ಅಕಾಲಿಕ ಗಾಳಿ-ಮಳೆಗೆ ಅಪಾರ ಭತ್ತ ನಷ್ಟ
ಸರ್ಕಾರ ಕೂಡಲೇ ಸಮೀಕ್ಷೆ ಕೈಗೊಳ್ಳಲು ಶಾಸಕ ಗಣೇಶ ಆಗ್ರಹ
Team Udayavani, Apr 11, 2020, 6:05 PM IST
ಕಂಪ್ಲಿ: ಸಣಾಪುರದಲ್ಲಿ ಅಕಾಲಿಕ ಮಳೆಗೆ ನೆಲಕಚ್ಚಿದ ಭತ್ತದ ಬೆಳೆಯನ್ನು ಶಾಸಕ ಜೆ.ಎನ್. ಗಣೇಶ ಪರಿಶೀಲಿಸಿದರು.
ಕಂಪ್ಲಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಏ.7 ರಂದು ಬೀಸಿದ ಬಿರುಗಾಳಿ ಹಾಗೂ ಅಕಾಲಿಕ ಮಳೆಗೆ ನೆಲಕ್ಕೆ ಬಿದ್ದು, ಅಪಾರ ನಷ್ಟ ಸಂಭವಿಸಿದ್ದು, ಸರ್ಕಾರ ಕೂಡಲೇ ಸಮೀಕ್ಷೆ ಕೈಗೊಂಡು ಸೂಕ್ತ ಪರಿಹಾರ ನೀಡಬೇಕೆಂದು ಶಾಸಕ ಜೆ.ಎನ್. ಗಣೇಶ ಸರ್ಕಾರಕ್ಕೆ ಮನವಿ ಮಾಡಿದರು. ಅವರು ಪಟ್ಟಣ ವ್ಯಾಪ್ತಿಯ ಹಾಗೂ ತಾಲೂಕಿನ ವಿವಿಧ ಗ್ರಾಮಗಳಾದ ಸಣಾಪುರ, ಬೆಳಗೋಡುಹಾಳು, ರಾಮಸಾಗರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬಿರುಗಾಳಿ ಹಾಗೂ ಅಕಾಲಿಕ ಮಳೆಗೆ ಹಾನಿಯಾದ ಭತ್ತದ ಗದ್ದೆಗಳಿಗೆ ಭೇಟಿ ನೀಡಿ ಸಂಪೂರ್ಣವಾಗಿ ನೆಲಕ್ಕೆ ಬಿದ್ದಿರುವ ಭತ್ತದ ಗದ್ದೆಗಳನ್ನು ವೀಕ್ಷಿಸಿ ರೈತರ ಪರಿಸ್ಥಿತಿ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದರು.
ಕಂಪ್ಲಿ ತಾಲೂಕಿನ ರಾಮಸಾಗರದಿಂದ ಹಿಡಿದು ಎಮ್ಮಿಗನೂರು ಗ್ರಾಪಂ ವ್ಯಾಪ್ತಿವರೆಗೂ ಸಾವಿರಾರು ಎಕರೆ ಪ್ರದೇಶದಲ್ಲಿ ರೈತರು ಹಿಂಗಾರು ಹಂಗಾಮಿನಲ್ಲಿ ಭತ್ತ ಬೆಳೆದಿದ್ದರು, ಈಗಾಗಲೇ ಕೆಲವು ಭಾಗದಲ್ಲಿ ಕಟಾವಿಗೆ ಬಂದಿದ್ದರೆ, ಇನ್ನು ಕೆಲವೆಡೆ ಕಾಳು ಕಟ್ಟುವ ಹಂತದಲ್ಲಿದ್ದು, ಅಕಾಲಿಕ ಮಳೆ ಮತ್ತು ಗಾಳಿಗೆ ಭತ್ತ ಬಹುತೇಕ ನೆಲಕಚ್ಚಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂ. ನಷ್ಟ ಸಂಭವಿಸಿದ್ದು, ಕೂಡಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಸಮಗ್ರವಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಸೂಕ್ತ ಪರಿಹಾರ ನೀಡುವಲ್ಲಿ ಗಮನ ಹರಿಸಬೇಕು ಎಂದರು.
ಭತ್ತದ ಜೊತೆಗೆ ತಾಲೂಕಿನ ತೋಟಗಾರಿಕೆ ಬೆಳೆಗಳಾದ ಬಾಳೆ, ಮೆಣಸಿನಕಾಯಿ, ಅಂಜೂರ, ದಾಳಿಂಬೆ, ಪಪ್ಪಾಯಿ ಸೇರಿದಂತೆ ವಿವಿಧ ಹಣ್ಣಿನ ಬೆಳೆಗಳು
ಹಾಳಾಗಿದ್ದು ಕೂಡಲೇ ಪರಿಹಾರ ನೀಡುವತ್ತ ಸರ್ಕಾರ ಗಮನ ಹರಿಸಬೇಕೆಂದರು. ರೈತ ಸಂಘದ ಮುಖಂಡರಾದ ಕೊಟ್ಟೂರು ರಮೇಶ್, ಮುರಾರಿ,
ವಿಟಿ.ನಾಗರಾಜ, ಮುಖಂಡರಾದ ಕುರಿ ಹುಸೇನಪ್ಪ ಸೇರಿದಂತೆ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.