ಕುಡುಕರ ತಾಣವಾದ ಕಂಪ್ಲಿ ಹಳೇ ಬಸ್ ನಿಲ್ದಾಣ
Team Udayavani, Jun 12, 2020, 4:35 PM IST
ಕಂಪ್ಲಿ: ಹಳೇ ಬಸ್ ನಿಲ್ದಾಣ ಆವರಣದ ವಾಣಿಜ್ಯ ಮಳಿಗೆ ಮುಂಭಾಗದಲ್ಲಿ ಮದ್ಯ ಸೇವಿಸುತ್ತಿರುವ ಹಗಲು ಕುಡಕರು.
ಕಂಪ್ಲಿ: ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದ ಪಟ್ಟಣದ ಹಳೇ ಬಸ್ ನಿಲ್ದಾಣ ಆವರಣ ಹಾಗೂ ವಾಣಿಜ್ಯ ಮಳಿಗೆಗಳ ಮುಂಭಾಗ ಕುಡುಕರ ತಾಣವಾಗಿದೆ. ಕುಡುಕರ ಹಾವಳಿಯಿಂದ ಹೂ-ಹಣ್ಣು, ಕಿರಾಣಿ ಸಾಮಾನು ಖರೀದಿಗೆ ಬರುವವರು, ಪ್ರಯಾಣಿಕರು ಹಾಗೂ ಸಾರ್ವಜನಿಕರು ರೋಸಿ ಹೋಗಿದ್ದಾರೆ.
ಪಟ್ಟಣದ ಹಳೇ ಬಸ್ ನಿಲ್ದಾಣ ಆವರಣವನ್ನು ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವ ಹೂ ಮತ್ತು ಹಣ್ಣು ಮಾರಾಟಕ್ಕಾಗಿ ಮೈದಾನವನ್ನು ಅಭಿವೃದ್ಧಿಗೊಳಿಸಿ, ಪಕ್ಕದಲ್ಲಿ ಸಾಲು ವಾಣಿಜ್ಯ ಮಳಿಗೆಗಳನ್ನು ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಇವುಗಳನ್ನು ನಿರ್ಮಿಸಿ ವರ್ಷಗಳೇ ಕಳೆದರೂ ವಾಣಿಜ್ಯ ಮಳಿಗೆಗಳ ಹರಾಜ್ ಹಾಕದೇ ಇರುವುದರಿಂದ ಮತ್ತು ಬೀದಿ ವ್ಯಾಪಾರಿಗಳನ್ನು ಮೈದಾನಕ್ಕೆ ಸ್ಥಳಾಂತರಿಸದೇ ಇರುವುದರಿಂದ ಮಧ್ಯಾಹ್ನವಾದರೆ ಸಾಕು ಕುಡುಕರ ತಾಣವಾಗಿ ಮಾರ್ಪಡುತ್ತದೆ.
ಪಕ್ಕದಲ್ಲಿ ವ್ಯಾಪಾರ ಮಾಡುವ ಬೀದಿ ಬದಿ ವ್ಯಾಪಾರಿಗಳು ಎಷ್ಟೇ ಹೇಳಿದರೂ ಪಕ್ಕದಲ್ಲಿಯೇ ಇರುವ ಎರಡು ಮದ್ಯದದ ಅಂಗಡಿಗಳಿಂದ ಮದ್ಯ ತರುವ ಮದ್ಯಸೇವಕರು ಬಯಲಿನಲ್ಲಿಯೇ ಕುಡಿದು ಇಡೀ ವಾತಾವರಣ ಕಲುಷಿತ ಗೊಳಿಸುತ್ತಿದ್ದಾರೆ. ಮಹಿಳೆಯರು, ಮಕ್ಕಳು ಈ ಪ್ರದೇಶದಲ್ಲಿ ಸಂಚರಿಸಲು ಭಯ ಪಡುತ್ತಿದ್ದಾರೆ. ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ಮಾಡಿ ಎಚ್ಚರಿಸಿದರೂ ಸಹಿತ ಕುಡುಕರು ಮಾತ್ರ ನಿತ್ಯ ಮದ್ಯ ಸೇವನೆ ನಿಲ್ಲಿಸಿಲ್ಲ. ಸ್ವಚ್ಛತೆ ಹಾಗೂ ಸಾರ್ವಜನಿಕರ ಹಿತಕಾಯಬೇಕಿದ್ದ ಪುರಸಭೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತ್ತಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.