ನಾಲ್ಕು ಕೇಂದ್ರಗಳಲ್ಲಿ ಸಕಲ ಸಿದ್ಧತೆ
Team Udayavani, Jun 24, 2020, 4:20 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಂಪ್ಲಿ: ಪಟ್ಟಣದಲ್ಲಿ ಮೂರು ಹಾಗೂ ಎಮ್ಮಿಗನೂರು ಗ್ರಾಮದಲ್ಲಿ ಒಂದು ಸೇರಿದಂತೆ ನಾಲ್ಕು ಕೇಂದ್ರಗಳಲ್ಲಿ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಸುಗಮ ಹಾಗೂ ಶಾಂತಿಯುತ ಪರೀಕ್ಷೆಗೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸಪೇಟೆ ಬಿಇಒ ಎಲ್.ಡಿ. ಜೋಷಿ ತಿಳಿಸಿದರು.
ಅವರು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗಾಗಿ ಥರ್ಮಲ್ ಸ್ಕ್ರೀನ್, ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ವಿತರಣೆ ಮಾಡಿ ಮಾತನಾಡಿದರು. ಪಟ್ಟಣದ ಬಾಲಕೀಯರ ಸರ್ಕಾರಿ ಪ್ರೌಢಶಾಲೆಯಲ್ಲಿ 491 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ 25 ಹಾಗೂ ಹೆಚ್ಚುವರಿಯಾಗಿ ಎರಡು ಕೊಠಡಿಗಳನ್ನು, ಷಾಮಿಯಾಚಂದ್ ಸರ್ಕಾರಿ ಪ್ರೌಢಶಾಲೆಯಲ್ಲಿ 537 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇವರಿಗಾಗಿ 27 ಹಾಗೂ ಹೆಚ್ಚುವರಿಯಾಗಿ 2
ಮತ್ತು ಕಂಪ್ಲಿ ಫಿರ್ಕಾ ವೀರಶೈವ ಸಂಘದ ಓದ್ಸೋ ಜಡೆಮ್ಮ ಪ್ರೌಢಶಾಲೆಯಲ್ಲಿ 431 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಿಗಾಗಿ 22 ಹಾಗೂ ಹೆಚ್ಚುವರಿಯಾಗಿ 2 ಕೊಠಡಿಗಳನ್ನು, ಎಮ್ಮಿಗನೂರು ಸರ್ಕಾರಿ ಪ್ರೌಢಶಾಲೆಯಲ್ಲಿ 345 ಹಾಗೂ 11 ವಲಸೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇವರಿಗಾಗಿ 17 ಹಾಗೂ 3 ಹೆಚ್ಚುವರಿ ಕೊಠಡಿಗಳನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆಗಳನ್ನು ಹಾಕಲಾಗುತ್ತಿದೆ ಎಂದರು.
ಪರೀಕ್ಷಾ ಕೇಂದ್ರಗಳ ಅಧೀಕ್ಷಕಿ ಎಚ್. ಶಕುಂತಲಮ್ಮ, ಡಾ| ಅಕ್ಕಮಹಾದೇವಿ ಆರ್‌ಎಸ್ ಮತ್ತು ಎಸ್.ಜಿ. ಚಿತ್ರಗಾರ, ಎಮ್ಮಿಗನೂರಿನ ಲಿಂಗರಾಜ್ ಆರ್, ಸಿಆರ್‌ಪಿಗಳು, ವಿವಿಧ ಶಾಲೆಗಳ ಮುಖ್ಯಗುರುಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.