ಜನಸಾಹಿತ್ಯ ಸಮ್ಮೇಳನ ಸರಿಯಲ್ಲ: ನಟ ಚೇತನ್
Team Udayavani, Jan 7, 2023, 11:15 PM IST
ಹರಪನಹಳ್ಳಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಒಂದು ಪಕ್ಷಕ್ಕೆ ಸೀಮಿತವಾಗಿದೆ ಎಂದು ಅದನ್ನು ವಿರೋಧಿಸುವ ಪ್ರಯತ್ನದಲ್ಲಿ ಇನ್ನೊಂದು ಪಕ್ಷಕ್ಕೆ ಸೀಮಿತವಾಗಿ ಜನಸಾಹಿತ್ಯ ಸಮ್ಮೇಳನ ನಡೆಸುವುದು ಸಮಂಜಸವಲ್ಲ. ಸಾಮಾಜಿಕ ಹಾಗೂ ಸೈದ್ಧಾಂತಿಕವಾಗಿ ವ್ಯವಸ್ಥೆ ವಿರುದ್ಧ ಬಂಡಾಯವಾದರೆ ಉತ್ತಮ ಬೆಳವಣಿಗೆ ಎಂದು ಚಿತ್ರನಟ ಅಹಿಂಸಾ ಚೇತನ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಅವರವರ ಸಿದ್ಧಾಂತಗಳ ಮೇಲೆ ಸಾಹಿತ್ಯ ಸಮ್ಮೇಳನಗಳು ನಡೆಯುತ್ತಿರುವುದು ವಿಷಾದನೀಯ. ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆಯಂತವರ ವಿಚಾರಗಳನ್ನು ಮುಂದಿಟ್ಟುಕೊಂಡು ವ್ಯವಸ್ಥೆ ವಿರುದ್ಧ ಸಾಹಿತ್ಯ ಚಳವಳಿ ಆಗಬೇಕು ಎಂದರು.
ಪಠ್ಯಪುಸ್ತಕ ವಿಷಯದಲ್ಲಿ ಬರಗೂರು ರಾಮಚಂದ್ರಪ್ಪ ಹಾಗೂ ರೋಹಿತ್ ಚಕ್ರತೀರ್ಥ ಇಬ್ಬರೂ ಸರಿಯಾದ ನ್ಯಾಯವನ್ನು ಒದಗಿಸಿಲ್ಲ ಎಂದು ಆರೋಪಿಸಿದರು.
ಚುನಾವಣೆ ಬಳಿಕ ಪೌರತ್ವ ಚಿಂತನೆ
ನನ್ನ ತಂದೆ-ತಾಯಿ ಈಗಲೂ ಅಮೆರಿಕದಲ್ಲಿದ್ದಾರೆ. ಸಂದರ್ಭ ಬಂದರೆ ನಾನೂ ಅಲ್ಲಿಗೆ ಹೋಗಬೇಕಾಗುತ್ತದೆ. ಸದ್ಯ ಹೋಗುವ ಯೋಚನೆ ಇಲ್ಲ. ಈಗ ಪೌರತ್ವ ಪಡೆದರೆ ಚುನಾವಣೆಗೆ ಸ್ಪರ್ಧಿಸಲು ಪಡೆದಿದ್ದಾರೆ ಎಂದು ಟೀಕಿಸುತ್ತಾರೆ. ನನಗೆ ಮತದಾನದ ಹಕ್ಕು ಹಾಗೂ ಸರಕಾರಿ ನೌಕರನಾಗಲು ಅರ್ಹತೆ ಇರುವುದಿಲ್ಲ. ನಾನು ದೇವದಾಸಿ ಮಹಿಳೆಯರು, ಕಾರ್ಮಿಕರು, ಬಡವರು, ದಲಿತರು ಒಳಗೊಂಡು ಸಮಾಜಮುಖೀ ಚಟುವಟಿಕೆಯಲ್ಲಿ ತೊಡಗಿಕೊಳ್ಳುವೆ. ಚುನಾವಣೆ ಮುಗಿದ ಬಳಿಕ ಪೌರತ್ವ ಪಡೆಯುವ ಬಗ್ಗೆ ಚಿಂತನೆ ಮಾಡುವುದಾಗಿ ಚೇತನ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.