ಜಾತಿ ಗಣತಿ ಕೈ ಬಿಡುವಂತೆ ಒತ್ತಡ ಸರಿಯಲ್ಲ: ಕೆ.ಎಸ್.ಈಶ್ವರಪ್ಪ
ಅಧಿಕಾರದಲ್ಲಿದ್ದಾಗ ಕಡೆಗಣಿಸಿದ ಸಿದ್ದರಾಮಯ್ಯ; ಈಗ ನಮ್ಮನ್ನು ಪ್ರಶ್ನೆ ಮಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ
Team Udayavani, Sep 12, 2021, 8:10 PM IST
ಬಳ್ಳಾರಿ: ಅಧಿಕಾರದಲ್ಲಿದ್ದಾಗ ಜಾತಿ ಸಮೀಕ್ಷೆಯನ್ನು ಹೊರ ಬಿಡದ ಕಾಂಗ್ರೆಸ್‌ನವರು ಇದೀಗ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ವಿಧಾನ ಪರಿಷತ್ ವಿಪಕ್ಷದ ನಾಯಕನಾಗಿದ್ದಾಗ ನಾನು ಸಹ ಜಾತಿ ಸಮೀಕ್ಷೆ ಬಗ್ಗೆ ಪ್ರಶ್ನಿಸಿದ್ದೆ. ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ಚುನಾವಣೆಯೊಳಗೆ ಪ್ರಕಟಿಸುವುದಾಗಿ ಹೇಳಿದ್ದರು. ಆದರೆ, ಪ್ರಕಟಿಸಲಿಲ್ಲ. ಕೇಳಿದರೆ ಅಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರು ವರದಿ ನೀಡಿರಲಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದರು.
ಇದಾಗ ಬಳಿಕ 2018ರ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಪುನಃ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಇತ್ತು. ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದರು. ಸಿದ್ದರಾಮಯ್ಯ ಸಮನ್ವಯ ಸಮಿತಿ ಮುಖ್ಯಸ್ಥರಾಗಿದ್ದರು. ಆಗ ಏಕೆ ಜಾತಿ ಸಮೀಕ್ಷೆ ವರದಿ ಬಿಡುಗಡೆ ಮಾಡಲಿಲ್ಲ. ಅಂದು ಸಿಎಂ ಕೇಳದಿದ್ದರೆ ರಾಜೀನಾಮೆ ನೀಡಬೇಕಿತ್ತು ಅಥವಾ ಬೆಂಬಲವನ್ನು ವಾಪಸ್ ಪಡೆಯಬೇಕಿತ್ತು. ಕಾಂಗ್ರೆಸ್‌ನವರು ಮತಕ್ಕಾಗಿ ಕೇವಲ ಹಿಂದುಳಿದ ವರ್ಗ, ದಲಿತರ ಹೆಸರುಗಳನ್ನು ಪ್ರಸ್ತಾಪಿಸೋದು. ಆಗ ಮಾಡೋದು ಬಿಟ್ಟು, ಈಗ ಬಿಜೆಪಿಯನ್ನು ಹಿಂದುಳಿದ ವರ್ಗ, ದಲಿತರ ವಿರೋಧಿ ಯನ್ನಾಗಿ ಬಿಂಬಿಸುವುದು ಸರಿಯಲ್ಲ ಎಂದರು.
ಇದನ್ನೂ ಓದಿ:ಮೂಷಿಕನಿಗೆ ವಿಶೇಷ ಪ್ರಾರ್ಥನೆ| ನೇಕಾರರಿಂದ ಹಿಂದಿನಿಂದಲೂ ಇಲಿಗಳಿಗೆ ಪೂಜೆ |
ಜಾತಿ ಜನಗಣತಿಗೆ 180 ಕೋಟಿ ರೂ. ವೆಚ್ಚ ಮಾಡಿ ಸಿದ್ಧಪಡಿಸಿರುವ ವರದಿ ಮೇಲೆ ಸದಸ್ಯ ಕಾರ್ಯದರ್ಶಿಯ ಸಹಿಯೇ ಇಲ್ಲ ಎಂದು ಆಯೋಗದ ನೂತನ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಈಚೆಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ನವರು ತಮ್ಮ ಸ್ವಂತ ಆಸ್ತಿಯಂತೆ ಮಾಡಿಕೊಂಡಿದ್ದ ಹಿಂದುಳಿದ ವರ್ಗ, ದಲಿತರಿಗೆ ಮೋಸ ಮಾಡಿದ್ದಾರೆ. ಸಹಿಯೇ ಇಲ್ಲದಿದ್ದರೆ ಆ ವರದಿಗೆ ಬೆಲೆ ಏನು? ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಶೇ.27ರಷ್ಟು ಹಿಂದುಳಿದ ವರ್ಗದವರು ಸಚಿವರಾಗಿದ್ದಾರೆ. 20 ಜನ ದಲಿತರು ಸಚಿವರಾಗಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿ ನೀಡುವ ಅ ಧಿಕಾರವನ್ನು ಆಯಾ ರಾಜ್ಯಗಳಿಗೆ ನೀಡಿದ್ದಾರೆ ಎಂದರು.
ನರೇಗಾ ಬಾಕಿ 1076 ಕೋಟಿ ಬಿಡುಗಡೆ
ಬಳ್ಳಾರಿ: ನರೇಗಾದಡಿ ಬಾಕಿ ಇರುವ 959 ಕೋಟಿ ಹಾಗೂ ಹೆಚ್ಚುವರಿಯಾಗಿ 117 ಕೋಟಿ ಸೇರಿ 1076 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ ಸಿಂಗ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ನರೇಗಾ ಅಡಿಯಲ್ಲಿ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಮನವಿ ಪರಿಗಣಿಸಿ ಬಾಕಿ ಹಣ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ನಿಗದಿತ ಗುರಿಗಿಂತಲೂ ಹೆಚ್ಚು 15 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿರುವ ಕರ್ನಾಟಕ, ಪ್ರಸಕ್ತ ವರ್ಷ 20 ಕೋಟಿ ಮಾನವ ದಿನಗಳನ್ನು ಸೃಜನೆ ಮಾಡಲು ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಆಯೋಗದ ಹಿಂದಿನ ಅಧ್ಯಕ್ಷ ಕಾಂತರಾಜ್ ಅವರನ್ನು ನಾನೇ ಖುದ್ದು ಭೇಟಿಯಾಗಿದ್ದೆ. ವರದಿ ಸಿದ್ಧವಾಗಿತ್ತು. ಆದರೆ, ಅದನ್ನು ಹೊರಗೆ ಬಿಡಲಿಲ್ಲ. ವರದಿಯನ್ನು ಹೊಸದಾಗಿ ಸಮೀಕ್ಷೆ ಮಾಡಬೇಕಾ ಅಥವಾ ಸದಸ್ಯ ಕಾರ್ಯದರ್ಶಿಯ ಸಹಿ ಮಾಡಿಸಿಕೊಂಡು ಪುನಃ ಸರ್ಕಾರಕ್ಕೆ ಕೊಡಬೇಕಾ ಎಂಬುದನ್ನು ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
MUST WATCH
ಹೊಸ ಸೇರ್ಪಡೆ
45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.