Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು: ಶಾಸಕ ಜೆ.ಎನ್.ಗಣೇಶ ಭೇಟಿ
Team Udayavani, Nov 12, 2024, 6:39 PM IST
ಕಂಪ್ಲಿ: ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸ.ಹಿ.ಪ್ರಾ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿಯ ತುಂಡುಗಳು ಕಂಡು ಬಂದಿದ್ದು, ಊಟ ಸೇವಿಸಿದ 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಜೆ.ಎನ್.ಗಣೇಶ ಭೇಟಿ ನೀಡಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದರಲ್ಲದೆ, ಗ್ರಾಮಕ್ಕೆ ಹೆಚ್ಚಿನ ವೈದ್ಯರನ್ನು ಕಳುಹಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿ, ನಮ್ಮ ತಾಲೂಕಿನಲ್ಲಿ ಇದುವರೆಗೂ ಇಂತಹ ಘಟನೆಗಳು ಸಂಭವಿಸಿಲ್ಲ. ಇದೊಂದು ವಿಷಾದನೀಯ ಸಂಗತಿಯಾಗಿದ್ದು, ಬಿಸಿಯೂಟ ತಯಾರಕರ ಬೇಜವಬ್ದಾರಿಯಿಂದಾಗಿ ಇಂತಹ ಘಟನೆ ಸಂಭವಿಸಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.