ ಅ ಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಶಾಸಕ ನೇಮರಾಜನಾಯ್ಕ ವಿರುದ್ಧ ಕೂಡ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ, ಮುಖಂಡರಾದ ಕೊಚಾಲಿ ಮಂಜುನಾಥ, ಗೋಣಿಬಸಪ್ಪ, ರಾಮಪ್ಪ, ಮಂಜುನಾಥ, ಜಂಬಣ್ಣ, ಯಲ್ಲಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.