100 ಕ್ಷೇತ್ರಗಳಲ್ಲಿ ಜೆಡಿಯು ಸ್ಪರ್ಧೆ: ಮಹಿಮಾ ಪಟೇಲ್
Team Udayavani, Dec 25, 2017, 7:40 AM IST
ಬಳ್ಳಾರಿ: “ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯದ ನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಯು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಮುಂದಿನ ರಾಜ್ಯ ಸರ್ಕಾರ ರಚನೆಯಲ್ಲಿ ಜೆಡಿಯು ನಿರ್ಣಾಯಕ ಪಾತ್ರ ವಹಿಸಲಿದೆ’ ಎಂದು ಸಂಯುಕ್ತ ಜನತಾ ದಳ (ಜೆಡಿಯು) ನಿತೀಶ್‌ಕುಮಾರ್ ಬಣದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಇಪ್ಪತ್ತಕ್ಕೂ ಅಧಿ ಕ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಯು ಅಭ್ಯರ್ಥಿಗಳು ಯಾರೆಂಬುದನ್ನು ನಿರ್ಣಯಿಸಲಾಗಿದೆ. ಟಿಕೆಟ್ ಆಕಾಂಕ್ಷಿಗಳನ್ನು ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜರುಗುವ ಸಾಮಾಜಿಕ ಸೇವಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿರುವ ಆಧಾರದಲ್ಲಿ ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಮತ್ತು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಗಳಿಂದ ಸ್ಪ ರ್ಧಿಸಲು ಇಬ್ಬರು ಆಕಾಂಕ್ಷಿಗಳು ತಮ್ಮನ್ನು ಸಂಪರ್ಕಿಸಿದ್ದಾರೆ. ಮುಂಬರುವ ದಿನಗಳಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಇಲ್ಲ: ಜನತಾ ಪರಿವಾರದ ವಿಲೀನ ಕುರಿತು ಕೇಳಿದ ಪ್ರಶ್ನೆಗೆ, ಜೆಡಿಎಸ್ ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪ ರ್ಧಿಸುವುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸ್ಥಾನ ಹೊಂದಾಣಿಕೆ ಇಲ್ಲ. ವಿಲೀನದ ಪ್ರಶ್ನೆಯೂ ಇಲ್ಲ. ನಮಗೆ ಪಕ್ಷದ ಬಲವರ್ಧನೆ ಮುಖ್ಯ ಎಂದರು. 2018ರ ಫೆಬ್ರವರಿ 3 ನೇ ವಾರದಲ್ಲಿ ಜೆಡಿಯು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ, ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಕೆ.ಸಿ. ತ್ಯಾಗಿ ಸೇರಿ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಹಲವಾರು ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.