ಗೃಹರಕ್ಷಕರ ಸೇವೆ ಅನನ್ಯ: ರಘುಕುಮಾರ್
Team Udayavani, Jun 5, 2020, 3:33 PM IST
ಕಂಪ್ಲಿ: ಗೃಹರಕ್ಷಕ ದಳ ಕಚೇರಿಯಲ್ಲಿ ಸ್ಥಳೀಯ ಗೃಹರಕ್ಷಕರಿಗೆ ಪಟ್ಟಣದ ಪೆಟ್ರೋಲ್ ಬಂಕ್ ಮಾಲೀಕರು ನೀಡಿದ ಆಹಾರ ಧಾನ್ಯ ಕಿಟ್‌ಗಳನ್ನು ಡಿವೈಎಸ್ಪಿ ವಿ. ರಘುಕುಮಾರ್ ವಿತರಿಸಿದರು.
ಕಂಪ್ಲಿ: ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಸಹಿತ ಉತ್ತಮ ಸೇವೆ ನೀಡುತ್ತಿರುವ ಗೃಹರಕ್ಷಕ ದಳದ ಸಿಬ್ಬಂದಿ ಕಾಯಂ ವೇನತವಿಲ್ಲದಿದ್ದರೂ ಸಹಿತ ಉತ್ತಮ ಸೇವೆ ನೀಡುತ್ತಿದ್ದಾರೆಂದು ಹೊಸಪೇಟೆ ಉಪ ವಿಭಾಗದ ಡಿವೈಎಸ್ಪಿ ವಿ. ರಘುಕುಮಾರ್ ತಿಳಿಸಿದರು.
ಅವರು ಪಟ್ಟಣದ ಗೃಹರಕ್ಷಕದಳದ ಕಚೇರಿಯಲ್ಲಿ ಗೃಹರಕ್ಷಕರಿಗೆ ಸ್ಥಳೀಯ ಪೆಟ್ರೋಲ್ ಬಂಕ್ ಮಾಲೀಕರು ಸ್ಥಳಿಯ 90 ಗೃಹರಕ್ಷಕರಿಗೆ ನೀಡಿದ ಆಹಾರ ಧಾನ್ಯ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು. ಕಳೆದ 60 ದಿನಗಳಿಂದ ಆವರಿಸಿಕೊಂಡಿರುವ ಮಹಾಮಾರಿ ಕೋವಿಡ್ ವೈರಸ್ ವಿರುದ್ಧ ಹೋರಾಡುತ್ತಿರುವ ವಾರಿಯರ್ಗಳಲ್ಲಿ ಗೃಹರಕ್ಷಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು ಅವರಿಗೆ ಸರ್ಕಾರದ ಕಾಯಂ ವೇತನ ಇಲ್ಲದಿದ್ದರೂ ಸಹಿತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗೌರವಧನಕ್ಕೆ ಕಾರ್ಯನಿರ್ವಹಿಸುತ್ತಿದ್ದು, ಅವರ ಸೇವೆಯನ್ನು ಗುರುತಿಸಿ ಕಂಪ್ಲಿ ಪಟ್ಟಣದ ಪೆಟ್ರೋಲ್ ಬಂಕ್ ಮಾಲೀಕರು ಸುಮಾರು 90 ಗೃಹರಕ್ಷಕರಿಗೆ ದಿನನಿತ್ಯದ ಆಹಾರ ಧಾನ್ಯಗಳ ಕಿಟ್ ವಿತರಿಸಿರುವುದು ಶ್ಲಾಘನೀಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಪಿ.ಬ್ರಹ್ಮಯ್ಯ, ಸದಸ್ಯರಾದ ಡಾ| ವಿ.ಎಲ್. ಬಾಬು, ಪೆಟ್ರೋಲ್ ಬಂಕ್ ಮಾಲೀಕರಾದ ವಾಲಿಕೊಟ್ರಪ್ಪ ಮಾತನಾಡಿದರು. ನಂತರ 90 ಜನ ಗೃಹರಕ್ಷಕರಿಗೆ ಆಹಾರ ಧಾನ್ಯ ಕಿಟ್‌ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಹೊಸಪೇಟೆ ಘಟಕಾಧಿಕಾರಿ ಎಸ್. ಎನ್. ಗೀರೀಶ್, ಕಂಪ್ಲಿ ಘಟಕಾ ಧಿಕಾರಿ ಮೋಹನ್‌ಮೂರ್ತಿ, ಪೆಟ್ರೋಲ್ ಬಂಕ್ ಮಾಲೀಕರಾದ ರಮೇಶ್ ಬಬಲೇಶ್ವರ, ಕೆ.ಬಿ. ಮಂಜುನಾಥ್, ಕೃಷ್ಣ ಎಸ್. ಪೋಳ್, ಕೋಟೆ ರಾಜಶೇಖರ್, ಎನ್. ಪುರುಷೋತ್ತಮ, ಕೊಡಿದಲ್ ರಾಜು, ವಾಲಿ ಗುರು, ಎಸ್. ಪುಲ್ಲಾರೆಡ್ಡಿ, ಆರ್. ಇಮಾಮ್ ಸಾಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.