ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
Team Udayavani, Dec 31, 2024, 1:01 PM IST
ಬಳ್ಳಾರಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಗಂಭೀರವಾಗಿರುವ ವಿಚಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಜನಾರ್ದನ ರೆಡ್ಡಿ ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಈ ಕುರಿತು ಮಾತನಾಡಿದ ಅವರು ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ತುಂಬಾ ಗಂಭೀರವಾಗಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಬೇಕಿತ್ತು, ಇಲ್ಲದಿದ್ದರೆ ಸಿಎಂ ಆದ್ರೂ ರಾಜೀನಾಮೆ ಪಡೆದುಕೊಳ್ಳಬೇಕಿತ್ತು ಆದರೆ ಮುಖ್ಯಮಂತ್ರಿ ಆ ಧೈರ್ಯ ಮಾಡಲಿಲ್ಲ ಎಂದು ಹೇಳಿದರು.
ತಂದೆ ಎಐಸಿಸಿ ಅಧ್ಯಕ್ಷರಿದ್ದಾರೆ ಅನ್ನೋ ಸೊಕ್ಕು, ದುರಹಂಕಾರ ಪ್ರಿಯಾಂಕ್ ಖರ್ಗೆಗೆ ಇದೆ. ಮಲ್ಲಿಕಾರ್ಜುನ ಖರ್ಗೆಯವರು ಮನಸ್ಸು ಮಾಡಿದ್ದರೆ ಸಿಎಂ ಸ್ಥಾನವನ್ನು ಕಿತ್ತುಕೊಳ್ಳಬಹುದು ಎನ್ನುವ ದೈರ್ಯ ಪ್ರಿಯಾಂಕ್ ಖರ್ಗೆಗೆ ಇದೆ. ಹೀಗಾಗಿ ಬಿಜೆಪಿಯವರು ಬಟ್ಟೆ ಹರಿದುಕೊಂಡ್ರೂ ನಾನು ರಾಜೀನಾಮೆ ನೀಡಲ್ಲ ಎಂದು ಸೊಕ್ಕಿನ ಮಾತುಗಳನ್ನು ಆಡಿದ್ದಾರೆ ಎಂದು ಹೇಳಿದರು.
ಇಡೀ ಸಚಿನ್ ಕುಟುಂಬದ ಜೊತೆ ಬಿಜೆಪಿ ಇದೆ.. ಸಚಿನ್ 7 ಡೆತ್ ನೋಟ್ ಬರೆದಿದ್ದಾರೆ. ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಅವರ ಹೆಸರನ್ನ ಬರೆದಿದ್ದಾರೆ. ಇಡೀ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಸಚಿನ್ ಡೆತ್ ನೋಟ್ ಬರೆದು ಸಾವನ್ನಪ್ಪಿದ್ದಾನೆ. ಡೆತ್ ನೋಟ್ ಬಗ್ಗೆ ಪ್ರಿಯಾಂಕ್ ಖರ್ಗೆ, ಗೃಹ ಸಚಿವರು, ಡಿಸಿಎಂ ಬಹಳ ಹಗುರವಾಗಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಯಾವ ರೀತಿ ಪಾಠ ಕಲಿಸ್ತಾರೆ ಅನ್ನೋದು ಗೊತ್ತಾಗಲಿದೆ ಎಂದು ಹೇಳಿದರು.
ಚಂದ್ರಶೇಖರ ಆತ್ಮಹತ್ಯೆಯಿಂದ ವಾಲ್ಮೀಕಿ ಹಗರಣ ಹೊರಗಡೆ ಬಂತು. ಇದೀಗ ಓರ್ವ ಗುತ್ತಿಗೆದಾರ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ರೂ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆದಿಲ್ಲ. ಲಕ್ಚ್ಮೀ ಹೆಬ್ಬಾಳ್ಕರ್ ಪಿಎ ಹೆಸರು ಬರೆದು ಓರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ರೀತಿ ಸಾಕಷ್ಟು ಜನರು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದಲಿಂಗ ಸ್ವಾಮೀಜಿ, ಮಣಿಕಂಠ ರಾಠೋಡ್, ಚಂದು ಪಾಟೀಲ್, ಬಸವರಾಜ ಮತ್ತು ಮೂಡ್ ಕೊಲೆ ಮಾಡೋದಕ್ಕೆ ಸುಪಾರಿ ಕೊಟ್ಟಿದ್ದಾರೆ. ಇದೆಲ್ಲ ಸಚಿನ್ ಬರೆದಿರುವ ಡೆತ್ ನೋಟ್ ನಲ್ಲಿ ಉಲ್ಲೇಖ ಆಗಿದೆ.
ಸಿ.ಟಿ. ರವಿ ವಿಚಾರದಲ್ಲಿ ಪೊಲೀಸರು ಉಗ್ರಗಾಮಿಗಳ ರೀತಿ ನಡೆಸಿಕೊಂಡಿದ್ರು. ಮುನಿರತ್ನ ವಿಚಾರದಲ್ಲೂ ಹಾಗೇ ಆಗಿದೆ. ಶಾಸಕರು, ಗುತ್ತಿಗೆದಾರರು, ಅಧಿಕಾರಿಗಳಿಗೆ ಇಷ್ಟೆಲ್ಲಾ ಆಗುತ್ತಿದೆ. ಈ ಹಿಂದೆ ಈಶ್ವರಪ್ಪ ಅವರ ರಾಜೀನಾಮೆ ತಗೊಂಡ್ರು. ಗಣಪತಿ ವಿಚಾರದಲ್ಲಿ ಕೆಜೆ ಜಾರ್ಜ್ ರಾಜೀನಾಮೆ ಕೊಟ್ಟಿದ್ರು.
ಸಾಮಾಜಿಕ ಜಾಲತಾಣದಲ್ಲಿ ಸಚಿನ್ ಪೋಸ್ಟ್ ಹಾಕಿದ್ದ. ಈ ವಿಚಾರದಲ್ಲಿ ಸಹೋದರಿಯರು ಠಾಣೆಗೆ ಹೋಗಿ ದೂರು ಕೊಟ್ರೂ ಪೊಲೀಸರು ದೂರು ಸ್ವೀಕರಿಸಿರಲಿಲ್ಲ. ಪೊಲೀಸರು ದೂರು ದಾಖಲಿಸಿಕೊಂಡು ಪ್ರಯತ್ನಿಸಿದ್ರೆ ಸಚಿನ್ ಬಹುಶ ಬದುಕುಳಿಯುತ್ತಿದ್ದ ಅವರ ಸಹೋದರಿಯರ ಬಗ್ಗೆಯೇ ಪೊಲೀಸರು ಕೆಟ್ಟದಾಗಿ ಮಾತನಾಡಿ ಕಳಿಸಿದ್ದಾರೆ. ಬೀದರ್, ಕಲಬುರಗಿ ಜಿಲ್ಲೆಯ ಪೊಲೀಸ್ ಠಾಣೆಗಳೆಲ್ಲಾ ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ ಎಂದು ಜನ ಮಾತನಾಡ್ತಿದ್ದಾರೆ ಎಂದು ರೆಡ್ಡಿ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್ ಚಾಲಕ!
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.